ಮಲಯಾಳಂ ಕಡ್ಡಾಯ ಮಸೂದೆ ತಕ್ಷಣ ಹಿಂಪಡೆಯಿರಿ: ಕೇರಳ ಸಿಎಂ ಪಿಣರಾಯಿಗೆ ಸಿದ್ದರಾಮಯ್ಯ ಆಗ್ರಹ

Date:

ಕೇರಳ ಸರ್ಕಾರದ ಮಲಯಾಳಂ ಕಡ್ಡಾಯ ಮಸೂದೆಗೆ ಕರ್ನಾಟಕ ಗಡಿ ನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಹೆಚ್ಚಾಗಿ ಕನ್ನಡ ಮಾತನಾಡುವವರೇ ಇರುವ ಕಾಸರಗೋಡು ಜಿಲ್ಲೆಯ ಜನರು ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ ಎಂದು ಆರೋಪಿಸಲಾಗುತ್ತಿದೆ. ಈ ಹಿನ್ನೆಲೆ ಮಲಯಾಳಂ ಕಡ್ಡಾಯ ಮಸೂದೆ ತಕ್ಷಣ ಹಿಂಪಡೆಯುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ, “ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಲಿಕೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಪ್ರಸ್ತಾಪಿತ ಮಲಯಾಳಂ ಭಾಷಾ ಮಸೂದೆ-2025 ಸಂವಿಧಾನ ಖಾತರಿ ಮಾಡಿರುವ ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರವಾಗಿದೆ ಎಂದು ಹೇಳಲು ವಿಷಾಧಿಸುತ್ತೇನೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯುಪಿ ಚುನಾವಣೆ: ಆಡಳಿತ ಯಂತ್ರ, ಜಾತಿ ಸಮೀಕರಣ ಮತ್ತು...

2027ರ ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಮತದಾರರ ಪಟ್ಟಿಯಲ್ಲಿನ ಲಿಂಗ ಅಂತರ, ಜಾತಿ ಸಮೀಕರಣ ಹಾಗೂ ಮೈತ್ರಿ ಪಕ್ಷಗಳ ಸೀಟು ಹಂಚಿಕೆಯ ಚೌಕಾಸಿ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿವೆ. ಸಾಮಾಜಿಕ ನ್ಯಾಯದ ಹೆಸರಿನಲ್ಲಿ ನಡೆಯುತ್ತಿರುವ...

ಯುಪಿ ಚುನಾವಣೆ | ಯುದ್ಧಕ್ಕೆ ಮೊದಲೇ ಉಡುಗಿ ಹೋಯಿತೇ...

ಉತ್ತರ ಪ್ರದೇಶದಲ್ಲಿ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಗಾಲೋಟಕ್ಕೆ ಬ್ರೇಕ್ ಹಾಕಿ ದೇಶದ ರಾಜಕಾರಣದಲ್ಲೇ ಸಂಚಲನ ಮೂಡಿಸಿತ್ತು ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ. ಆದರೀಗ, 2027ರ ಉತ್ತರ ಪ್ರದೇಶ ವಿಧಾನಸಭಾ...

ಬಂಡವಾಳಶಾಹಿಯ ನಾಲ್ಕು ಕಟ್ಟುಕಥೆಗಳು ಮತ್ತು ನಮ್ಮ ಬದುಕಿನ ಬೆಲೆ

ನಮ್ಮ ಸುತ್ತಮುತ್ತಲಿನ ಪ್ರಪಂಚವನ್ನು ಒಮ್ಮೆ ಗಮನಿಸಿ ನೋಡಿ. ಒಂದು ಕಡೆ, 2025ರ ಒಂದೇ ವರ್ಷದಲ್ಲಿ ಜಗತ್ತಿನ ಅತ್ಯಂತ ಶ್ರೀಮಂತ 500 ವ್ಯಕ್ತಿಗಳ ಸಂಪತ್ತು ಸುಮಾರು 2.2 ಟ್ರಿಲಿಯನ್ ಡಾಲರ್‌ಗಳಷ್ಟು ಹೆಚ್ಚಾಗಿದೆ. ಇನ್ನೊಂದು ಕಡೆ,...

