ಮಹಿಳೆಯರು, ಮಕ್ಕಳು ತಮ್ಮ ಸಮಸ್ಯೆಗೆ ಪರಿಹಾರ ಸಿಗದಿದ್ದರೆ ಗೃಹ ಕಚೇರಿಗೆ ಆಗಮಿಸಿ: ಸಚಿವ ಡಾ. ಜಿ.ಪರಮೇಶ್ವರ್

Date:

ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು, ಅವರ ಮೇಲೆ ದೌರ್ಜನ್ಯ ನಡೆದರೆ ಸಹಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.

ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ‘ಮಹಿಳೆಯರ ಮೇಲಿನ ದೌರ್ಜನ್ಯ ಕುರಿತ ಸಂಕಿರಣದಲ್ಲಿ ಭಾಗವಹಿಸಿ, ವಿವಿಧ ಮಹಿಳಾ ಸಂಘಟನೆಗಳು ಹಾಗೂ ಎನ್‌ಜಿಓಗಳಿಂದ ಸಲಹೆಗಳನ್ನು ಆಲಿಸಿ ಮಾತನಾಡಿದ ಅವರು, “ಮಹಿಳೆಯರು ಮತ್ತು ಮಕ್ಕಳು ತಮ್ಮ ಸಮಸ್ಯೆಗೆ ಪರಿಹಾರ ಸಿಗದಿದ್ದರೆ, ವಿಧಾನಸೌಧದ ಕಾರ್ಯಾಲಯ ಅಥವಾ ಗೃಹ ಕಚೇರಿಗೆ ಆಗಮಿಸಿ ನನ್ನನ್ನು ಭೇಟಿಯಾಗಿ, ಸಮಸ್ಯೆಯನ್ನಿ ಹೇಳಿಕೊಳ್ಳಿ” ಎಂದು ತಿಳಿಸಿದರು.

“ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು ಎಂದು ಸೂಚಿಸಿದ್ದೇನೆ. ಮಹಿಳೆಯರು ತಮ್ಮ ಸಮಸ್ಯೆಗಳ ಕುರಿತು ದೂರು ನೀಡಲು ಠಾಣೆಗೆ ಬಂದರೆ ಕೂಡಲೆ ಸಮಸ್ಯೆಗಳನ್ನು ಆಲಿಸಬೇಕು. ‘ನಮ್ಮ ಬೆನ್ನಿಗೆ ಪೊಲೀಸರು ಇದ್ದಾರೆ ಎಂಬ ಧೈರ್ಯ ಅವರಲ್ಲಿ ಮೂಡಬೇಕು. ಅವರ ದೂರುಗಳ ಬಗ್ಗೆ ತಾತ್ಸರ ಮಾಡಿದರೆ ಸಹಿಸುವುದಿಲ್ಲ. ಮಹಿಳೆಯರು ಧೈರ್ಯವಾಗಿದ್ದರೆ ಒಳ್ಳೆ ಆಡಳಿತ, ಜನಸ್ನೇಹಿ ಪೊಲೀಸ್ ಎನಿಸಿಕೊಳ್ಳಲು ಸಾಧ್ಯ” ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಈ ಹಿಂದೆ ಪೊಲೀಸ್ ಸಹಾಯ ವಾಣಿ ಮೂಲಕ ಬಂದ ದೂರುಗಳನ್ನು ಆಧರಿಸಿ, ಹೋಯ್ಸಳ ಸಿಬ್ಬಂದಿ ಸ್ಥಳಕ್ಕೆ ಹೋಗಲು 20 ನಿಮಿಷ ತೆಗೆದುಕೊಳ್ಳುತ್ತಿದ್ದರು. ಪ್ರಸ್ತುತ 7 ನಿಮಿಷದೊಳಗೆ ಸ್ಥಳದಲ್ಲಿ ಹಾಜರಿರುತ್ತಾರೆ. ಬೆಂಗಳೂರು ನಗರದಲ್ಲಿ 7500 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪೊಲೀಸರು ನಿರಂತರ ಕಣ್ಗಾವಲು ಇಟ್ಟಿರುತ್ತಾರೆ. ನಮ್ಮ ಸರ್ಕಾರವು ಮಹಿಳಾ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಎಲ್ಲ ಇಲಾಖೆಗಳಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ಯೋಜನೆ ರೂಪಿಸಿ: ಸಚಿವ ಹೆಚ್ ಸಿ ಮಹದೇವಪ್ಪ ಸೂಚನೆ

