ಇಸ್ರೇಲ್ | ಭಾರತೀಯ ವಿದ್ಯಾರ್ಥಿಗಳಿಗೆ ರಾಯಭಾರ ಕಚೇರಿಯಿಂದ ಸುರಕ್ಷತಾ ಸೂಚನೆ

Date:

Advertisements

ಹಮಾಸ್‌ ಸಂಘಟನೆ ಇಸ್ರೇಲ್‌ ವಿರುದ್ಧ ಯುದ್ಧ ಘೋಷಿಸಿರುವ ಹಿನ್ನೆಲೆಯಲ್ಲಿ ಈಗಾಗಲೇ 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಗಾಜಾ ಪ್ರದೇಶದಲ್ಲಿ ಉಗ್ರರು ಇಸ್ರೇಲಿನ ನೂರಕ್ಕೂ ಹೆಚ್ಚು ಸೈನಿಕರು ಹಾಗೂ ನಾಗರಿಕರನ್ನು ಒತ್ತಾಯಾಳಾಗಿ ಇಟ್ಟುಕೊಂಡಿದ್ದಾರೆ.

ಹಮಾಸ್ ಗುಂಪಿನ ದಾಳಿಗಳ ಮಧ್ಯೆ ಭಾರತೀಯ ವಿದ್ಯಾರ್ಥಿಗಳು ಇಸ್ರೇಲ್‌ ದೇಶದಲ್ಲಿ ಸಿಲುಕಿಕೊಂಡಿದ್ದು, ಆತಂಕದಲ್ಲಿದ್ದಾರೆ. ಈ ನಡುವೆ ಇಸ್ರೇಲ್‌ ಮತ್ತು ಪ್ಯಾಲೆಸ್ಟೈನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಶನಿವಾರ ತನ್ನ ನಾಗರಿಕರಿಗೆ ಜಾಗರೂಕರಾಗಿರಿ ಎಂದು ಸೂಚನೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಇಸ್ರೇಲ್ – ಹಮಾಸ್ ಯುದ್ಧ| 500ಕ್ಕೂ ಹೆಚ್ಚು ಸಾವು; ನಗರ ತೊರೆಯುತ್ತಿರುವ ಸ್ಥಳೀಯರು

Advertisements

“ನಾನು ತುಂಬಾ ಭಯಗೊಂಡಿದ್ದೇನೆ. ಅದೃಷ್ಟವಶಾತ್ ನಮಗೆ ಆಶ್ರಯ ದೊರಕಿದೆ ಹಾಗೂ ಇಸ್ರೇಲಿ ಪೊಲೀಸ್ ಪಡೆಗಳು ಹತ್ತಿರದಲ್ಲಿವೆ. ಇಲ್ಲಿಯವರೆಗೆ, ನಾವು ಸುರಕ್ಷಿತವಾಗಿದ್ದೇವೆ. ನಾವು ಭಾರತೀಯ ರಾಯಭಾರಿ ಕಚೇರಿಯ ಜನರೊಂದಿಗೆ ಸಂಪರ್ಕದಲ್ಲಿದ್ದೇವೆ. ನಾವು ಭಾರತೀಯ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದು, ಅವರೊಂದಿಗೆ ಸಂಪರ್ಕ ಹೊಂದಿದ್ದೇವೆ” ಎಂದು ಇಸ್ರೇಲ್‌ನಲ್ಲಿರುವ ಭಾರತೀಯ ವಿದ್ಯಾರ್ಥಿ ಗೋಕುಲ್ ಮನವಾಲನ್ ಸುದ್ದಿ ಸಂಸ್ಥೆಯೊಂದಕ್ಕೆ ತಿಳಿಸಿದ್ದಾರೆ.

ಮತ್ತೊಬ್ಬ ವಿದ್ಯಾರ್ಥಿಯಾದ ವಿಮಲ್ ಕೃಷ್ಣಸಾಮಿ ಹಾಗೂ ಮಣಿವಣ್ಣನ್ ಚಿತ್ರಾ ಅವರು ಈ ದಾಳಿಯು “ತುಂಬಾ ಉದ್ವಿಗ್ನ ಮತ್ತು ಭಯಾನಕವಾಗಿದೆ. ಭಾರತೀಯ ರಾಯಭಾರ ಕಚೇರಿಯು ಗುಂಪಿನಲ್ಲಿ ನಮ್ಮೊಂದಿಗೆ ಸಂಪರ್ಕದಲ್ಲಿದೆ. ಅವರು ನಮ್ಮ ಮೇಲೆ ನಿಗಾ ಇಡುತ್ತಿದ್ದಾರೆ” ಎಂದು ಹೇಳಿದ್ದಾರೆ.

