ಪಾಕಿಸ್ತಾನ | ಎರಡು ಬುಡಕಟ್ಟುಗಳ ನಡುವೆ ಘರ್ಷಣೆ; 16 ಮಂದಿ ಸಾವು

Date:

  • ಸನ್ನಿಖೇಲ್, ಜರ್ಘುನ್ ಖೇಲ್ ಬುಡಕಟ್ಟು ಸಮುದಾಯಗಳ ನಡುವೆ ಗಣಿ ವಿಚಾರ ಸಂಬಂಧ ಘರ್ಷಣೆ
  • ಪಾಕಿಸ್ತಾನ ಕೋಹತ್‌ ಜಿಲ್ಲೆಯ ಪೇಶಾವರದ ನೈಋತ್ಯದ ದರ್ರಾ ಆಡಮ್‌ ಖೇಕ್‌ ಪ್ರದೇಶದಲ್ಲಿ ಘಟನೆ

ಪಾಕಿಸ್ತಾನದ ವಾಯುವ್ಯ ಪ್ರದೇಶದಲ್ಲಿ ಕಲ್ಲಿದ್ದಲು ಗಣಿ ವಿಚಾರಕ್ಕೆ ಸಂಬಂಧಿಸಿ ಎರಡು ಬುಡಕಟ್ಟು ಸಮುದಾಯಗಳ ನಡುವೆ ಸೋಮವಾರ (ಮೇ 15) ಘರ್ಷಣೆ ಉಂಟಾಗಿ 16 ಮಂದಿ ಮೃತಪಟ್ಟಿದ್ದಾರೆ.

ಕೋಹತ್‌ ಜಿಲ್ಲೆಯ ಪೇಶಾವರದ ನೈಋತ್ಯಕ್ಕೆ 35 ಕಿಮೀ ದೂರದಲ್ಲಿರುವ ದರ್ರಾ ಆಡಮ್ ಖೇಕ್ ಪ್ರದೇಶದಲ್ಲಿ ಸನ್ನಿಖೇಲ್ ಮತ್ತು ಜರ್ಘುನ್ ಖೇಲ್ ಬುಡಕಟ್ಟು ಸಮುದಾಯಗಳ ನಡುವೆ ಕಲ್ಲಿದ್ದಲು ಗಣಿ ಗಡಿ ನಿರ್ಧಾರದ ಸಂಬಂಧ ಗಲಭೆ ನಡೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸರು ಹೇಳಿದ್ದಾರೆ. ಮೃತದೇಹಗಳು ಮತ್ತು ಗಲಭೆಯಲ್ಲಿ ಗಾಯಗೊಂಡ ಜನರನ್ನು ಪಾಕಿಸ್ತಾನದ ಪೇಶಾವರದ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗಲಭೆಯಲ್ಲಿ ಗಾಯಗೊಂಡವರ ಬಗ್ಗೆ ನಿಖರ ಮಾಹಿತಿ ತಿಳಿದು ಬಂದಿಲ್ಲ. ಆದರೆ, ಎರಡು ಬುಡಕಟ್ಟಿನ ಸಮುದಾಯಗಳು ನಡೆಸಿದ ಗುಂಡಿನ ದಾಳಿಯಲ್ಲಿ ಉಭಯ ಸಮುದಾಯಗಳ ನಡುವೆ ಸಾವು- ನೋವು ಸಂಭವಿಸಿದೆ ಎಂದು ಪೊಲೀಸರು ಹೇಳಿದರು.

ಗಲಭೆ ಸ್ಥಳಕ್ಕೆ ಪೊಲೀಸ್‌ ಮತ್ತು ಭದ್ರತಾ ಪಡೆಗಳ ಜಂಟಿ ತಂಡಗಳು ದೌಡಾಯಿಸಿವೆ. ಎರಡು ಸಮುದಾಯಗಳ ನಡುವಿನ ಗುಂಡಿನ ದಾಳಿಯನ್ನು ನಿಯಂತ್ರಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? 2016ರಿಂದ ಅದಾನಿ ಸಮೂಹದ ತನಿಖೆ ಮಾಡಿಲ್ಲ; ಸುಪ್ರೀಂ ಕೋರ್ಟ್‌ಗೆ ಸೆಬಿ ಮಾಹಿತಿ

