ಕಾಂಗ್ರೆಸ್ ಇರದಿದ್ದರೆ ಸ್ವಾತಂತ್ರ್ಯವೇ ಸಿಗುತ್ತಿರಲಿಲ್ಲ: ಬಿಜೆಪಿಗೆ ಶಿವಸೇನೆ ನಾಯಕ ಸಂಜಯ್ ರಾವುತ್ ತಿರುಗೇಟು

Date:

ಈ ದೇಶಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆಯನ್ನು ಹಾಡಿಹೊಗಳಿದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣದ ನಾಯಕ ಸಂಜಯ್ ರಾವುತ್, “ಕಾಂಗ್ರೆಸ್ ನಾಯಕತ್ವ ಇರದಿದ್ದರೆ ನಮ್ಮ ದೇಶಕ್ಕೆ ಸ್ವಾತಂತ್ರ್ಯವೇ ಸಿಗುತ್ತಿರಲಿಲ್ಲ. ದೇಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಇಷ್ಟೊಂದು ಪ್ರಗತಿ ಸಾಧಿಸುತ್ತಿರಲಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

- Advertisement -

ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್‌ನ ಭಾರತ್ ಜೋಡೋ ನ್ಯಾಯ ಯಾತ್ರೆಯು ಕೊನೆಯಾಗುತ್ತಿರುವ ಸಂದರ್ಭದಲ್ಲೇ ಬಿಜೆಪಿಯು “ಕಾಂಗ್ರೆಸ್ ನಹಿ ಹೋತಿ ತೊ ಕ್ಯಾ ಹೋತಾ” (ಕಾಂಗ್ರೆಸ್ ಇರದಿದ್ದರೆ ಏನಾಗುತ್ತಿತ್ತು) ಎಂಬ ಶೀರ್ಷಿಕೆಯ ಪುಸ್ತಕವನ್ನು ಬಿಡುಗಡೆ ಮಾಡುತ್ತಿದೆ. ಈ ಪುಸ್ತಕದ ಬಗ್ಗೆ ಶಿವಸೇನೆ ನಾಯಕ ಸಂಜಯ್ ರಾವುತ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ನಮ್ಮ ದೇಶದಲ್ಲಿ ಕಾಂಗ್ರೆಸ್ ಇರದಿದ್ದರೆ ದೇಶಕ್ಕೆ ಸ್ವಾತಂತ್ರ್ಯವೇ ಲಭಿಸುತ್ತಿರಲಿಲ್ಲ, ದೇಶಕ್ಕೆ ಒಂದು ನಾಯಕತ್ವವೇ ಇರುತ್ತಿರಲಿಲ್ಲ. ನಾವು ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಇಷ್ಟೊಂದು ಪ್ರಗತಿ ಸಾಧಿಸಲು ಸಾಧ್ಯವಾಗುತ್ತಿರಲಿಲ್ಲ. ಇಂತಹ ಹಲವಾರು ವಿಚಾರಗಳು ಇದೆ. ಆದರೆ ಇವೆಲ್ಲವೂ ಬಿಜೆಪಿಗೆ ಅರ್ಥವಾಗುವುದಿಲ್ಲ. ಯಾಕೆಂದರೆ ಬಿಜೆಪಿ ಪಕ್ಷದವರು ದೇಶದ ಬಗ್ಗೆ ಆಲೋಚಿಸುವುದಿಲ್ಲ, ಅವರು ಬರೀ ಉದ್ಯಮಿಗಳ ಬಗ್ಗೆ ಮಾತ್ರ ಆಲೋಚಿಸುತ್ತಾರೆ” ಎಂದು ಬಿಜೆಪಿ ವಿರುದ್ಧ ರಾವುತ್ ವಾಗ್ದಾಳಿ ನಡೆಸಿದ್ದಾರೆ.

“ಕಾಂಗ್ರೆಸ್ ಇಲ್ಲದಿದ್ದರೆ ಪಾಕಿಸ್ತಾನ ವಿಭಜನೆಯಾಗುತ್ತಿರಲಿಲ್ಲ. ನಮ್ಮ ದೇಶವು ಏಕತೆಯಿಂದ ಇರುತ್ತಿರಲಿಲ್ಲ” ಎಂದ ರಾವುತ್, “ಬಿಜೆಪಿ ಈ ದೇಶವನ್ನು ಬಡ ದೇಶವನ್ನಾಗಿಸುತ್ತಿದೆ” ಎಂದು ಆರೋಪಿಸಿದರು.

ಇದನ್ನು ಓದಿದ್ದೀರಾ? ಮಹಾರಾಷ್ಟ್ರದ ಶಿಂಧೆ ಸರ್ಕಾರ 15 ದಿನದಲ್ಲಿ ಪತನ: ಸಂಜಯ್‌ ರಾವುತ್

“ನಮ್ಮ ದೇಶದಲ್ಲಿ ಬಿಜೆಪಿ ಇರದಿದ್ದರೆ ನಮ್ಮ ದೇಶದಲ್ಲಿ ಇಂತಹ ತೊಂದರೆಗಳು ಇರುತ್ತಿರಲಿಲ್ಲ. ನಮ್ಮ ದೇಶದಲ್ಲಿ ಗಲಭೆಗಳು ಆಗುತ್ತಿರಲಿಲ್ಲ. ನಮ್ಮ ದೇಶದ ರೂಪಾಯಿ ಮೌಲ್ಯವು ಕುಸಿಯುತ್ತಿರಲಿಲ್ಲ. ಸಾಲವೂ ಕೂಡಾ ಕಡಿಮೆ ಇರುತ್ತಿತ್ತು. ರಫೇಲ್‌ನಿಂದ ಹಿಡಿದು ಚುನಾವಣಾ ಬಾಂಡ್‌ವೆರೆಗಿನ ಹಗರಣಗಳು ಇರುತ್ತಿರಲಿಲ್ಲ” ಎಂದು ಬಿಜೆಪಿಗೆ ಶಿವಸೇನೆ ನಾಯಕ ತಿರುಗೇಟು ನೀಡಿದ್ದಾರೆ.

ಇನ್ನು ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ನಟಿ ಸ್ವರಾ ಭಾಸ್ಕರ್ ಮುಂಬೈನಲ್ಲಿ ಭಾನುವಾರ ನ್ಯಾಯ ಸಂಕಲ್ಪ ಪಾದಯಾತ್ರೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....