ದಾಳಿ ಪ್ರಾರಂಭವಾದ ಕ್ಷಣದಲ್ಲಿ ತನ್ನ ಪರಿಸ್ಥಿತಿಯನ್ನು ಹಂಚಿಕೊಂಡ ವಿದ್ಯಾರ್ಥಿ ಆದಿತ್ಯ ಕರುಣಾನಿತಿ ನಿವೇದಿತಾ, “ನಾವು ಇದನ್ನು ನಿರೀಕ್ಷಿಸಿರಲಿಲ್ಲ. ಏಕೆಂದರೆ ಇಸ್ರೇಲ್‌ನಲ್ಲಿ ಈಗ ಧಾರ್ಮಿಕ ರಜಾದಿನಗಳು ನಡೆಯುತ್ತಿವೆ. ನಾವು ಮುಂಜಾನೆ ಸುಮಾರು 5.30ಕ್ಕೆ ಸೈರನ್‌ಗಳನ್ನು ಪಡೆದುಕೊಂಡಿದ್ದೇವೆ. ನಾವು ಸುಮಾರು 7-8 ಗಂಟೆಗಳ ಕಾಲ ಬಂಕರ್‌ಗಳಲ್ಲಿ ಇದ್ದೆವು. ಸೈರನ್‌ಗಳು ಮೊಳಗಿದ ನಂತರ ನಮ್ಮ ಮನೆಯೊಳಗೆ ಇರುವಂತೆ  ತಿಳಿಸಲಾಗಿದೆ” ಎಂದರು.

ಇಸ್ರೇಲ್‌ನ ಹೀಬ್ರೂ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ವಿದ್ಯಾರ್ಥಿಯ ಪ್ರಕಾರ, ಅವರು ವಸತಿ ನಿಲಯಗಳಲ್ಲಿ ಉಳಿದುಕೊಂಡಿದ್ದಾರೆ ಮತ್ತು ಅವರಿಗೆ ಕಾಲೇಜಿನಿಂದ ವಸತಿ ಒದಗಿಸಲಾಗುತ್ತಿದೆ.

ಕಳೆದ 18 ವರ್ಷಗಳಿಂದ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿರುವ ಭಾರತೀಯ ಪ್ರಜೆ ಸೋಮ, “ಇಂದು ತುಂಬಾ ಕಷ್ಟಕರವಾದ ದಿನ, ನಾವು ಎಂದಿಗೂ ಪರಿಸ್ಥಿತಿಯನ್ನು ಈ ರೀತಿ ನೋಡಿಲ್ಲ. ಹಮಾಸ್ ಸಂಘಟನೆ 20 ನಿಮಿಷಗಳಲ್ಲಿ, 5,000 ರಾಕೆಟ್‌ಗಳನ್ನು ಹಾರಿಸಿ  22 ಜನರನ್ನು ಕೊಂದರು. ಇದು ದೇಶಕ್ಕೆ ಬಹಳ ಕಷ್ಟಕರವಾದ ಪರಿಸ್ಥಿತಿಯಾಗಿದೆ ” ಎಂದರು.

ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಲ್ಲಿರುವ ಎಲ್ಲ ಭಾರತೀಯ ಪ್ರಜೆಗಳು ಜಾಗರೂಕರಾಗಿರಲು ಮತ್ತು ಸ್ಥಳೀಯ ಅಧಿಕಾರಿಗಳ ಸಲಹೆಯಂತೆ ಸುರಕ್ಷತಾ ಪ್ರೋಟೋಕಾಲ್‌ಗಳನ್ನು ಅನುಸರಿಸಲು ವಿನಂತಿಸಲಾಗಿದೆ.

“ದಯವಿಟ್ಟು ಜಾಗರೂಕರಾಗಿರಿ, ಅನಗತ್ಯ ಚಲನವಲನವನ್ನು ತಪ್ಪಿಸಿ ಮತ್ತು ಸುರಕ್ಷತಾ ಆಶ್ರಯಗಳ ಹತ್ತಿರವಿರಿ” ಎಂದು ರಾಯಭಾರ ಕಚೇರಿ ಇಂಗ್ಲಿಷ್, ಕನ್ನಡ, ಹಿಂದಿ, ಮರಾಠಿ, ತಮಿಳು, ತೆಲುಗು, ಮಲಯಾಳಂ ಭಾಷೆಗಳಲ್ಲಿ ತನ್ನ ಸಲಹೆಯಲ್ಲಿ ತಿಳಿಸಿದೆ.

ರಾಯಭಾರ ಕಚೇರಿಯ ವೆಬ್‌ಸೈಟ್‌ನಲ್ಲಿರುವ ವಿವರಗಳ ಪ್ರಕಾರ, ಇಸ್ರೇಲ್‌ನಲ್ಲಿ ವಜ್ರದ ವ್ಯಾಪಾರಿಗಳು, ಐಟಿ ವೃತ್ತಿಪರರು ಮತ್ತು ವಿದ್ಯಾರ್ಥಿಗಳು ಒಳಗೊಂಡಂತೆ ಸುಮಾರು 18,000 ಭಾರತೀಯ ನಾಗರಿಕರಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತೀಯರು ಸೇರಿ 5.5 ಕೋಟಿ ವಿದೇಶಿಗರ ವೀಸಾಗಳ ಮರು ಪರಿಶೀಲನೆಗೆ ಟ್ರಂಪ್ ಆಡಳಿತ ನಿರ್ಧಾರ

ಅಮೆರಿಕಾದಲ್ಲಿ ವೀಸಾ ಹೊಂದಿರುವ 5.5 ಕೋಟಿ ವಿದೇಶಿಗರನ್ನು ಅವರ ದಾಖಲೆಗಳಲ್ಲಿ ಯಾವುದೇ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

Download Eedina App Android / iOS

X