ಮೈತ್ರಿ ಇದ್ದರೂ ಮೋದಿ ಜೊತೆ ವೇದಿಕೆ ಹಂಚಿಕೊಳ್ಳಲ್ಲ ಎಂದ ಮಿಝೋರಾಂ ಮುಖ್ಯಮಂತ್ರಿ

Date:

Advertisements

ಮೀಝೋರಾಂನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೂ ಕೂಡ ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಿಝೋರಾಂ ಮುಖ್ಯಮಂತ್ರಿ ಝೊರಮ್ ತಂಗ ಹೇಳಿಕೆ ನೀಡಿದ್ದಾರೆ.

ಮಿಝೋರಾಂನಲ್ಲಿ ಮುಂದಿನ ನ.7ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. ಮಿಝೋರಾಂ ಮುಖ್ಯಮಂತ್ರಿ ಝೊರಮ್ ತಂಗ ಅವರ ಮಿಝೋ ನ್ಯಾಷನಲ್ ಫ್ರಂಟ್ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಭಾಗವಾಗಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 30ರಂದು ಪ್ರಧಾನಿ ಮೋದಿ ಮಮತ್ ಪಟ್ಟಣಕ್ಕೆ ಪ್ರಚಾರಕ್ಕೆ ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಈ ನಡುವೆಯೇ ಝೊರಮ್ ತಂಗ ಈ ರೀತಿಯ ಹೇಳಿಕೆ ನೀಡಿ, ಅಚ್ಚರಿ ಮೂಡಿಸಿದ್ದಾರೆ.

ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ಳದ ತಮ್ಮ ನಿರ್ಧಾರದ ಕಾರಣ ತಿಳಿಸಿರುವ ಮಿಝೋರಾಂ ಸಿಎಂ, ಮಿಝೋರಾಂನ ಜನರೆಲ್ಲರೂ ಕ್ರಿಶ್ಚಿಯನ್ನರು. ಮಣಿಪುರದಲ್ಲಿ ಮೇತಿ ಜನರು ನೂರಾರು ಚರ್ಚ್‌ಗಳನ್ನು ಸುಟ್ಟು ಹಾಕಿದಾಗ ಮಿಝೋರಾಂ ಜನರು ಇದನ್ನು ಸಂಪೂರ್ಣವಾಗಿ ವಿರೋಧಿಸಿದ್ದಾರೆ. ಈ ಸಮಯದಲ್ಲಿ ಬಿಜೆಪಿಯೊಂದಿಗೆ ಸಹಾನುಭೂತಿ ಹೊಂದುವುದು ನಮ್ಮ ಪಕ್ಷಕ್ಕೆ ದೊಡ್ಡ ಹೊಡೆತ ಕೊಡುತ್ತದೆ’ ಎಂದು ಹೇಳಿದ್ದಾರೆ.

Advertisements

ಪ್ರಧಾನಿ ವೇದಿಕೆಯಲ್ಲಿ ಅವರು ಒಬ್ಬರೇ ಇರಲಿ. ನಾನು ಮಾತ್ರ ಪ್ರತ್ಯೇಕವಾದ ವೇದಿಕೆಯಲ್ಲಿ ಚುನಾವಣೆ ಪ್ರಚಾರ ಮಾಡುತ್ತೇನೆ. ಮಿಝೋ ನ್ಯಾಷನಲ್ ಫ್ರಂಟ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಯಾಕೆಂದರೆ ನಮ್ಮ ಪಕ್ಷವು ಕಾಂಗ್ರೆಸ್ ವಿರುದ್ಧವಾಗಿದೆ. ಆದರೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿ ಕೂಟದ ಭಾಗವಾಗಿದ್ದರೂ ಮಣಿಪುರದ ಹಿಂಸಾಚಾರದ ಹಿನ್ನೆಲೆ ಪ್ರಧಾನಿ ಮೋದಿಯ ಜೊತೆ ವೇದಿಕೆಯನ್ನು ಹಂಚಿಕೊಳ್ಳುವುದಿಲ್ಲ ಎಂದು ಝೊರಮ್ ತಂಗ ಹೇಳಿದ್ದಾರೆ.

ಮಣಿಪುರ, ಮ್ಯಾನ್ಮಾರ್ ಮತ್ತು ಬಾಂಗ್ಲಾದೇಶದ ನಿರಾಶ್ರಿತರಿಗೆ ಮಿಝೋರಾಂ ಆಶ್ರಯ ನೀಡಲಿದೆ. ನಾವು ಮ್ಯಾನ್ಮಾರ್‌ನ ನಿರಾಶ್ರಿತರಿಗೆ ಮಾನವೀಯ ಆಧಾರದ ಮೇಲೆ ಆಹಾರ ಮತ್ತು ಆಶ್ರಯವನ್ನು ಒದಗಿಸುತ್ತೇವೆ ಎಂದವರು ಹೇಳಿದ್ದಾರೆ.

ನಿರಾಶ್ರಿತರಿಂದ ಬಯೋಮೆಟ್ರಿಕ್ ಡೇಟಾವನ್ನು ಸಂಗ್ರಹಿಸಲು ಸೂಚಿಸಿರುವ ಕೇಂದ್ರ ಗೃಹ ಸಚಿವಾಲಯದ ನಿರ್ದೇಶನವನ್ನು ತಮ್ಮ ಸರ್ಕಾರ ಅನುಸರಿಸುವುದಿಲ್ಲ ಎಂದು ಕಳೆದ ತಿಂಗಳು ಝೊರಮ್ ತಂಗ ಹೇಳಿದ್ದರು. ಮ್ಯಾನ್ಮಾರ್ ನಿರಾಶ್ರಿತರ ಬಯೋಮೆಟ್ರಿಕ್ ಮತ್ತು ದತ್ತಾಂಶಗಳ ಸಂಗ್ರಹವು ತಾರತಮ್ಯವನ್ನು ಉಂಟು ಮಾಡುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಸದ್ಯಕ್ಕೆ ಇದನ್ನು ಕೈಗೊಳ್ಳದಿರಲು ನಿರ್ಧರಿಸಲಾಗಿದೆ ಎಂದು ಅವರು ಹೇಳಿದ್ದರು.

ಹಲವಾರು ಬಿಜೆಪಿ ನಾಯಕರು ಒತ್ತಾಯಿಸುತ್ತಿರುವ ಏಕರೂಪ ನಾಗರಿಕ ಸಂಹಿತೆಯ ಯೋಜನೆಗಳ ವಿರುದ್ಧವೂ ಝೊರಮ್ ತಂಗ ಮಾತನಾಡಿದ್ದಾರೆ. ಎನ್‌ಡಿಎ ಮಿತ್ರ ಪಕ್ಷವಾಗಿದ್ದರೂ ಕೂಡ ಮಣಿಪುರದಲ್ಲಿನ ಜನಾಂಗೀಯ ಹಿಂಸಾಚಾರದ ಬಗ್ಗೆ ಹಲವಾರು ಬಾರಿ ಧ್ವನಿ ಎತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X