“ನಗರದಲ್ಲಿ ಹೊಸದಾಗಿ 6 ಪೊಲೀಸ್ ಠಾಣೆಗಳನ್ನು ಸ್ಥಾಪಿಸಲಾಗುತ್ತಿದೆ. ಈಗಿರುವ ಪೊಲೀಸ್ ಸಿಬ್ಬಂದಿಗಳಲ್ಲಿ ಶೇ 8ರಷ್ಟು ಮಹಿಳೆಯರಿದ್ದಾರೆ. ಶೇ.25ರಷ್ಟಾಗಬೇಕು ಎಂಬುದು ಗುರಿ ಹೊಂದಲಾಗಿದೆ. ಮಹಿಳಾ‌ ಪೊಲೀಸ್ ಠಾಣೆಗಳಲ್ಲಿ ಮಹಿಳಾ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನೇಮಿಸಲು ಕ್ರಮ ಕೈಗೊಳ್ಳಲಾಗುವುದು. ಆ್ಯಸಿಡ್ ಮಾರಾಟ ನಿಷೇಧ ಮಾಡಲಾಗುವುದು. ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ ನಿವೇಶನ ನೀಡಲಾಗುವುದು” ಎಂದು ತಿಳಿಸಿದರು.

“ಮಹಿಳಾ ಸಬಲೀಕರಣದ ನಿಟ್ಟಿನಲ್ಲಿ ನಮ್ಮ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ ಶಕ್ತಿ ಹೆಚ್ಚಿಸಬೇಕು ಎಂಬುದು ನಮ್ಮ ಸರ್ಕಾರದ ಉದ್ದೇಶ. ಮಹಿಳೆಯರ ಬಗ್ಗೆ ಅವಹೇಳನ ಮಾಡುವುದು, ಅವಾಚ್ಯ ಮಾತುಗಳನ್ನು ಹಾಗೂ ತಿರುಚಿದ ವೀಡಿಯೋಗಳನ್ನು ಪ್ರಕಟಿಸುವರ ವಿರುದ್ಧ ಕಾನೂನು ರಿತ್ಯ ಕ್ರಮ ಜರುಗಿಸಲಾಗುವುದು”‌ ಎಂದು ಎಚ್ಚರಿಸಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್, ನಿಮ್ಹಾನ್ಸ್‌ನ ಡೀನ್ ಪ್ರಭಾಚಂದ್ರ, ವಕೀಲೆ ಸುಮಿತ್ರಾ ಆಚಾರ್ಯ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಸಿದ್ದರಾಮಯ್ಯ ಮನೆಗೆ ಹೋಗುವ ಕಾಲ ಬಂದಿದೆ: ಛಲವಾದಿ ನಾರಾಯಣಸ್ವಾಮಿ

ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಯಾರಿಂದಲೂ ಸಾಧ್ಯವಿಲ್ಲ. ಕಾಂಗ್ರೆಸ್ ನಾಯಕರೂ ಏನೂ...

ಕೇಂದ್ರ ಬಜೆಟ್ | ಬಿಹಾರ ರಸ್ತೆಗಳಿಗೆ ₹26,000 ಕೋಟಿ; ಶಿಕ್ಷಣ, ಉದ್ಯೋಗ, ಕೌಶಲ್ಯಕ್ಕೆ ₹1.48 ಲಕ್ಷ ಕೋಟಿ

ಮೂರನೇ ಅವಧಿಗೆ ಸರ್ಕಾರ ರಚಿಸಿರುವ ಪ್ರಧಾನಿ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ...

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ವಿಶೇಷ ಕೋರ್ಟ್‌ ಸ್ಥಾಪನೆಯಲ್ಲಿ ವಿಳಂಬ; ಹೈಕೋರ್ಟ್‌ ಅಸಮಾಧಾನ

ಸಂಶೋಧಕ ಎಂ.ಎಂ ಕಲ್ಬುರ್ಗಿ ಮತ್ತು ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ...

ವಾಲ್ಮೀಕಿ ನಿಗಮ ಅಕ್ರಮ | ಇ.ಡಿ ವಿರುದ್ಧ ನೇರ ಸಂಘರ್ಷಕ್ಕೆ ಇಳಿದ ರಾಜ್ಯ ಸರ್ಕಾರ, ಗಾಂಧಿ ಪ್ರತಿಮೆ ಬಳಿ ಧರಣಿ

ವಾಲ್ಮೀಕಿ ನಿಗಮ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಮಾಜಿ...