ವಕ್ಫ್ ವಿರೋಧಿ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

Date:

ವಿವಾದಾತ್ಮಕ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ರಾಜ್ಯದಲ್ಲಿ ಯಾವುದೇ ಪ್ರತಿಭಟನೆ ಅಥವಾ ಕಾರ್ಯಕ್ರಮ ನಡೆಸಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ಹೇಳಿದ್ದಾರೆ.

- Advertisement -

ವಕ್ಫ್ ಮಸೂದೆಗೆ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಹಿಮಂತ ಬಿಸ್ವಾ, “ಈ ವಿಷಯ ಸುಪ್ರೀಂ ಕೋರ್ಟ್‌ನಲ್ಲಿದೆ. ಯಾರಾದರೂ ಅದರ ಪರವಾಗಿ ಅಥವಾ ವಿರುದ್ಧವಾಗಿ ಏನಾದರೂ ಹೇಳಬೇಕಾದರೆ ಅವರು ಸುಪ್ರೀಂ ಕೋರ್ಟ್‌ ಅನ್ನು ಸಂಪರ್ಕಿಸಬಹುದು. ಅಲ್ಲಿ ನ್ಯಾಯಾಧೀಶರು ಸರಿಯಾದ ಚರ್ಚೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನು ಓದಿದ್ದೀರಾ? ವಕ್ಫ್ ಮಸೂದೆ | ಮುರ್ಶಿದಾಬಾದ್‌ ಕೋಮುಗಲಭೆ: ಊರು ಬಿಡುವುದೊಂದೇ ಜನರಿಗೆ ಕಂಡ ದಾರಿ

“ಕಾಯ್ದೆಯನ್ನು ವಿರೋಧಿಸಿ ಕೆಲವರು ರಸ್ತೆಗಿಳಿದರೆ, ಕಾಯ್ದೆಯನ್ನು ಬೆಂಬಲಿಸುವವರೂ ಬೀದಿಗಳಿಯುತ್ತಾರೆ. ಆಗ ಘರ್ಷಣೆಯುಂಟಾಗುತ್ತದೆ. ಅಸ್ಸಾಂನಲ್ಲಿ ನಮಗೆ ಯಾವುದೇ ಹೋರಾಟ ಅಥವಾ ಸಂಘರ್ಷ ಬೇಡ. ನಾವೆಲ್ಲರೂ ನಮ್ಮ ಸಹೋದರ ಭಾವನೆಯ ಸಂಬಂಧವನ್ನು ಕಾಪಾಡಿಕೊಳ್ಳಬೇಕು. ರಾಜ್ಯವನ್ನು ಮುಂದಕ್ಕೆ ಕೊಂಡೊಯ್ಯಬೇಕು” ಎಂದು ಶರ್ಮಾ ಹೇಳಿದರು.

“ಯಾರಾದರೂ ಕಾಯ್ದೆಯನ್ನು ವಿರೋಧಿಸುತ್ತಿದ್ದರೆ ಅಥವಾ ಬೆಂಬಲಿಸುತ್ತಿದ್ದರೆ ಅದರ ಬಗ್ಗೆ ನಾವು ಏನೂ ಹೇಳುವುದಿಲ್ಲ. ಆದರೆ ಯಾರಿಗೂ ಕೂಡಾ ಬೀದಿಗಿಳಿದು ಹೋರಾಟ ನಡೆಸುವ ಅವಕಾಶ ನೀಡಲಾಗುವುದಿಲ್ಲ” ಎಂದು ತಿಳಿಸಿದರು.

ಅಸ್ಸಾಂ ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಒಕ್ಕೂಟದ (AAMSU) ಮಾತುಕತೆಗೆ ಆಹ್ವಾನಿಸುತ್ತೀರಾ ಎಂದೂ ಮುಖ್ಯಮಂತ್ರಿ ಅವರನ್ನು ಮಾಧ್ಯಮಗಳು ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ಸಿಎಂ, “ಸಂಘಟನೆಯು ಸುಪ್ರೀಂ ಕೋರ್ಟ್‌ಗೆ ಹೋಗಬಹುದು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಬೀದರ್‌ | ವಕ್ಫ್‌ ತಿದ್ದುಪಡಿ ಮಸೂದೆ ಸಂವಿಧಾನ ವಿರೋಧಿ : ರಮೇಶ ಡಾಕುಳಗಿ