ಪಾಕಿಸ್ತಾನ ಡರ್ರಾ ಆಡಮ್‌ ಖೇಕ್ ಪೊಲೀಸ್‌ ಠಾಣೆಯಲ್ಲಿ ಗಲಭೆಗೆ ಸಂಬಂಧಿಸಿ ಪ್ರಕರಣವೊಂದನ್ನು ದಾಖಲಿಸಲಾಗಿದೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸನ್ನಿಖೇಲ್ ಮತ್ತು ಜರ್ಘುನ್ ಖೇಲ್ ಬುಡಕಟ್ಟು ಸಮುದಾಯಗಳ ನಡುವೆ ಕಲ್ಲಿದ್ದಲು ಗಣಿಯ ಗಡಿ ನಿರ್ಧಾರದ ವಿಚಾರಕ್ಕೆ ಸಂಬಂಧಿಸಿ ಎರಡು ವರ್ಷಗಳಿಂದ ವಿವಾದ ನಡೆಯುತ್ತಿತ್ತು. ಎರಡು ಬುಡಕಟ್ಟಿನ ಸಮುದಾಯಗಳ ನಡುವಿನ ಕಲ್ಲಿದ್ದಲು ಗಣಿ ಸಂಬಂಧದ ವಿವಾದವನ್ನು ಬಗೆಹರಿಸಲು ಪ್ರಯತ್ನ ನಡೆಸಲಾಗುತ್ತಿತ್ತು. ಆದರೆ ಯಾವುದೂ ಪರಿಹಾರ ರೂಪ ಪಡೆದಿರಲಿಲ್ಲ. ಈ ವಿವಾದ ಈಗ ಗಲಭೆ ರೂಪ ಪಡೆದಿದೆ. ಪ್ರದೇಶದಲ್ಲಿ ಪೊಲೀಸ್‌ ಪಡೆ ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾ | ಭಯೋತ್ಪಾದಕರಿಂದ ಭೀಕರ ಗುಂಡಿನ ದಾಳಿ: 40ಕ್ಕೂ ಅಧಿಕ ಮಂದಿ ಮೃತ್ಯು; 100ಕ್ಕೂ ಹೆಚ್ಚು ಜನರಿಗೆ ಗಾಯ

ರಷ್ಯಾದ ರಾಜಧಾನಿ ಮಾಸ್ಕೋದಲ್ಲಿ ಕನ್ಸರ್ಟ್ ಹಾಲ್ ಮೇಲೆ ನಾಲ್ಕೈದು ಮಂದಿ ಭಯೋತ್ಪಾದಕರು...

ಅಮೆರಿಕಾದಲ್ಲಿ ಭಾರತೀಯ ವಿದ್ಯಾರ್ಥಿ ನಾಪತ್ತೆ

ಅಮೆರಿಕಾದ ಕ್ಲೀವ್‌ಲ್ಯಾಂಡ್‌ನಲ್ಲಿ ಮಾರ್ಚ್‌ 7 ರಂದು ಕಾಣೆಯಾಗಿದ್ದ 25 ವರ್ಷದ ಭಾರತೀಯ...

ತಾನು ಗೆಲ್ಲದಿದ್ದರೆ ‘ರಕ್ತಪಾತ’ದ ಎಚ್ಚರಿಕೆ ನೀಡಿದ ಡೊನಾಲ್ಡ್ ಟ್ರಂಪ್

ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶನಿವಾರ ಓಹಿಯೋದಲ್ಲಿ ನಡೆದ ರ್‍ಯಾಲಿಯಲ್ಲಿ...

ಭಾರತದಲ್ಲಿ ಸಿಎಎ ಅನುಷ್ಠಾನ: ಕಳವಳ ವ್ಯಕ್ತಪಡಿಸಿದ ಅಮೆರಿಕ

ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅನುಷ್ಠಾನಗೊಳಿಸಿರುವ ಬಗ್ಗೆ ಅಮೆರಿಕ ಪ್ರತಿಕ್ರಿಯೆ ನೀಡಿದ್ದು,...