ಪಾಕಿಸ್ತಾನ | ಭೂಕಂಪಕ್ಕೆ 12 ಮಂದಿ ಬಲಿ, 200ಕ್ಕೂ ಅಧಿಕ ಮಂದಿಗೆ ಗಾಯ

Date:

ಮಂಗಳವಾರ ರಾತ್ರಿ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದು, 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ಸ್ವಾತ್ ಕಣಿವೆ ಪ್ರದೇಶದಲ್ಲಿ ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ಅಸೋಸಿಯೇಟೆಡ್ ಪ್ರೆಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಅಫ್ಘಾನಿಸ್ತಾನದ ಈಶಾನ್ಯದಲ್ಲಿ ಪಾಕಿಸ್ತಾನದ ಗಡಿಯ ಸಮೀಪವಿರುವ ಪರ್ವತ ಪ್ರದೇಶ ಭೂಕಂಪದ ಕೇಂದ್ರಬಿಂದುವಾಗಿತ್ತು. ರಿಕ್ಟರ್‌ ಮಾಪಕದಲ್ಲಿ 6.6 ತೀವ್ರತೆ ದಾಖಲಾದ ಕಂಪನದಿಂದಾಗಿ ಕಟ್ಟಡಗಳು ಬಿರುಕುಬಿಟ್ಟಿದ್ದು, ಜನರು ಭಯಭೀತರಾಗಿ ಮನೆ ಮತ್ತು ಕಚೇರಿಗಳಿಂದ ಹೊರಗೆ ಓಡಿದ್ದಾರೆ. ದೂರದ ಹಳ್ಳಿಗಳಲ್ಲಿಯೂ ಸಹ ಜನರನ್ನು ಭಯಭೀತಗೊಳಿಸಿದೆ.

“ಭೂಮಿಯು ಕಂಪಿಸಿದ್ದು ಭಯಾನಕ ಅನುಭವ. ನನ್ನ ಜೀವನದಲ್ಲಿ ಹಿಂದೆಂದೂ ಈ ರೀತಿಯ ನಡುಕವನ್ನು ಅನುಭವಿಸಿರಲಿಲ್ಲ” ಎಂದು ಕಾಬೂಲ್ ನಿವಾಸಿ ಖತೇರಾ ಎಂಬುವವರು ಎಎಫ್‌ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದೆಹಲಿಯಲ್ಲೂ ಕಂಪಿಸಿದ ಭೂಮಿ

ದೇಶದ ರಾಜಧಾನಿ ದೆಹಲಿ, ಎನ್‌ಸಿಆರ್‌, ನೋಯ್ಡಾ, ಗುರುಗಾಂವ್ ಸೇರಿದಂತೆ ರಾಜಧಾನಿಯ ಹಲವು ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ 10.20ರ ವೇಳೆಗೆ ಭೂಕಂಪನದ ಅನುಭವವಾಗಿತ್ತು. ಒಂದು ನಿಮಿಷಕ್ಕೂ ಹೆಚ್ಚು ಕಾಲ ಭೂಮಿ ಕಂಪಿಸಿದ್ದು, ರಿಕ್ಟರ್‌ ಮಾಪಕದಲ್ಲಿ 6.6 ತೀವ್ರತೆ ದಾಖಲಾಗಿದೆ.

ದೆಹಲಿ ಸೇರಿದಂತೆ ಪಶ್ಚಿಮ ಉತ್ತರ ಪ್ರದೇಶ, ಹರಿಯಾಣದ ಹಲವು ಪ್ರದೇಶಗಳಲ್ಲಿ ಮತ್ತು ಏಷ್ಯಾ ರಾಷ್ಟ್ರಗಳಾದ ತುರ್ಕಮೆನಿಸ್ತಾನ್, ಕಝಕಿಸ್ತಾನ, ತಜಕಿಸ್ತಾನ, ಉಜ್ಬೇಕಿಸ್ತಾನ, ಚೀನಾ ಹಾಗೂ ಕಿರ್ಗಿಸ್ತಾನ್ ಸೇರಿದಂತೆ ಹಲವು ದೇಶದಲ್ಲಿ ಭೂಕಂಪನ ವರದಿಯಾಗಿದೆ.

Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾ | ಭಯೋತ್ಪಾದಕರಿಂದ ಭೀಕರ ಗುಂಡಿನ ದಾಳಿ: 40ಕ್ಕೂ ಅಧಿಕ ಮಂದಿ ಮೃತ್ಯು; 100ಕ್ಕೂ ಹೆಚ್ಚು ಜನರಿಗೆ ಗಾಯ

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಕನ್ಸರ್ಟ್ ಹಾಲ್ ಮೇಲೆ ನಾಲ್ಕೈದು ಮಂದಿ ಭಯೋತ್ಪಾದಕರು...

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ

ಅಮೆರಿಕಾದ ಕ್ಲೀವ್‌ಲ್ಯಾಂಡ್‌ನಲ್ಲಿ ಮಾರ್ಚ್‌ 7 ರಂದು ಕಾಣೆಯಾಗಿದ್ದ 25 ವರ್ಷದ ಭಾರತೀಯ...

ತಾನು ಗೆಲ್ಲದಿದ್ದರೆ ‘ರಕ್ತಪಾತ’ದ ಎಚ್ಚರಿಕೆ ನೀಡಿದ ಡೊನಾಲ್ಡ್ ಟ್ರಂಪ್

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಓಹಿಯೋದಲ್ಲಿ ನಡೆದ ರ್‍ಯಾಲಿಯಲ್ಲಿ...

ಭಾರತದಲ್ಲಿ ಸಿಎಎ ಅನುಷ್ಠಾನ: ಕಳವಳ ವ್ಯಕ್ತಪಡಿಸಿದ ಅಮೆರಿಕ

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸಿರುವ ಬಗ್ಗೆ ಅಮೆರಿಕ ಪ್ರತಿಕ್ರಿಯೆ ನೀಡಿದ್ದು,...