ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡನೆ: 2027ರಲ್ಲಿ ಜನಗಣತಿ 2029ಕ್ಕೆ ಜಾರಿ!

Date:

ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು (ಸೆಪ್ಟೆಂಬರ್ 19) ಕೆಳಮನೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿಯನ್ನು ಒದಗಿಸುವ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಯಿತು.

ಕೇಂದ್ರ ಕಾನೂನು ಸಚಿವ ಅರ್ಜುನ್‌ ರಾಮ್‌ ಮೇಘವಾಲ್‌ ವಿಧೇಯಕವನ್ನು ಮಂಡಿಸಿದರು. ವಿಧೇಯಕವನ್ನು ಮಂಡಿಸುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್‌ನ ಅಧೀರ್ ರಂಜನ್ ಚೌಧರಿ ಅವರು ಮಸೂದೆಯ ಇತಿಹಾಸದ ಬಗ್ಗೆ ಮಾತನಾಡಿದ ನಂತರ ಸಂಸತ್​​ನಲ್ಲಿ ಗದ್ದಲದ ನಡುವೆಯೇ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲಾಯಿತು.

ಸೆಪ್ಟೆಂಬರ್ 19 ಅನ್ನು ‘ಐತಿಹಾಸಿಕ ದಿನ’ ಎಂದು ಕರೆದ ಪ್ರಧಾನಿ ನರೇಂದ್ರ ಮೋದಿ, ಸುಮಾರು ಮೂರು ದಶಕಗಳಿಂದ ಚರ್ಚೆಯಲ್ಲಿರುವ ‘ನಾರಿ ಶಕ್ತಿ ವಂದನ್ ಅಧಿನಿಯಮ್’ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸುವಂತೆ ಪ್ರತಿಪಕ್ಷಗಳನ್ನು ಒತ್ತಾಯಿಸಿದರು.

ಮಹಿಳಾ ಮೀಸಲಾತಿ ಮಸೂದೆಯು ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಶಾಸಕಾಂಗ ನೀತಿ ನಿರೂಪಣೆಯಲ್ಲಿ ಮಹಿಳೆಯರ ಹೆಚ್ಚಿನ ಭಾಗವಹಿಸುವಿಕೆಯನ್ನು ಸಕ್ರಿಯಗೊಳಿಸುವ ಗುರಿಯನ್ನು ಹೊಂದಿದೆ ಎಂದು ಸರ್ಕಾರ ಹೇಳಿದೆ.

ಮಸೂದೆ 2029ಕ್ಕೆ ಜಾರಿ

ಲೋಕಸಭೆಯಲ್ಲಿ ಮಂಡನೆಯಾಗುತ್ತಿರುವ ಕೆಳಮನೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ ಕಲ್ಪಿಸುವ ಮಹಿಳಾ ಮೀಸಲಾತಿ ಮಸೂದೆಯು 2029ರಲ್ಲಿ ಜಾರಿಯಾಗಬಹುದು.

ಮಸೂದೆ ಕಾನೂನಾದ ನಂತರ ಮೊದಲು ಲೋಕಸಭಾ ಕ್ಷೇತ್ರಗಳ ಮರು ವಿಂಗಡನೆಯ ನಂತರ ಮಾತ್ರ ಮೀಸಲಾತಿಯನ್ನು ಕಾರ್ಯಗತಗೊಳಿಸಲಾಗುತ್ತದೆ. ಮುಂದಿನ ಜನಗಣತಿಯ ನಂತರವೇ ಕ್ಷೇತ್ರಗಳನ್ನು ಮರು ವಿಂಗಡನೆ ಮಾಡಲಾಗುತ್ತದೆ. ಇದು 2027 ರಲ್ಲಿ ನಡೆಯುವ ಸಾಧ್ಯತೆಯಿದೆ. ಜನಗಣತಿಯನ್ನು ಕೊನೆಯದಾಗಿ 2021 ರಲ್ಲಿ ನಡೆಸಬೇಕಿತ್ತು. ಆದರೆ ಕೋವಿಡ್‌ನಿಂದಾಗಿ ವಿಳಂಬವಾಯಿತು. 2027ರಲ್ಲಿ ದೇಶದ ಲೋಕಸಭಾ ಕ್ಷೇತ್ರಗಳ ಮರು ವಿಂಗಡನೆಯಾದ ನಂತರ 2029ರಲ್ಲಿ ನೂತನ ಮಸೂದೆಯು ಜಾರಿಗೆ ಬರಲಿದೆ.

