ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ವಿಪಕ್ಷಗಳ ಮೈತ್ರಿಗೆ ಬೆಂಬಲ; ಅಖಿಲೇಶ್ ಯಾದವ್

Date:

  • ಅಖಿಲೇಶ್‌ರನ್ನು ಲಖನೌದಲ್ಲಿ ಭೇಟಿಯಾದ ನಿತೀಶ್ ಕುಮಾರ್, ತೇಜಸ್ವಿ ಯಾದವ್‌
  • ಇದಕ್ಕೂ ಮುನ್ನ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿಯಾಗಿದ್ದ ನಾಯಕರು

2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ಪ್ರತಿಪಕ್ಷಗಳ ಒಗ್ಗಟ್ಟನ್ನು ಬಲಪಡಿಸುವ ಪ್ರಯತ್ನದ ಭಾಗವಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭೇಟಿ ನಂತರ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಅವರ ಮೈತ್ರಿ ಪಕ್ಷದ ಡಿಸಿಎಂ ತೇಜಸ್ವಿ ಯಾದವ್ ಅವರು ಸೋಮವಾರ ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಭೇಟಿಯಾದರು.

“ನಾವು ಹೆಚ್ಚಿನ ರಾಜಕೀಯ ಪಕ್ಷಗಳನ್ನು ಒಗ್ಗೂಡಿಸುತ್ತೇವೆ ಮತ್ತು ಪಕ್ಷದ ನಾಯಕರೊಂದಿಗೆ ಉತ್ತಮ ಚರ್ಚೆಗಳನ್ನು ನಡೆಸಿದ್ದೇವೆ. ಎಲ್ಲರನ್ನೂ ಒಂದು ಗೂಡಿಸುವ ಕೆಲಸ ಮಾಡುತ್ತಿದ್ದು ಮುಂದಿನ ದಿನಗಳಲ್ಲಿ ನಾವು ಉತ್ತಮ ಫಲಿತಾಂಶಗಳನ್ನು ಪಡೆಯುತ್ತೇವೆ. ದೇಶಕ್ಕೆ ತೊಂದರೆ ನೀಡುತ್ತಿರುವವರು ಏನನ್ನು ಸಾಧಿಸಲು ಸಾಧ್ಯವಿಲ್ಲ”ಎಂದು ಲಖನೌದಲ್ಲಿ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಹಾರದ ಡಿಸಿಎಂ ತೇಜಸ್ವಿ ಯಾದವ್‌ ಅವರು ಜಂಟಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅಖಿಲೇಶ್ ಯಾದವ್, “ತಾವು ಕೂಡ ವಿವಿಧ ರಾಜಕೀಯ ಪಕ್ಷಗಳೊಂದಿಗೆ ಸಂಪರ್ಕದಲ್ಲಿದ್ದು, ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವ ಅಭಿಯಾನದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿರುತ್ತದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ನಿತೀಶ್, ತೇಜಸ್ವಿ ಭೇಟಿ ಮಾಡಿದ ಮಮತಾ ಬ್ಯಾನರ್ಜಿ; ಬಿಜೆಪಿ ವಿರುದ್ಧ ಮೈತ್ರಿಗೆ ಕರೆ

ಇದಕ್ಕೂ ಮುನ್ನ ಕೋಲ್ಕತ್ತಾದಲ್ಲಿ ಬಿಹಾರದ ಇಬ್ಬರೂ ನಾಯಕರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದರು.