ಇದನ್ನು ಓದಿದ್ದೀರಾ? ಮಲಯಾಳಂ ಕಡ್ಡಾಯ ಮಸೂದೆ ಮರುಪರಿಶೀಲಿಸುತ್ತೇವೆ: ಕರ್ನಾಟಕ ಗಡಿ ಪ್ರಾಧಿಕಾರಕ್ಕೆ ಕೇರಳ ರಾಜ್ಯಪಾಲರ ಭರವಸೆ

“ಇಂತಹದ್ದೊಂದು ಕಾನೂನು ಜಾರಿಗೆ ಬಂದರೆ ಕೇರಳದ ಗಡಿಜಿಲ್ಲೆಗಳಲ್ಲಿ ಮುಖ್ಯವಾಗಿ ಕಾಸರಗೋಡಿನಲ್ಲಿ ವಾಸಿಸುತ್ತಿರುವ ಕನ್ನಡಿಗರು ಮಾತೃಭಾಷೆಯನ್ನು ಕಲಿಯುವ ಅವಕಾಶದಿಂದ ವಂಚಿತರಾಗಲಿದ್ದಾರೆ. ಭಾಷಾ ಅಲ್ಪಸಂಖ್ಯಾತರ ಮೂಲಭೂತ ಹಕ್ಕನ್ನು ದಮನ ಮಾಡುವ ಇಂತಹ ನಡೆಯನ್ನು ಕೇರಳದ ಕಮ್ಯುನಿಸ್ಟ್ ಸರ್ಕಾರದಿಂದ ನಾವು ನಿರೀಕ್ಷಿಸಿರಲಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಕಾಸರಗೋಡು ಇಂದು ಆಡಳಿತಾತ್ಮಕವಾಗಿ ಕೇರಳ ರಾಜ್ಯಕ್ಕೆ ಸೇರಿದ್ದರೂ ಅದು ಭಾವನಾತ್ಮಕವಾಗಿ ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಅಲ್ಲಿನ ಜನ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯದ ಜೊತೆ ಮಿಳಿತವಾಗಿದ್ದಾರೆ. ಅವರು ಕರ್ನಾಟಕದ ಕನ್ನಡಿಗರಿಗಿಂತ ಕಡಿಮೆ ಕನ್ನಡಿಗರೇನಲ್ಲ. ಅವರ ಹಿತವನ್ನು ರಕ್ಷಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಕಾಣುವ ಭಾರತದ ಪ್ರತಿಯೊಬ್ಬ ಪ್ರಜೆಗೂ ಅವರ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯ ಇದೆ” ಎಂದಿದ್ದಾರೆ.

“ಈ ಹಿನ್ನೆಲೆಯಲ್ಲಿ ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲಯಾಳಂ ಭಾಷಾ ಮಸೂದೆ-2025 ಅನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರನ್ನು ಆಗ್ರಹಿಸುತ್ತೇನೆ” ಎಂದು ಪೋಸ್ಟ್ ಮಾಡಿದ್ದಾರೆ.

“ಭಾಷಾ ಅಲ್ಪಸಂಖ್ಯಾತರಿಗೆ ಮಾತೃಭಾಷೆ ಎನ್ನುವುದು ಕೇವಲ ಭಾಷೆ ಅಲ್ಲ, ಅದು ಅವರಿಗೆ ಘನತೆಯ ಬದುಕು ನೀಡುವ ಅಸ್ಮಿತೆಯಾಗಿರುತ್ತದೆ. ಮಾತೃಭಾಷೆಯಲ್ಲಿ ಕಲಿಯುವ ಮಕ್ಕಳು ಸುಲಭದಲ್ಲಿ ವಿಷಯಗಳನ್ನು ಗ್ರಹಿಸುತ್ತಾರೆ ಎನ್ನುವದು ವೈಜ್ಞಾನಿಕವಾಗಿ ಸಾಬೀತಾಗಿದೆ. ಅವರ ಮೇಲೆ ಅನ್ಯಭಾಷೆಯನ್ನು ಹೇರುವುದರಿಂದ ಅವರ ಕಲಿಕಾ ಸಾಮರ್ಥ್ಯವನ್ನು ಕುಂದಿಸುವುದು ಮಾತ್ರವಲ್ಲ, ಒಂದು ಸ್ವತಂತ್ರ ಭಾಷೆಯ ಅವಸಾನಕ್ಕೆ ದಾರಿ ಮಾಡಿಕೊಟ್ಟ ಹಾಗಾಗುತ್ತದೆ” ಎಂದು ಅಭಿಪ್ರಾಯಿಸಿದ್ದಾರೆ.

