ಆರ್‌ಎಸ್‌ಎಸ್‌ ಇಲ್ಲ ಅಂದ್ರೆ ಬಿಜೆಪಿ ಶೂನ್ಯ: ಡಿಸಿಎಂ ಡಿ.ಕೆ ಶಿವಕುಮಾರ್

Date:

ಆರ್‌ಎಸ್‌ಎಸ್‌ ಇಲ್ಲದೇ ಇದ್ದರೆ ಬಿಜೆಪಿ ಶೂನ್ಯ. ಆರ್‌ಎಸ್‌ಎಸ್‌ನಿಂದಲೇ ಬಿಜೆಪಿ ಬದುಕಿದೆ. ಆರ್‌ಎಸ್‌ಎಸ್‌ ಅಲ್ಲದೆ, ಬೇರಾವುದೇ ಅಸ್ತ್ರ ಬಿಜೆಪಿ ಬಳಿ ಇಲ್ಲ. ಬಿಜೆಪಿಯಲ್ಲಿ 20% ಜನರನ್ನು ಬಿಟ್ಟರೆ, ಉಳಿದವರೆಲ್ಲರೂ ಭ್ರಷ್ಟರು-ಕಲುಷಿತರೆ. ಬಿಜೆಪಿ ಇತರ ಎಲ್ಲ ಪಕ್ಷಗಳಿಂದ ಜನರನ್ನು ಕರೆದೊಯ್ದು, ಸೇರಿಸಿಕೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ಕೊಡಬೇಕು. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ಯಾವುದೇ ಪರಿಹಾರ ಹೇಳದೆ ಟೀಕೆ ಮಾಡಿದರೆ ಏನು ಪ್ರಯೋಜನ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಮೆಟ್ರೋ ಮಾರ್ಗ ಹೋಗುವುದು ಟನಲ್ ಮೂಲಕವೇ ಅಲ್ಲವೇ? ಈ ಯೋಜನೆ ತಂದವರು ಯಾರು? ಎಸ್.ಎಂ.ಕೃಷ್ಣ ಕಾಲದಲ್ಲಿ ಹತ್ತು ದೇಶಗಳನ್ನು ತಿರುಗಿ ಅಧ್ಯಯನ ಮಾಡಿ, ವರದಿ ಕೊಟ್ಟಿದೆ. ಆ ವರದಿ ಮೂಲಕ ಯೋಜನೆ ಆರಂಭವಾಯಿತು” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಜೆಮಿಮಾ ರಾಡ್ರಿಗ್ಸ್ | ಭಾರತದ ಹೆಮ್ಮೆ; ಕಣ್ಣೀರಿನೊಳಗೆ ಕಂಗೊಳಿಸಿದ ಗೆಲುವು

“ತೇಜಸ್ವಿ ಸೂರ್ಯ ಮತ್ತು ಬಿಜೆಪಿ ನಾಯಕರು ಕಾರಲ್ಲಿ ಓಡಾಡುವುದು ಬಿಟ್ಟು ಮೆಟ್ರೋ, ಸಾರ್ವಜನಿಕ ಸಾರಿಗೆ ಬಳಸಲಿ. ಇವರ ನಾಟಕಗಳನ್ನು ಕೇಳುವವರು ಯಾರು? ಆತನಿಗೆ ಮದುವೆಗೆ ಮುಂಚಿತವಾಗಿ ಹೊಸ ಕಾರು ಏಕೆ ಬೇಕಿತ್ತು? ಕಾರಲ್ಲಿ ಓಡಾಡುವುದು ಪ್ರತಿಷ್ಠೆಯೇ? ಸಾಮಾಜಿಕ ಅನಿವಾರ್ಯತೆ ಅವನಿಗೆ ಎದುರಾಯಿತೇ? ರೈಲು, ಮೆಟ್ರೋದಲ್ಲಿ ಓಡಾಡಲು ಬೇಡ ಎಂದವರಾರು” ಎಂದಿದ್ದಾರೆ.

“ನಾನು ಎಲ್ಲ ರೀತಿಯ ಅಧ್ಯಯನ ನಡೆಸಿದ್ದೇನೆ. ಲಾಲ್ ಬಾಗ್ ಹಾಳು ಮಾಡಲು ನಾನೇನು ಮೂರ್ಖನಲ್ಲ. ಇದರ ಇತಿಹಾಸವೂ ನನಗೆ ಗೊತ್ತಿದೆ. ಉದ್ಯಾನದಲ್ಲಿ ಎಷ್ಟು ಭಾಗ ಉಪಯೋಗವಾಗುತ್ತಿದೆ, ಉಪಯೋಗವಾಗುತ್ತಿಲ್ಲ ಎಂಬುದು ನನಗೆ ಗೊತ್ತಿದೆ. ಯಾವುದೇ ಅಭಿವೃದ್ಧಿ ಕೆಲಸ ಕೈಗೆತ್ತಿಕೊಂಡರೂ ಬಿಜೆಪಿಯವರು ವಿರೋಧ ವ್ಯಕ್ತಪಡಿಸುತ್ತಾರೆ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗವಿಸಿದ್ದೇಶ್ವರ ಸ್ವಾಮೀಜಿ ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿದ್ದಾರೆಂಬ ಸುಳ್ಳುಸುದ್ದಿ: ತಪ್ಪಿತಸ್ಥನ ವಿರುದ್ಧ FIR

ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಆಹ್ವಾನವನ್ನು...

‘ಕೊಂದವರು ಯಾರು?’ – ಧರ್ಮಸ್ಥಳದ ಸಂತ್ರಸ್ತರಿಗೆ ನ್ಯಾಯಕ್ಕಾಗಿ ಅ.2ರಂದು ಬೃಹತ್ ವಿಚಾರ ಸಂಕಿರಣ

ಧರ್ಮಸ್ಥಳ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಹಲವಾರು ದಶಕಗಳಿಂದ ನಡೆದಿದೆ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಸಿಜೆಪಿ ಪಟ್ಟು: ಹೋರಾಟಕ್ಕೆ ಸೋನಮ್ ವಾಂಗ್‌ಚುಕ್ ಬೆಂಬಲ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ಹೊಣೆಗಾರಿಕೆ ಮತ್ತು...

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...