“ಮುಂಬರುವ ಸಂಸತ್ತಿನ ಚುನಾವಣೆಗೆ ಮುನ್ನ ಎಲ್ಲಾ ಪಕ್ಷಗಳ ಒಗ್ಗೂಡಿಸುವ ಸಿದ್ಧತೆ ಬಗ್ಗೆ ನಾವು ಮಾತುಕತೆ ನಡೆಸಿದ್ದೇವೆ. ದೇಶದ ಹಿತಾಸಕ್ತಿಗೆ ಏನು ಮಾಡಬೇಕೋ ಅದನ್ನು ಮಾಡುತ್ತಿದ್ದೇವೆ. ಈಗ ಆಡಳಿತ ನಡೆಸುತ್ತಿರುವವರಿಗೆ ಮಾಡಲು ಏನೂ ಉಳಿದಿಲ್ಲ. ಅಭಿವೃದ್ಧಿ ಮಾಡುವುದನ್ನು ಬಿಟ್ಟು ಕೇವಲ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ” ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

“ಜಯಪ್ರಕಾಶ ನಾರಾಯಣ್‌ ಅವರ ಚಳವಳಿ ಬಿಹಾರದಿಂದ ಪ್ರಾರಂಭವಾಯಿತು. ನಾವು ಬಿಹಾರದಲ್ಲಿ ಸರ್ವಪಕ್ಷ ಸಭೆ ನಡೆಸಿದರೆ, ನಾವು ಮುಂದೆ ಎಲ್ಲಿಗೆ ಹೋಗಬೇಕು ಎಂದು ನಿರ್ಧರಿಸಬಹುದು. ಆದರೆ ಎಲ್ಲಕ್ಕಿಂತ ಮೊದಲು ನಾವು ಒಗ್ಗಟ್ಟಾಗಿದ್ದೇವೆ ಎಂಬ ಸಂದೇಶವನ್ನು ನೀಡಬೇಕು. ಇದಕ್ಕೆ ನನ್ನ ಅಭ್ಯಂತರವಿಲ್ಲ ಎಂದು ಮೊದಲೇ ಹೇಳಿದ್ದೆ. ನನ್ನ ಮುಖ್ಯ ಉದ್ದೇಶ ಬಿಜೆಪಿ ನಿರ್ಮೂಲನೆಗೊಳಿಸುವುದು. ಮಾಧ್ಯಮಗಳ ಬೆಂಬಲ ಮತ್ತು ಸುಳ್ಳುಗಳಿಂದ ನರೇಂದ್ರ ಮೋದಿ ಅವರು ದೊಡ್ಡ ನಾಯಕ ಆಗಿದ್ದಾರೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಕ್ರೋಶ ವ್ಯಕ್ತಪಡಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಪೆನ್‌ಡ್ರೈವ್‌ | ಪ್ರಜ್ವಲ್ ರೇವಣ್ಣ ದೇಶಬಿಟ್ಟು ಓಡಿ ಹೋಗಲು ಮೋದಿ ಸಹಾಯ ಮಾಡಿದರಾ?; ರಾಷ್ಟ್ರಮಟ್ಟದಲ್ಲಿ ಆಕ್ರೋಶ

ಹಾಸನ ಪೆನ್‌ಡ್ರೈವ್‌ ಪ್ರಕರಣವು ರಾಜ್ಯದಲ್ಲಿ ಆತಂಕ ಸೃಷ್ಟಿಸಿದೆ. ಪ್ರಕರಣವನ್ನು ಎಸ್‌ಐಟಿ ತನಿಖೆಗೆ...

ಮೋದಿ ಹೇಳಿಕೆ ಟೀಕಿಸಿದ ಬಿಜೆಪಿಯ ಬಿಕಾನೇರ್ ಅಲ್ಪಸಂಖ್ಯಾತ ವಿಭಾಗದ ಮಾಜಿ ಅಧ್ಯಕ್ಷರ ಬಂಧನ!

ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದ ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಸ್ಲಿಮರ...

ಮೀಸಲಾತಿ ರದ್ದು ಮಾಡುವುದೇ ಬಿಜೆಪಿ ಗುರಿ; ಅದರ ನಾಯಕರ ಹೇಳಿಕೆಗಳಿಂದಲೇ ಸ್ಪಷ್ಟ: ರಾಹುಲ್ ಗಾಂಧಿ

ಸಂವಿಧಾನವನ್ನು ಬದಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ನಾಶಪಡಿಸುವುದು ಮತ್ತು ದಲಿತರು, ಹಿಂದುಳಿದ ವರ್ಗಗಳು...

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....