“ಕಾಸರಗೋಡಿನ ಜನ ಹಲವು ತಲೆಮಾರುಗಳಿಂದ ಕನ್ನಡ ಮಾಧ್ಯಮದಲ್ಲಿ ಓದಿದ್ದಾರೆ, ನಿತ್ಯದ ಬದುಕಿನಲ್ಲಿ ಕನ್ನಡವನ್ನು ನಿರಂತರವಾಗಿ ಬಳಸುತ್ತಾ ಬಂದಿದ್ದಾರೆ. ಕಾಸರಗೋಡು ಜಿಲ್ಲೆಯ ಶೇಕಡಾ 70ರಷ್ಟು ವಿದ್ಯಾರ್ಥಿಗಳು ಕನ್ನಡ ಭಾಷೆಯನ್ನು ಮತ್ತು ಕನ್ನಡ ಮಾಧ್ಯಮದಲ್ಲಿಯೇ ಕಲಿಯುವುದನ್ನು ಬಯಸುತ್ತಾರೆ ಎಂಬುದು ಅಲ್ಲಿನ ಕನ್ನಡಿಗರ ಒಕ್ಕೊರಲ ಅಭಿಪ್ರಾಯವಾಗಿದೆ. ಯಾವುದೇ ಒಂದು ಭಾಷೆ ಮತ್ತೊಂದು ಭಾಷೆಯ ವಿರುದ್ಧವಾಗಿ ಇರುವುದಿಲ್ಲ. ಭಾರತ ಬಹುಭಾಷೆ, ಬಹುಸಂಸ್ಕೃತಿ ಮತ್ತು ಬಹುಧರ್ಮದ ತೊಟ್ಟಿಲಾಗಿದೆ. ಈ ಬಹುತ್ವದ ವಾತಾವರಣಕ್ಕೆ ಧಕ್ಕೆ ಉಂಟು ಮಾಡುವ ಪ್ರಯತ್ನ ಅಪಾಯಕಾರಿಯಾಗಿದೆ” ಎಂದು ಹೇಳಿದ್ದಾರೆ.

“ಭಾಷೆಯೂ ಸೇರಿದಂತೆ ಅಲ್ಪಸಂಖ್ಯಾತರ ಹಿತರಕ್ಷಣೆಯ ವಿಚಾರದಲ್ಲಿ ನಾವೆಲ್ಲರೂ ಗೌರವಿಸುವ ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಸಂವಿಧಾನದ 29 ಮತ್ತು 30ನೇ ಪರಿಚ‍್ಛೇದಗಳು ದೇಶದ ಯಾವುದೇ ಭಾಗದಲ್ಲಿ ವಾಸಿಸುತ್ತಿರುವವರಿಗೆ ತಮ್ಮ ಭಾಷೆ, ಲಿಪಿ ಮತ್ತು ಸಂಸ್ಕೃತಿ ರಕ್ಷಿಸಿಕೊಳ್ಳುವ ಹಕ್ಕನ್ನು ನೀಡಿದೆ. ಅವರಿಗೆ ತಮ್ಮ ಆಯ್ಕೆಯ ಶೈಕ್ಷಣಿಕ ಸಂಸ್ಥೆಗಳನ್ನು ಸ್ಥಾಪಿಸಿ ನಡೆಸುವ ಹಕ್ಕನ್ನೂ ನೀಡುತ್ತದೆ. ಸಂವಿಧಾನದ 350 (ಎ) ಪ್ರಾಥಮಿಕ ಹಂತದಲ್ಲಿ ಮಾತೃಭಾಷೆಯಲ್ಲಿ ಕಲಿಯುವ ಸ್ವಾತಂತ್ರ್ಯವನ್ನು ನೀಡಿದೆ. ಸಂವಿಧಾನದ 350(ಬಿ) ಅಲ್ಪಸಂಖ್ಯಾತರ ರಕ್ಷಣೆಯ ಖಾತರಿಯನ್ನು ನೀಡಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಸರ್ಕಾರ ಅಲ್ಪಸಂಖ್ಯಾತರ ಭಾಷಾ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ಮಾಡಬಾರದು” ಎಂದು ತಿಳಿಸಿದ್ದಾರೆ.

