ಇಮ್ರಾನ್‌ ಖಾನ್ ಬಂಧನಕ್ಕೆ ಸುಪ್ರೀಂ ಕೋರ್ಟ್ ಛೀಮಾರಿ; ಗಂಟೆಯೊಳಗೆ ಮಾಜಿ ಪ್ರಧಾನಿ ಹಾಜರುಪಡಿಸಿದ ಎನ್‌ಎಬಿ

Date:

  • ಬಂಧನಕ್ಕೊಳಪಡಿಸಿದ್ದು ನ್ಯಾಯಾಂಗ ನಿಂದನೆ ಎಂದ ಪಾಕ್‌ನ ಸುಪ್ರೀಂ ಕೋರ್ಟ್
  • ಇಸ್ಲಾಮಾಬಾದ್ ಹೈಕೋರ್ಟ್‌ನ ಆವರಣದಿಂದ ಬಂಧಿಸಿದ್ದ ಎನ್‌ಎಬಿ

ಇಮ್ರಾನ್‌ ಖಾನ್‌ ಅವರನ್ನು ಅಕ್ರಮ ಬಂಧನಕ್ಕೊಳಪಡಿಸಿ ನ್ಯಾಯಾಂಗ ನಿಂದನೆ ಎಸಗಿದ ರಾಷ್ಟ್ರೀಯ ಉತ್ತರದಾಯಿತ್ವ ಬ್ಯೂರೋಗೆ (ಎನ್‌ಎಬಿ)  ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲೆ ಒಂದು ಗಂಟೆಯೊಳಗೆ ಬಿಗಿ ಭದ್ರತೆಯಲ್ಲಿ ಮಾಜಿ ಪ್ರಧಾನಿಯವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಭ್ರಷ್ಟಾಚಾರ ನಿಗ್ರಹ ಸಂಸ್ಥೆಯು ನ್ಯಾಯಾಲಯದ ರಿಜಿಸ್ಟ್ರಾರ್‌ನ ಅನುಮತಿಯಿಲ್ಲದೆ ನ್ಯಾಯಾಲಯದ ಆವರಣಕ್ಕೆ ಪ್ರವೇಶಿಸಿ ಬಂಧಿಸಿದ ನಂತರ ಕೋರ್ಟ್‌ಗೆ ಇಮ್ರಾನ್‌ ಖಾನ್‌ ಮನವಿ ಸಲ್ಲಿಸಿದ್ದರು. ಮನವಿಯನ್ನು ಪುರಸ್ಕರಿಸಿದ ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಉಮರ್ ಅತಾ ಬಂಡಿಯಾಲ್, ನ್ಯಾಯಮೂರ್ತಿ ಮುಹಮ್ಮದ್ ಅಲಿ ಮಜರ್ ಮತ್ತು ನ್ಯಾಯಮೂರ್ತಿ ಅಥರ್ ಮಿನಲ್ಲಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಇಮ್ರಾನ್‌ ಖಾನ್‌ ಅವರನ್ನು ಒಂದು ಗಂಟೆಯೊಳಗೆ ಕೋರ್ಟ್‌ಗೆ ಹಾಜರುಪಡಿಸಿ ಎಂದು ನಿರ್ದೇಶನ ನೀಡಿತ್ತು.

ಲಾಹೋರ್‌ಗೆ ಆಗಮಿಸಿದ್ದ 70 ವರ್ಷದ ಇಮ್ರಾನ್ ಖಾನ್ ಅವರನ್ನು ಇಸ್ಲಾಮಾಬಾದ್ ಹೈಕೋರ್ಟ್‌ನ ಆವರಣದಿಂದ ಬಂಧಿಸಿದ ಕ್ರಮ ಸರಿಯಿಲ್ಲ ಎಂದು ಪೀಠವು ವಿಚಾರಣೆಯ ಸಮಯದಲ್ಲಿ ಸಿಟ್ಟು ಹೊರಹಾಕಿತ್ತು. 90 ಮಂದಿ ನ್ಯಾಯಾಲಯದ ಆವರಣವನ್ನು ಪ್ರವೇಶಿಸಿದರೆ ಅದರ ಘನತೆ ಏನಾಗಬೇಕು, ಯಾವುದೇ ವ್ಯಕ್ತಿಯನ್ನು ನ್ಯಾಯಾಲಯದ ಆವರಣದಿಂದ ಹೇಗೆ ಬಂಧಿಸಲು ಸಾಧ್ಯ ಎಂದು ಮುಖ್ಯ ನ್ಯಾಯಾಧೀಶರು ಕೇಳಿದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಈ ಸುದ್ದಿ ಓದಿದ್ದೀರಾ? ಇಮ್ರಾನ್‌ ಖಾನ್ ಬಂಧನ; ಪಾಕಿಸ್ತಾನದಾದ್ಯಂತ ಭುಗಿಲೆದ್ದ ಆಕ್ರೋಶ

