ಮಹಿಳಾ ಮೀಸಲಾತಿ ಮಸೂದೆ ಕೇಂದ್ರ ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ ಎಂದು ಮಾಹಿತಿ ಹಂಚಿಕೊಂಡು ಟ್ವೀಟ್ ಮಾಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಕೆಲ ಕ್ಷಣದಲ್ಲೇ ಡಿಲೀಟ್ ಮಾಡಿದ್ದು, ಟ್ರೋಲಿಗೊಳಗಾಗಿದ್ದಾರೆ.
ಬಹುನಿರೀಕ್ಷಿತ ಮಹಿಳೆಯರಿಗೆ 33% ಮೀಸಲಾತಿಯನ್ನು ಒದಗಿಸುವ ಮಸೂದೆಯ ಮಂಡನೆಗೆ ಸಚಿವ ಸಂಪುಟದ ಸಭೆಯಲ್ಲಿ ಒಪ್ಪಿಗೆ ಸಿಕ್ಕಿರುವ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ರಾತ್ರಿ 09:59ಕ್ಕೆ ಟ್ವೀಟ್ ಮಾಡಿದ್ದರು.
ಈಗ ಅಳಿಸಿ ಹಾಕಿರುವ ಟ್ವೀಟ್‌ನಲ್ಲಿ ”ಮಹಿಳಾ ಮೀಸಲಾತಿ ಬೇಡಿಕೆಯನ್ನು ಈಡೇರಿಸುವ ನೈತಿಕ ಧೈರ್ಯ ಮೋದಿ ಸರ್ಕಾರಕ್ಕೆ ಮಾತ್ರ ಇತ್ತು. ಅದು ಇಂದು ನಡೆದ ಸಂಪುಟದ ಸಭೆಯಲ್ಲಿ ಸಾಬೀತಾಗಿದೆ. ನರೇಂದ್ರ ಮೋದಿ ಹಾಗೂ ಅವರ ನೇತೃತ್ವದ ಸರ್ಕಾರಕ್ಕೆ ಅಭಿನಂದನೆಗಳು” ಎಂದು ತಮ್ಮ ಬೆನ್ನನ್ನು ತಾವೇ ತಟ್ಟಿಕೊಂಡಿದ್ದರು.
ಅವರ ಟ್ವೀಟ್ ಅನ್ನು ಉಲ್ಲೇಖಿಸಿ ಪಿಟಿಐ ಸೇರಿದಂತೆ ಎಲ್ಲ ಸುದ್ದಿ ಮಾಧ್ಯಮಗಳು ವರದಿ ಮಾಡಿತ್ತು.
ಟ್ವೀಟ್ ಡಿಲೀಟ್ ಮಾಡಿದ ಬಳಿಕ ಕೇಂದ್ರ ಸಚಿವರನ್ನು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದು, ಟ್ವೀಟ್ ಯಾಕೆ ಡಿಲೀಟ್ ಮಾಡಿದ್ದೀರಾ? ಎಂದು ಪ್ರಶ್ನಿಸುತ್ತಿದ್ದಾರೆ.