ಎಲ್ಲಾ ಕಡೆ ಪೊಲೀಸರು ಇರಲಾಗದು, ಮಹಿಳೆಯರೇ ಜಾಗರೂಕರಾಗಿರಬೇಕು: ಟಿಎಂಸಿ ಸಂಸದ ಸೌಗತ ರಾಯ್

Date:

ದುರ್ಗಾಪುರ ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಹೇಳಿಕೆ ನೀಡಿದ ಸಂಸದ ಸೌಗತ ರಾಯ್, “ಎಲ್ಲಾ ಕಡೆ ಪೊಲೀಸರು ಇರಲಾಗದು, ಮಹಿಳೆಯರೇ ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ. “ಹುಡುಗಿಯರು ರಾತ್ರಿ ವೇಳೆ ಹೊರಗೆ ಹೋಗಬಾರದು” ಎಂದು ಹೇಳಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿವಾದಕ್ಕೆ ಸಿಲುಕಿದ ಒಂದು ದಿನದ ನಂತರ ತೃಣಮೂಲ ಕಾಂಗ್ರೆಸ್(ಟಿಎಂಸಿ) ಹಿರಿಯ ನಾಯಕ ಸೌಗತ ಹೇಳಿಕೆ ನೀಡಿದ್ದಾರೆ.

- Advertisement -

ಇನ್ನು ಈ ವೇಳೆಯೇ ಸೌಗತ ಅವರು ಮಮತಾ ಬ್ಯಾನರ್ಜಿ ಅವರ ಹೇಳಿಕೆಯನ್ನೂ ಸಮರ್ಥಿಸಿಕೊಂಡಿದ್ದಾರೆ. “ಮುಖ್ಯಮಂತ್ರಿ ಹೇಳಿದ್ದೆಲ್ಲವೂ ಸಂಪೂರ್ಣವಾಗಿ ಸರಿಯಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ‘ಹುಡುಗಿಯರು ರಾತ್ರಿ ಹೊರ ಹೋಗಬಾರದು’ – ಮಮತಾ ಬ್ಯಾನರ್ಜಿ ವಿವಾದಾತ್ಮಕ ಹೇಳಿಕೆ

ಅಕ್ಟೋಬರ್ 10ರ ರಾತ್ರಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಎರಡನೇ ವರ್ಷದ ಎಂಬಿಬಿಎಸ್ ಓದುತ್ತಿರುವ 23 ವರ್ಷದ ವಿದ್ಯಾರ್ಥಿನಿಯ ಮೇಲೆ ಕ್ಯಾಂಪಸ್ ಬಳಿ ಸಾಮೂಹಿಕ ಅತ್ಯಾಚಾರ ನಡೆದಿದೆ. ಒಡಿಶಾ ಮೂಲದ ವಿದ್ಯಾರ್ಥಿನಿ ತನ್ನ ಸ್ನೇಹಿತನೊಂದಿಗೆ ಊಟ ಮುಗಿಸಿ ಹಿಂತಿರುಗಿದ್ದಾಗ ಮೂವರು ಆಕೆಯ ಫೋನ್ ಕಸಿದು ಅರಣ್ಯ ಪ್ರದೇಶಕ್ಕೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಈವರೆಗೆ ಐವರನ್ನು ಬಂಧಿಸಿದ್ದಾರೆ.

ಈ ಪ್ರಕರಣದ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದ ಮಮತಾ ಬ್ಯಾನರ್ಜಿ, “ಹುಡುಗಿ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಓದುತ್ತಿದ್ದಳು. ಮಧ್ಯರಾತ್ರಿ 12.30ಕ್ಕೆ ಅವಳು ಹೇಗೆ ಹೊರಬಂದಳು? ನನಗೆ ತಿಳಿದಿರುವಂತೆ, ಘಟನೆ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಏನಾಯಿತು ಎಂದು ನನಗೆ ತಿಳಿದಿಲ್ಲ. ತನಿಖೆ ನಡೆಯುತ್ತಿದೆ. ಘಟನೆಯನ್ನು ನೋಡಿ ನನಗೆ ಆಘಾತವಾಗಿದೆ. ಆದರೆ ಖಾಸಗಿ ವೈದ್ಯಕೀಯ ಕಾಲೇಜುಗಳು ಸಹ ತಮ್ಮ ವಿದ್ಯಾರ್ಥಿಗಳನ್ನು, ವಿಶೇಷವಾಗಿ ಹುಡುಗಿಯರನ್ನು ನೋಡಿಕೊಳ್ಳಬೇಕು. ಹುಡುಗಿಯರನ್ನು ರಾತ್ರಿಯಲ್ಲಿ ಹೊರಗೆ (ಕಾಲೇಜಿನ) ಹೋಗಲು ಬಿಡಬಾರದು. ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳಬೇಕು. ಅರಣ್ಯ ಪ್ರದೇಶವೂ ಇದೆ” ಎಂದಿದ್ದರು.

ಈ ಹೇಳಿಕೆಯ ತೀವ್ರ ವಿವಾದಕ್ಕೆ ಕಾರಣವಾಗಿದೆ. ಟಿಎಂಸಿ ಸಂಸದ ಸೌಗತ ರಾಯ್ ಮಾತ್ರ ಮಮತಾ ಅವರ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, “ಪೊಲೀಸರು ಎಲ್ಲೆಡೆ ಗಸ್ತು ತಿರುಗಲು ಸಾಧ್ಯವಾಗದ ಕಾರಣ ಮಹಿಳೆಯರು ತಡರಾತ್ರಿ ತಮ್ಮ ಕಾಲೇಜುಗಳಿಂದ ಹೊರಗೆ ಬರಬಾರದು. ಪ್ರತಿಯೊಂದು ರಸ್ತೆಯಲ್ಲೂ ಪೊಲೀಸರು ಇರಲು ಸಾಧ್ಯವಿಲ್ಲ. ಘಟನೆ ನಡೆದ ನಂತರ ಪೊಲೀಸರು ಕ್ರಮ ಕೈಗೊಳ್ಳಬಹುದು. ಆದ್ದರಿಂದ ಮಹಿಳೆಯರು ಸಹ ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ.

ಹಾಗೆಯೇ, ಇತರ ಪ್ರದೇಶಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಮಹಿಳಾ ಸುರಕ್ಷತೆ ಉತ್ತಮವಾಗಿದೆ ಎಂದಿದ್ದಾರೆ. “ಇಂತಹ ಪ್ರಕರಣಗಳು ಬಂಗಾಳದಲ್ಲಿ ಅಪರೂಪ. ಬಂಗಾಳದಲ್ಲಿ ಮಹಿಳೆಯರ ಸುರಕ್ಷತೆ ಬೇರೆ ರಾಜ್ಯಗಳಿಗಿಂತ ಉತ್ತಮವಾಗಿದೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...