ಕಳೆದ ಬುಧವಾರ ವಕ್ಫ್ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸಲು ಗುವಾಹಟಿಗೆ ತೆರಳುತ್ತಿದ್ದ ಪ್ರತಿಭಟನಾಕಾರರನ್ನು ವಿವಿಧ ಪ್ರದೇಶಗಳಲ್ಲಿ ಪೊಲೀಸರು ಬಂಧಿಸಿದ್ದರು. AAMSU ಈ ಪ್ರತಿಭಟನೆಯ ಆಯೋಜನೆ ಮಾಡಿತ್ತು. ಭಾನುವಾರ ದಕ್ಷಿಣ ಅಸ್ಸಾಂನ ಕ್ಯಾಚರ್ ಜಿಲ್ಲೆಯ ಸಿಲ್ಚಾರ್ ಪಟ್ಟಣದಲ್ಲಿ ಕಾಯ್ದೆಯ ವಿರುದ್ಧ ನಡೆದ ಮೆರವಣಿಗೆಯಲ್ಲಿ ಹಿಂಸಾಚಾರ ನಡೆದಿತ್ತು. ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಪ್ರಯತ್ನಿಸಿದಾಗ ಕಲ್ಲು ತೂರಾಟ ನಡೆದಿದೆ ಎಂದು ವರದಿಯಾಗಿದೆ.

ಸಿಎಂ ನಿರ್ಧಾರಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಿಮಂತ್ ನಿರ್ಧಾರವು ಯಾವುದೇ ಕಾನೂನಿನ ವಿರುದ್ಧವಾಗಿ ಪ್ರತಿಭಟಿಸುವ ಜನರ ಹಕ್ಕನ್ನು ಕಿತ್ತುಕೊಂಡಂತೆ ಎಂದು ಕೆಲವರು ಹೇಳಿದ್ದಾರೆ. ಇನ್ನು ಕೆಲವರು ಪ್ರತಿಭಟನೆಯಿಂದಾಗುವ ಹಿಂಸಾಚಾರ ತಡೆಯಲು ಈ ಕ್ರಮ ಮುಖ್ಯವೆಂದಿದ್ದಾರೆ. ಇನ್ನೂ ಕೆಲವರು ಜನವಿರೋಧಿ ವಕ್ಫ್ ಮಸೂದೆ ವಿರುದ್ಧದ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ, ಇದು ಸರ್ವಾಧಿಕಾರ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

TMC ಬಂಡಾಯ ಸಂಸದರು ಬಿಜೆಪಿ ಸೇರಲಿದ್ದಾರೆ ಎಂದ ಬಸುನಿಯಾ; ಇಲ್ಲ ಎಂದ BJP

ತೃಣಮೂಲ ಕಾಂಗ್ರೆಸ್‌ (TMC) ತೊರೆದು ನ್ಯಾಷನಲಿಸ್ಟ್‌ ಸಿಟಿಜನ್ಸ್‌ ಪಾರ್ಟಿ ಆಫ್‌ ಇಂಡಿಯಾ...

ಮೋದಿ ಸರ್ಕಾರದ UPI ವಿನಾಯಿತಿ ಮೋಸ; ₹2,000 ಮೇಲ್ಪಟ್ಟ ಪಾವತಿಗಳಿಗೆ MDR ವಿಧಿಸಲು ಅನುಮತಿ

₹2,000 ಮೇಲ್ಪಟ್ಟ UPI ಪಾವತಿಗಳಿಗೆ ಮರ್ಚೆಂಟ್‌ ಡಿಸ್ಕೌಂಟ್‌ ರೇಟ್‌ (MDR) ವಿಧಿಸಲು...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್...

ಸರ್ಕಾರ ಆಧಾರ್‌ನ್ನು ನಂಬುವುದಾದರೆ, ಮತದಾರರ ಪಟ್ಟಿ ಪರಿಷ್ಕರಣೆಗೂ ಬಳಸಲಿ: ಆರ್‌ ಎಸ್‌ ಶರ್ಮಾ

ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರ ಗುರುತು ದೃಢೀಕರಣಕ್ಕೂ, ಪಿಂಚಣಿದಾರರ ಜೀವಂತಿಕೆ ಪರಿಶೀಲನೆಗೂ ಆಧಾರ್‌...