ಮಹಿಳಾ ದಿನ | ‘ಬಿಜೆಪಿ ಹಟಾವೋ – ಬೇಟಿ ಬಚಾವೋ’; ಕಾಂಗ್ರೆಸ್‌ ಕರೆ

Date:

ಅಂತರಾಷ್ಟ್ರೀಯ ಮಹಿಳಾ ದಿನದಂದು ಕಾಂಗ್ರೆಸ್ ಶುಕ್ರವಾರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ‘ಬಿಜೆಪಿ ಹಟಾವೋ – ಬೇಟಿ ಬಚಾವೋ’ ಎಂದು ಹೇಳಿದೆ. ಪ್ರಧಾನಿ ನರೇಂದ್ರ ಮೋದಿ ಮಣಿಪುರಕ್ಕೆ ಏಕೆ ಭೇಟಿ ನೀಡಿಲ್ಲ. ಮಹಿಳಾ ಕುಸ್ತಿಪಟುಗಳ ಮೇಲೆ ಬಿಜೆಪಿ ಸಂಸದನ ಲೈಂಗಿಕ ಕಿರುಕುಳ ಪ್ರಕರಣ ಕುರಿತು ಅವರು ‘ಮೌನ’ವಾಗಿರುವುದು ಯಾಕೆ? ದೇಶಾದ್ಯಂತ ಮಹಿಳೆಯರು ಉತ್ತರಕ್ಕಾಗಿ ಎದುರು ನೋಡುತ್ತಿದ್ದಾರೆ ಎಂದು ಹೇಳಿದೆ.

- Advertisement -

“ಇಂದು (ಮಾರ್ಚ್‌ 8) ಅಂತಾರಾಷ್ಟ್ರೀಯ ಮಹಿಳಾ ದಿನವಾಗಿದೆ. ಮಹಿಳೆಯರಿಗೆ ಶುಭಾಶಯ ಹೇಳುವುದನ್ನು ಮೀರಿ ಪ್ರಧಾನಿಯವರು ಏನನ್ನೂ ಮಾಡುತ್ತಾರೆ ಎಂದು ನಾವು ನಿರೀಕ್ಷಿಸುವುದಿಲ್ಲ” ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಅದೇನೇ ಇದ್ದರೂ, ದೇಶಾದ್ಯಂತ ಮಹಿಳೆಯರು ಮೋದಿ ಅವರನ್ನು ಕೇಳುತ್ತಿರುವ ಕೆಲವು ಪ್ರಮುಖ ಪ್ರಶ್ನೆಗಳು ಇಲ್ಲಿವೆ: ಮಣಿಪುರದಲ್ಲಿ ಅಂತರ್ಯುದ್ಧ ನಡೆಯುತ್ತಿದೆ. ಅಲ್ಲಿನ ಮಹಿಳೆಯರು ಹೆಚ್ಚು ಹಿಂಸೆಗೆ ಒಳಗಾಗಿದ್ದಾರೆ. ಮಹಿಳೆಯರನ್ನು ಬೆತ್ತಲೆ ಮಾಡಿ, ಮೆರವಣಿಗೆ ಮಾಡುವ ವಿಡಿಯೋಗಳು ಹರಿದಾಡಿವೆ. ಆದರೆ, ಬಿಜೆಪಿಯೇ ಅಧಿಕಾರದಲ್ಲಿರುವ ಆ ರಾಜ್ಯಕ್ಕೆ ಪ್ರಧಾನಿ ಭೇಟಿ ನೀಡುವು ಬಗ್ಗೆ ಯಾಕೆ ತಲೆಕೆಡಿಸಿಕೊಂಡಿಲ್ಲ” ಎಂದು ಅವರು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ.

“ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ಲೈಂಗಿಕ ಕಿರುಕುಳದ ಆರೋಪ ಮಾಡಿದ್ದಾರೆ. ಆ ಬಗ್ಗೆಯೂ ಪ್ರಧಾನಿ ಮೌನವಾಗಿದ್ದಾರೆ. ಈ ಪ್ರಕರಣದಲ್ಲಿ ಪ್ರಧಾನಿಯವರ ನಿಲುವು ಏನು? ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ‘ಮೋದಿ ಕಾ ಪರಿವಾರ್’ ಸದಸ್ಯ ಎಂದು ಮೋದಿ ಪರಿಗಣಿಸುತ್ತಾರೆಯೇ” ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

“ಆಹಾರ ಮತ್ತು ಅಗತ್ಯ ವಸ್ತುಗಳ ಬೆಲೆಗಳಲ್ಲಿ ಕ್ಷಿಪ್ರ ಏರಿಕೆಯಾಗಿದೆ. ಈ ಬೆಲೆ ಏರಿಕೆಯ ಹೊರೆಯಿಂದ ಮನೆಗಳನ್ನು ರಕ್ಷಿಸುವ ಯೋಜನೆಯನ್ನು ಪ್ರಧಾನಿ ನೀಡುತ್ತಾರೆಯೇ?” ಎಂದಿದ್ದಾರೆ.

 

“‘ಅನ್ಯಾಯ ಕಾಲ’ದ ವಿಶಿಷ್ಟ ಲಕ್ಷಣವೆಂದರೆ ನಿರುದ್ಯೋಗದ ಬಿಕ್ಕಟ್ಟು. ವಿಶೇಷವಾಗಿ, ಉದ್ಯೋಗ ಹುಡುಕುವ ಮಹಿಳಾ ಉದ್ಯೋಗಾಕಾಂಕ್ಷಿಗಳು, ಉದ್ಯೋಗವನ್ನು ಹುಡುಕುವುದನ್ನೇ ಬಿಟ್ಟಿದ್ದಾರೆ. ಅವರು ನಿರುತ್ಸಾಹಗೊಂಡಿದ್ದಾರೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಗಿಂತ ಮೋದಿ ಅವಧಿಯಲ್ಲಿ ಕಾರ್ಮಿಕ ಶಕ್ತಿಯಲ್ಲಿ ಮಹಿಳೆಯರ ಸಂಖ್ಯೆ ಶೇ.20ರಷ್ಟು ಕಡಿಮೆಯಾಗಿದೆ. ಇದು ಆರ್ಥಿಕತೆಯ ದೀರ್ಘಾವಧಿಯ ಸಾಮರ್ಥ್ಯವನ್ನು ದುರ್ಬಲಗೊಳಿಸಬಹುದು. ಮಹಿಳೆಯರನ್ನು ಆರ್ಥಿಕ ಮುಖ್ಯವಾಹಿನಿಗೆ ಮರಳಿ ತರಲು ಪ್ರಧಾನಿ ಬಳಿ ಪರಿಹಾರವಿದೆಯೇ” ಎಂದು ಅವರು ಹೇಳಿದ್ದಾರೆ.

“2014ರಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಪ್ರಧಾನಿ ‘ಬೇಟಿ ಬಚಾವೋ – ಬೇಟಿ ಪಢಾವೋ’ ಅಭಿಯಾನ ಆರಂಭಿಸಿದ್ದರು. ಆದರೆ, ನಂತರ ಅಭಿಯಾನದ ಬಜೆಟ್‌ನಲ್ಲಿ ಸುಮಾರು 80%ಅನ್ನು ಜಾಹೀರಾತುಗಳಿಗೆ ವ್ಯಯಿಸಿದರು. ಹೆಣ್ಣು ಶಿಶುಹತ್ಯೆಯನ್ನು ನಿಲ್ಲಿಸಲು ಮತ್ತು ಮಹಿಳಾ ಶಿಕ್ಷಣವನ್ನು ಉತ್ತೇಜಿಸಲು ಪ್ರಧಾನ ಮಂತ್ರಿಗೆ ಹೆಚ್ಚು ಅರ್ಥಪೂರ್ಣವಾದ ದೃಷ್ಟಿ ಇದೆಯೇ? ಭಾರತದ ಮಹಿಳೆಯರು ಹಕ್ಕು ಮತ್ತು ಉತ್ತರಗಳಿಗೆ ಅರ್ಹರು. ‘ಬಿಜೆಪಿ ಹಟಾವೋ, ಬೇಟಿ ಬಚಾವೋ'” ಎಂದು ರಮೇಶ್ ಟ್ವೀಟ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...