ಈ ಹಿಂದೆ, ನ್ಯಾಯಾಲಯದ ಒಳಗೆ ವಿಧ್ವಂಸಕ ಕೃತ್ಯಕ್ಕಾಗಿ ವಕೀಲರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ, ವ್ಯಕ್ತಿಯೊಬ್ಬರು ನ್ಯಾಯಾಲಯಕ್ಕೆ ಶರಣಾಗಿದ್ದರೆ, ಅವರನ್ನು ಬಂಧಿಸುವುದರ ಅರ್ಥವೇನು ಎಂದು ಕೇಳಿದ್ದು, ರಾಷ್ಟ್ರೀಯ ಉತ್ತರದಾಯಿತ್ವ ಬ್ಯೂರೋ ನ್ಯಾಯಾಂಗ ನಿಂದನೆ ಎಸಗಿದೆ ಎಂದು ಹೇಳಿದೆ. 

ಬಂಧನಕ್ಕೆ ಮುನ್ನ ನ್ಯಾಯಾಲಯದ ರಿಜಿಸ್ಟ್ರಾರ್‌ನಿಂದ ಅನುಮತಿ ಪಡೆಯಬೇಕಿತ್ತು. ನ್ಯಾಯಾಲಯದ ಸಿಬ್ಬಂದಿಯೂ ನಿಂದನೆಗೆ ಒಳಗಾಗಿದ್ದಾರೆ. ನ್ಯಾಯಾಲಯವು ಮತ್ತೆ ಸೇರುವ ಪಾಕಿಸ್ತಾನ ಸ್ಥಳೀಯ ಕಾಲಮಾನದೊಳಗೆ ಹಾಜರುಪಡಿಸುವಂತೆ ನಿರ್ದೇಶಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಜಾ ಮಾರಾಟ ಆರೋಪ; ಮಾಜಿ ಸಚಿವ ಮುನಿರತ್ನ ವಿರುದ್ಧ ದೂರು

ಬೆಂಗಳೂರಿನ ಆರ್‌ಆರ್‌ ನಗರದಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಇದರಲ್ಲಿ ಆರ್‌ಆರ್‌ ನಗರದ...

ಕೋಲಾರ | ಅನರ್ಹರಿಗೆ ಭೂಮಿ ಮಂಜೂರು ಪ್ರಕರಣ; ಕಾಂಗ್ರೆಸ್‌ ಶಾಸಕನ ವಿರುದ್ಧ ತನಿಖೆಗೆ ಆದೇಶ

ಸರ್ಕಾರಿ ಭೂಮಿಯನ್ನು ಮೃತರೂ ಸೇರಿದಂತೆ ಅನರ್ಹರಿಗೆ ಮಂಜೂರು ಮಾಡಿದ್ದ ಮಾಲೂರು ಕಾಂಗ್ರೆಸ್‌...

ಜೆಡಿಎಸ್-ಬಿಜೆಪಿ ಮೈತ್ರಿ: ಬೇಸರಗೊಂಡ ಹಲವರು ಸಂಪರ್ಕದಲ್ಲಿದ್ದಾರೆ ಎಂದ ಸಚಿವ

ಜೆಡಿಎಸ್‌–ಬಿಜೆಪಿ ಮೈತ್ರಿಯಿಂದಾಗಿ ಎರಡೂ ಪಕ್ಷಗಳಲ್ಲಿ ಹಲವರು ಅಸಮಾಧಾನ ಹೊಂದಿದ್ದಾರೆ. ಅವರಲ್ಲಿ ಕೆಲವರು...