“ಕರ್ನಾಟಕದಲ್ಲಿ ನಾವು ಕನ್ನಡ ಭಾಷೆಯನ್ನು ಪೊರೆಯುವ ಕೆಲಸ ಮಾಡಿದ ಹಾಗೆ, ಕೇರಳ ರಾಜ್ಯದಲ್ಲಿ ಮಲಯಾಳಂ ಭಾಷೆಯನ್ನು ಬೆಳೆಸುವ ಮತ್ತು ಉಳಿಸುವ ಸರ್ವ ಸ್ವಾತಂತ್ರ್ಯ ಅಲ್ಲಿನ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಒಂದು ಭಾಷೆಯ ಮೇಲೆ ಇನ್ನೊಂದು ಭಾಷೆಯನ್ನು ಹೇರುವ ಪ್ರಯತ್ನ ಸಲ್ಲದು” ಎಂದಿದ್ದಾರೆ.

“ಕೇರಳ ಸರ್ಕಾರ ಈ ಮಸೂದೆಯನ್ನು ಜಾರಿಗೊಳಿಸಲು ಹೊರಟರೆ ಕನ್ನಡಿಗರು ಇದನ್ನು ಒಕ್ಕೊರಲಿನಿಂದ ವಿರೋಧಿಸಲಿದ್ದಾರೆ. ಕಾಸರಗೋಡಿನ ಕನ್ನಡಿಗರ ಜೊತೆಯಲ್ಲಿ ನಿಂತು ಅವರ ಭಾಷಾ ಸ್ವಾತಂತ್ರ್ಯದ ರಕ್ಷಣೆಗೆ ಸರ್ವರೀತಿಯ ಬೆಂಬಲವನ್ನು ನೀಡಲಿದ್ದಾರೆ” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಕೀಯ ಅಥವಾ ವೈಯಕ್ತಿಕ ಲಾಭಕ್ಕಾಗಿ ಸಂಸ್ಥೆಗಳ ಮೇಲೆ ದಾಳಿ ಸಲ್ಲದು: ಮುಖ್ಯ ನ್ಯಾ. ಸೂರ್ಯಕಾಂತ್

ಸಾಂವಿಧಾನಿಕ ಪ್ರಕ್ರಿಯೆಗಳಿಗೆ ಪ್ರತಿಯೊಬ್ಬರೂ ಗೌರವ ನೀಡಬೇಕು ಮತ್ತು ಯಾವುದೇ ನಿರ್ದಿಷ್ಟ ಸಂದರ್ಭದಲ್ಲಿ...

ನೇಪಾಳ ಭೀಕರ ಪ್ರವಾಹಕ್ಕೆ 3 ತಿಂಗಳು: ನಾಪತ್ತೆಯಾಗಿದ್ದ 213 ಭಾರತೀಯರನ್ನು ಮೃತರೆಂದು ಘೋಷಿಸಲು ಪ್ರಕ್ರಿಯೆ ಆರಂಭ

ಕಳೆದ ಆಗಸ್ಟ್ ತಿಂಗಳಲ್ಲಿ ನೇಪಾಳದ ತ್ರಿಶೂಲಿ-ಭೋಟೆ ಕೋಶಿ ನದಿ ಪ್ರದೇಶದಲ್ಲಿ ಸಂಭವಿಸಿದ...

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್; ಆರೋಪಿಯಲ್ಲ ಈಗ ಸಾಕ್ಷಿ

ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ...

ನಿಕೋಬಾರ್ ಅರಣ್ಯ ಹಕ್ಕು ವಿವಾದ: ಪ್ರಮಾಣಪತ್ರ ಸಲ್ಲಿಸಲು ಕೇಂದ್ರಕ್ಕೆ ಡಿ.10ರವರೆಗೆ ಗಡುವು

ಗ್ರೇಟ್ ನಿಕೋಬಾರ್ ಯೋಜನೆಗಾಗಿ 166 ಚದರ ಕಿಲೋಮೀಟರ್ ಅರಣ್ಯ ಭೂಮಿಯನ್ನು ವರ್ಗಾಯಿಸಲು...