ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೂ ಮುನ್ನ ತಮ್ಮ ಸೋದರಳಿಯ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರನ್ನು ಎನ್‌ಸಿಪಿ ನಾಯಕ ಶರದ್ ಪವಾರ್ ಅವರು ಮತ್ತೆ ತಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬಹುದು ಎಂಬ ಸುದ್ದಿಗಳನ್ನು ಪವಾರ್ ತಳ್ಳಿಹಾಕಿದ್ದಾರೆ. “ದ್ರೋಹಿಗಳನ್ನು ಮತ್ತೆ ನಮ್ಮ ಪಕ್ಷಕ್ಕೆ ಸೇರಿಸುವುದಿಲ್ಲ” ಎಂದು ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ತೋರದ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯನ್ನು ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ಮಹಾಯುತಿ ಒಕ್ಕೂಟದಿಂದ ಹೊರಹಾಕಲು, ಮೈತ್ರಿ ಮುರಿಯಲು ಬಿಜೆಪಿ ಮುಂದಾಗಿದೆ. ಈ ಮೈತ್ರಿ ಮುರಿದರೆ ಅಜಿತ್ ಪವಾರ್ ಮತ್ತೆ ಶರದ್ ಪವಾರ್ ಜೊತೆ ಸೇರಲಿದ್ದಾರೆ ಎಂದು ವರದಿಯಾಗಿದೆ.
ಇದನ್ನು ಓದಿದ್ದೀರಾ? ಮಹಾರಾಷ್ಟ್ರದಲ್ಲಿ ಬಿಜೆಪಿ ತಂತ್ರಕ್ಕೆ ಆಹುತಿಯಾಗುತ್ತಾ ಮಹಾಯುತಿ
ಮಹಾರಾಷ್ಟ್ರದಲ್ಲಿ ಲೋಕಸಭೆ ಚುನಾವಣೆಯಲ್ಲಿ ಇಂಡಿಯಾ ಮೈತ್ರಿಕೂಟವು ಆಡಳಿತಾರೂಢ ಒಕ್ಕೂಟಕ್ಕಿಂತಲೂ ಅಧಿಕ ಕ್ಷೇತ್ರದಲ್ಲಿ ಗೆಲುವು ಕಂಡ ಬಳಿಕ ಶಿವಸೇನೆ (ಯುಬಿಟಿ), ಎನ್‌ಸಿಪಿ (ಎಸ್‌ಪಿ) ಮತ್ತು ಕಾಂಗ್ರೆಸ್‌ನ ಮಹಾ ವಿಕಾಸ್ ಅಘಾಡಿ (ಎಂವಿಎ) ಜಂಟಿ ಪತ್ರಿಕಾಗೋಷ್ಠಿಯನ್ನು ನಡೆಸಿದೆ.
ಈ ಪತ್ರಿಕಾಗೋಷ್ಠಿಯಲ್ಲಿ ಅಜಿತ್ ಪವಾರ್ ಅವರನ್ನು ತಮ್ಮ ಪಕ್ಷಕ್ಕೆ ಮತ್ತೆ ಸೇರಿಸಿಕೊಳ್ಳುವ ಸುದ್ದಿಯನ್ನು ಶರದ್ ಪವಾರ್ ತಳ್ಳಿಹಾಕಿದ್ದಾರೆ. ಉದ್ಧವ್ ಠಾಕ್ರೆ ಮತ್ತು ಶರದ್ ಪವಾರ್ ಇಬ್ಬರೂ “ಬಂಡಾಯ ನಾಯಕರನ್ನು ಹಿಂದಕ್ಕೆ ತೆಗೆದುಕೊಳ್ಳುವ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿದ್ದೀರಾ? ಮಹಾರಾಷ್ಟ್ರ| ಅಜಿತ್ ಅಲ್ಲ ಬಿಜೆಪಿಯ ‘ಚಾರ್ ಸೌ ಪಾರ್’ ಚುನಾವಣೆ ಸೋಲಿಗೆ ಕಾರಣ: ಮಿತ್ರ ಪಕ್ಷದ ಸಚಿವ
Wherever the Prime Minister went and did Roadshows , we won all those seats in Maharashtra, I thank the Prime Minister 😂🔥
Savage from Sharad Pawar. pic.twitter.com/MjjwM6puIx
— Roshan Rai (@RoshanKrRaii) June 15, 2024
“ಲೋಕಸಭೆ ಚುನಾವಣೆಯಲ್ಲಿ ವ್ಯಾಪಕ ಪ್ರಚಾರ ಮಾಡಿದ ಪ್ರಧಾನಿ ಮೋದಿಗೆ ಧನ್ಯವಾದಗಳು” ಎಂದು ಶರದ್ ಪವಾರ್ ಹೇಳಿದರು. “ಮೋದಿ ಅವರು 17 ರ್‍ಯಾಲಿಗಳು ಮತ್ತು ಒಂದು ರೋಡ್ ಶೋ ಅನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಅವರು ಪ್ರಚಾರ ಮಾಡಿದಲ್ಲೆಲ್ಲಾ ಎಂವಿಎ ಅಭ್ಯರ್ಥಿ ಗೆದ್ದಿದ್ದಾರೆ” ಎಂದು ಶರದ್ ಪವಾರ್ ವ್ಯಂಗ್ಯವಾಡಿದರು.
ಹಾಗೆಯೇ ವಿಪಕ್ಷ ಎಂವಿಎ ನಾಯಕರು ಜಂಟಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ಹೋರಾಡುವುದಾಗಿ ಘೋಷಿಸಿದ್ದಾರೆ.