ಯೆಮನ್ | ಭೀಕರ ಕಾಲ್ತುಳಿತ: 85 ಮಂದಿ ಸಾವು, 322 ಜನರಿಗೆ ಗಾಯ

Date:

  • ಯೆಮನ್‌ ದೇ‍ಶದ ಸರ್ಕಾರ ಉರುಳಿಸಿ ಅಧಿಕಾರ ಸ್ಥಾಪಿಸಿರುವ ಹೂತಿಗಳು
  • ದಶಕದಲ್ಲೇ ಸಂಭವಿಸಿದ ಭೀಕರ ಕಾಲ್ತುಗಳಿತಗಳಲ್ಲಿ ಒಂದೆನಿಸಿದ ದುರಂತ

ಯೆಮನ್‌ ದೇಶದಲ್ಲಿ ನೆರವು ವಿತರಣೆ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ 85ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಹೂತಿ ಅಧಿಕಾರಿಗಳು ಗುರುವಾರ (ಏಪ್ರಿಲ್‌ 20) ತಿಳಿಸಿದ್ದಾರೆ.

- Advertisement -

ಯುದ್ಧಪೀಡಿತ ದೇಶದಲ್ಲಿ ಹೂತಿ ನಿಯಂತ್ರಿತ ಜಿಲ್ಲೆಯಾಗಿರುವ ಸಾನಾದ ಬಾಬ್ ಅಲ್-ಯೆಮನ್‌ನಲ್ಲಿ ಈ ಘಟನೆ ಸಂಭವಿಸಿದೆ. ಘಟನೆಯಲ್ಲಿ 322ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಅವರನ್ನು ನಾನಾ ಆಸ್ಪತ್ರೆಗಳಿಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಇದು ದಶಕದಲ್ಲೇ ಸಂಭವಿಸಿದ ಅತ್ಯಂತ ಭೀಕರ ಕಾಲ್ತುಳಿತಗಳಲ್ಲಿ ಒಂದೆನಿಸಿದೆ ಎಂದು ಹೇಳಲಾಗಿದ್ದು ಯೆಮನ್ ರಕ್ಷಣಾ ಅಧಿಕಾರಿಗಳು ದೌಡಾಯಿಸಿದ್ದಾರೆ.

“ಮೃತರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ” ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಯೆಮನ್ ದೇಶದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಲು ಅಧಿಕಾರಿಗಳಿಗೆ ನಿರ್ಬಂಧವಿದೆ. ರಂಜಾನ್ ಪವಿತ್ರ ಮಾಸದಲ್ಲೇ ಸಂಭವಿಸಿರುವ ಈ ದುರಂತ ಅರೇಬಿಯಾದ ಬಡರಾಷ್ಟ್ರವಾದ ಯೆಮನ್‌ನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ.

ಹೂತಿ ನಿಯಂತ್ರಿತ ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ಖಾಲಿದ್ ಅಲ್-ಅಜ್ರಿ ಈ ಕುರಿತು ಮಾಹಿತಿ ನೀಡಿದ್ದಾರೆ.

“ಯೆಮನ್‌ ದೇಶದ ಕೆಲ ವ್ಯಾಪಾರಿಗಳು ಸರ್ಕಾರದ ಆಂತರಿಕ ಸಚಿವಾಲಯದ ಗಮನಕ್ಕೆ ತರದೇ ಬುಧವಾರ (ಏಪ್ರಿಲ್ 19) ಸಂಜೆ ಜನರಿಗೆ ಆರ್ಥಿಕ ನೆರವಿನ ರೂಪದಲ್ಲಿ ಹಣ ವಿತರಿಸಿದ್ದಾರೆ. ಆಗ ಕಾಲ್ತುಳಿತ ಸಂಭವಿಸಿದೆ” ಎಂದು ತಿಳಿಸಿದ್ದಾರೆ.

ನೆರವು ವಿತರಣಾ ಕಾರ್ಯಕ್ರಮ ಆಯೋಜಿಸಿದ್ದ ಇಬ್ಬರು ವ್ಯಾಪಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಹೂತಿ ಆಂತರಿಕ ಸಚಿವಾಲಯ ತಿಳಿಸಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ | ಎಸ್‌ಪಿ, ಆರ್‌ಎಲ್‌ಡಿ ನಡುವೆ ಮೂಡದ ಒಮ್ಮತ

ಶಸ್ತ್ರಸಜ್ಜಿತ ಹೂತಿಗಳು ಜನರ ಗುಂಪನ್ನು ನಿಯಂತ್ರಿಸುವ ಪ್ರಯತ್ನದಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿದರು. ಗುಂಡು ವಿದ್ಯುತ್ ತಂತಿಗೆ ಬಡಿದು ಅದು ಸ್ಫೋಟಗೊಂಡಿತು.

ಇದರಿಂದ ಜನರು ಭೀತಿಗೊಂಡು ದಿಕ್ಕಾಪಾಲಾಗಿ ಓಡತೊಡಗಿದರು ಎಂದು ಪ್ರತ್ಯಕ್ಷದರ್ಶಿಗಳಾದ ಅಬ್ದುಲ್‌ ರಹಮಾನ್ ಅಹ್ಮದ್ ಮತ್ತು ಯಾಹಿಯಾ ಮೊಹ್ಸೆನ್ ಹೇಳಿದರು.

ಯೆಮೆನ್‌ ರಾಜಧಾನಿ ಸಾನಾವನ್ನು ಇರಾನ್‌ ಬೆಂಬಲಿತ ಹೂತಿಗಳು ನಿಯಂತ್ರಿಸುತ್ತಿದ್ದು 2014ರಲ್ಲಿ ಸರ್ಕಾರವನ್ನು ಉರುಳಿಸಿ ವಶದಲ್ಲಿ ಇರಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ...

ಅಮೆರಿಕ | ಡೆಮೊಕ್ರಟಿಕ್ ಪಕ್ಷದ ತೆಕ್ಕೆಯಲ್ಲಿ ಮತ್ತೊಂದು ಸೆನೆಟ್ ಸೀಟು

ಒಟ್ಟು 435 ಸೀಟುಗಳ ಸಂಖ್ಯಾಬಲವಿರುವ ಕೆಳಮನೆ “ಹೌಸ್ ಆಫ್ ರೆಪ್ರೆಸೆಂಟಿಟಿವ್ಸ್”ನಲ್ಲಿ ಇನ್ನೂ...

́ಭಾರತ್ ಶೃಂಗಸಭೆ’ಗೆ ಬರಲಿದ್ದ ನಾರ್ವೆ ಪತ್ರಕರ್ತೆಯ ವೀಸಾ ರದ್ದು: ಅಮಿತ್‌ ಶಾ ವಿರುದ್ಧ ಗಂಭೀರ ಆರೋಪ!

ಹೈದರಾಬಾದ್‌ನಲ್ಲಿ ನಡೆಯಲಿರುವ ಪ್ರತಿಷ್ಠಿತ 'ಭಾರತ್ ಶೃಂಗಸಭೆ'ಯಲ್ಲಿ ಪಾಲ್ಗೊಳ್ಳಲು ಭಾರತಕ್ಕೆ ಆಗಮಿಸಬೇಕಿದ್ದ ನಾರ್ವೆಯ...