ಮಸೂದೆಯು ಕಾಯ್ದೆಯಾದ ನಂತರ 15 ವರ್ಷಗಳವರೆಗೆ ಜಾರಿಯಲ್ಲಿರುತ್ತದೆ. ಆದರೆ ಅದರ ಅವಧಿಯನ್ನು ವಿಸ್ತರಿಸಬಹುದು. ಆರು ಪುಟಗಳ ಮಸೂದೆಯು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಲಾಗುವುದು ಮತ್ತು ನೇರ ಚುನಾವಣೆಯ ಮೂಲಕ ಭರ್ತಿ ಮಾಡಲಾಗುವುದು ಎಂದು ಹೇಳುತ್ತದೆ.

ಅಲ್ಲದೆ, ರಾಜ್ಯಸಭೆ ಅಥವಾ ರಾಜ್ಯ ವಿಧಾನ ಪರಿಷತ್ತಿಗೆ ಮೀಸಲಾತಿ ಅನ್ವಯಿಸುವುದಿಲ್ಲ. ಮೀಸಲಾತಿಯಲ್ಲಿ, ಮೂರನೇ ಒಂದು ಭಾಗದಷ್ಟು ಸ್ಥಾನಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಅನ್ವಯಿಸಲಾಗುತ್ತದೆ.

ಮಸೂದೆಯು ಒಬಿಸಿಗಳಿಗೆ (ಇತರ ಹಿಂದುಳಿದ ವರ್ಗ) ಮೀಸಲಾತಿಯನ್ನು ಒಳಗೊಂಡಿಲ್ಲ. ಏಕೆಂದರೆ ಈಗಿನ ನಿಯಮದಂತೆ ಒಬಿಸಿಗೆ ಮೀಸಲಾತಿ ನೀಡುವುದನ್ನು ಒಳಗೊಂಡಿಲ್ಲ. ಈ ಕಾರಣಕ್ಕಾಗಿಯೇ ಸಮಾಜವಾದಿ ಪಕ್ಷ ಮತ್ತು ರಾಷ್ಟ್ರೀಯ ಜನತಾ ದಳ ಅಂತಹ ಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯನ್ನು ದಶಕಗಳಿಂದ ವಿರೋಧಿಸುತ್ತಿದ್ದವು.

ಈ ಸುದ್ದಿ ಓದಿದ್ದೀರಾ? ಮಹಿಳಾ ಮೀಸಲಾತಿ ಮಸೂದೆಗೆ ಸೋನಿಯಾ, ರಾಹುಲ್ ಬೆಂಬಲ

ಮಹಿಳಾ ಮೀಸಲಾತಿಯ ಮಸೂದೆಯ ಮುಖ್ಯಾಂಶಗಳು

ದೆಹಲಿ ವಿಧಾನಸಭೆ: ಎಸ್‌ಸಿ/ಎಸ್‌ಟಿ ಹಾಗೂ ಸಾಮಾನ್ಯ ಮಹಿಳೆಯರಿಗೆ ಮೂರನೇ ಒಂದರಷ್ಟು ಸ್ಥಾನವನ್ನು ಮೀಸಲಿಡಬೇಕು. ನೇರ ಚುನಾವಣೆಗಳಿಂದ ಭರ್ತಿ ಮಾಡಬೇಕಾದ ಸಂದರ್ಭದಲ್ಲೂ ಒಟ್ಟು ಸ್ಥಾನಗಳಲ್ಲಿ ಮೂರನೇ ಒಂದರಷ್ಟು ಮಹಿಳೆಯರಿಗೆ ಮೀಸಲಿಡಬೇಕು.

ಲೋಕಸಭೆ: ಸಾಮಾನ್ಯ ಹಾಗೂ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕು. ನೇರ ಚುನಾವಣೆಗಳಿಂದ ಭರ್ತಿ ಮಾಡಬೇಕಾದ ಸಂದರ್ಭದಲ್ಲೂ ಒಟ್ಟು ಸ್ಥಾನಗಳಲ್ಲಿ ಮೂರನೇ ಒಂದರಷ್ಟು ಮಹಿಳೆಯರಿಗೆ ಮೀಸಲಿಡಬೇಕು.

ರಾಜ್ಯ ವಿಧಾನಸಭೆಗಳು: ಸಾಮಾನ್ಯ ಹಾಗೂ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳಿಗೆ ಮೂರನೇ ಒಂದರಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕು. ನೇರ ಚುನಾವಣೆಗಳಿಂದ ಭರ್ತಿ ಮಾಡಬೇಕಾದ ಸಂದರ್ಭದಲ್ಲೂ ಒಟ್ಟು ಸ್ಥಾನಗಳಲ್ಲಿ ಮೂರನೇ ಒಂದರಷ್ಟು ಮಹಿಳೆಯರಿಗೆ ಮೀಸಲಿಡಬೇಕು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...