ಮಹಿಳಾ ಮೀಸಲಾತಿ ಮಸೂದೆ: ಟ್ವೀಟ್ ಮಾಡಿ ಕೆಲ ಹೊತ್ತಲ್ಲೇ ‘ಡಿಲೀಟ್’ ಮಾಡಿದ ಕೇಂದ್ರ ಸಚಿವ!

Date:

ಮಹಿಳಾ ಮೀಸಲಾತಿ ಮಸೂದೆ ಕೇಂದ್ರ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ ಎಂದು ಮಾಹಿತಿ ಹಂಚಿಕೊಂಡು ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಕೆಲ ಕ್ಷಣದಲ್ಲೇ ಡಿಲೀಟ್ ಮಾಡಿದ್ದು, ಟ್ರೋಲಿಗೊಳಗಾಗಿದ್ದಾರೆ.

- Advertisement -

ಬಹುನಿರೀಕ್ಷಿತ ಮಹಿಳೆಯರಿಗೆ 33% ಮೀಸಲಾತಿಯನ್ನು ಒದಗಿಸುವ ಮಸೂದೆಯ ಮಂಡನೆಗೆ ಸಚಿವ ಸಂಪುಟದ ಸಭೆಯಲ್ಲಿ ಒಪ್ಪಿಗೆ ಸಿಕ್ಕಿರುವ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ರಾತ್ರಿ 09:59ಕ್ಕೆ ಟ್ವೀಟ್ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈಗ ಅಳಿಸಿ ಹಾಕಿರುವ ಟ್ವೀಟ್‌ನಲ್ಲಿ ”ಮಹಿಳಾ ಮೀಸಲಾತಿ ಬೇಡಿಕೆಯನ್ನು ಈಡೇರಿಸುವ ನೈತಿಕ ಧೈರ್ಯ ಮೋದಿ ಸರ್ಕಾರಕ್ಕೆ ಮಾತ್ರ ಇತ್ತು. ಅದು ಇಂದು ನಡೆದ ಸಂಪುಟದ ಸಭೆಯಲ್ಲಿ ಸಾಬೀತಾಗಿದೆ. ನರೇಂದ್ರ ಮೋದಿ ಹಾಗೂ ಅವರ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಗಳು” ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡಿದ್ದರು.

ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಪಿಟಿಐ ಸೇರಿದಂತೆ ಎಲ್ಲ ಸುದ್ದಿ ಮಾಧ್ಯಮಗಳು ವರದಿ ಮಾಡಿತ್ತು.

ಟ್ವೀಟ್ ಡಿಲೀಟ್ ಮಾಡಿದ ಬಳಿಕ ಕೇಂದ್ರ ಸಚಿವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದು, ಟ್ವೀಟ್ ಯಾಕೆ ಡಿಲೀಟ್ ಮಾಡಿದ್ದೀರಾ? ಎಂದು ಪ್ರಶ್ನಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...