ಜೈಲಿನಲ್ಲಿರುವ ಮಾನವ ಹಕ್ಕುಗಳ ಹೋರಾಟಗಾರ್ತಿ ನರ್ಗೀಸ್ ಮೊಹಮ್ಮದಿ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ

Date:

Advertisements

ಇರಾನಿನ ಮಾನವ ಹಕ್ಕುಗಳ ಹೋರಾಟಗಾರ್ತಿ ನರ್ಗೀಸ್ ಮೊಹಮ್ಮದಿ ಅವರಿಗೆ 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಲಭಿಸಿದೆ.

ಇರಾನ್‌ನಲ್ಲಿ ಮಹಿಳೆಯರ ಮೇಲಿನ ದಬ್ಬಾಳಿಕೆ, ಮಾನವ ಹಕ್ಕುಗಳು ಮತ್ತು ದೇಶದ ಪ್ರತಿಯೊಬ್ಬರ ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ ನರ್ಗೀಸ್ ಮೊಹಮ್ಮದಿ ಅವರನ್ನು ನಾರ್ವೆಯ ಸ್ವೀಡಿಷ್ ಅಕಾಡೆಮಿ 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ನರ್ಗೀಸ್ ಅವರು ಪ್ರಸ್ತುತ ಟೆಹ್ರಾನ್‌ನ ಸೆರೆಮನೆಯಲ್ಲಿದ್ದಾರೆ. ಇರಾನ್‌ನಲ್ಲಿ 22 ವರ್ಷದ ಯುವತಿ ಸಾವಿಗೆ ಸಂಬಂಧಿಸಿ ಇತ್ತೀಚೆಗೆ ಹಿಂಸಾತ್ಮಕ ಪ್ರತಿಭಟನೆ ಆರಂಭವಾಗಿತ್ತು. ಆಗ ಇರಾನ್ ಪೂರ್ತಿ ಹೋರಾಟಗಳು ಶುರುವಾಗಿದ್ದವು. ಇದೇ ನರ್ಗೀಸ್ ಮೊಹಮ್ಮದಿ ಇರಾನ್ ಹೋರಾಟಕ್ಕೆ ಬೆನ್ನೆಲುಬಾಗಿ ನಿಂತಿದ್ದರು. ಈ ಕಾರಣಕ್ಕಾಗಿ ನರ್ಗೀಸ್ ಮೊಹಮ್ಮದಿ ಅವರಿಗೆ ಒಟ್ಟು 31 ವರ್ಷಗಳ ಜೈಲು ಶಿಕ್ಷೆ ಮತ್ತು 154 ಛಡಿ ಏಟಿನ ಶಿಕ್ಷೆ ವಿಧಿಸಿದೆ.

Advertisements

ಈ ವರ್ಷದ ಶಾಂತಿ ಪ್ರಶಸ್ತಿಯು ಮಹಿಳೆಯರನ್ನು ಗುರಿಯಾಗಿಸುವ ತಾರತಮ್ಯ ಮತ್ತು ದಬ್ಬಾಳಿಕೆಯ ಪ್ರಭುತ್ವದ ಆಡಳಿತ ನೀತಿಗಳ ವಿರುದ್ಧ ಹೋರಾಟ ನಡೆಸಿದ ಲಕ್ಷಾಂತರ ಜನರನ್ನು ಗುರುತಿಸುತ್ತದೆ ಎಂದು ನೊಬೆಲ್ ಸಮಿತಿಯು ಹೇಳಿದೆ.

ಈ ಸುದ್ದಿ ಓದಿದ್ದಾರಾ? ಏಕದಿನ ವಿಶ್ವಕಪ್ 2023 | ಬೆಂಗಳೂರಿನ ತಮ್ಮ ಪೂರ್ವಜರ ಬಗ್ಗೆ ಮೆಲುಕು ಹಾಕಿದ ರಚಿನ್ ರವೀಂದ್ರ

ಇರಾನಿನ ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧದ ಹೋರಾಟ ಮತ್ತು ಎಲ್ಲರಿಗೂ ಮಾನವ ಹಕ್ಕುಗಳು ಮತ್ತು ಸ್ವಾತಂತ್ರ್ಯವನ್ನು ನೀಡುವ ಹೋರಾಟ ನಡೆಸುತ್ತಿರುವ ನರ್ಗೀಸ್ ಮೊಹಮ್ಮದಿ ಅವರಿಗೆ 2023 ರ ನೊಬೆಲ್ ಶಾಂತಿ ಪ್ರಶಸ್ತಿಯನ್ನು ನೀಡಲು ನಾರ್ವೇಜಿಯನ್ ನೊಬೆಲ್ ಸಮಿತಿ ನಿರ್ಧರಿಸಿದೆ.

ಇರಾನ್‌ನಲ್ಲಿ ಮಹಿಳೆಯರು ಹೋರಾಟ ಆರಂಭಿಸಿದ ನಂತರ, ಅಲ್ಲಿನ ಮಹಿಳೆಯರ ಮೇಲೆ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿತ್ತು. ಆದರೆ ಅಂತಿಮವಾಗಿ ಇಡೀ ಜಗತ್ತು ಇರಾನ್ ಮಹಿಳೆಯರ ಹೋರಾಟದ ಪರವಾಗಿ ನಿಂತು ಅವರ ಧ್ವನಿಯಾಗಿತ್ತು. ಇದೀಗ ಇರಾನ್ ಮಹಿಳಾ ಹೋರಾಟಕ್ಕೆ ಬೆನ್ನೆಲುಬಾಗಿ ನಿಂತಿದ್ದ ನರ್ಗೀಸ್ ಅವರಿಗೆ 2023ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ಪ್ರಕಟಿಸಿ ಮತ್ತೆ ಜಗತ್ತಿನ ಗಮನ ಇರಾನ್ ಮೇಲೆ ಕೇಂದ್ರೀಕರಿಸುವಂತೆ ಮಾಡಿದೆ.

ನರ್ಗೀಸ್ ಅವರು 1990 ರ ದಶಕದಲ್ಲಿ, ಭೌತಶಾಸ್ತ್ರದ ವಿದ್ಯಾರ್ಥಿಯಾಗಿ, ನಾಗರಿಕರ ಸಮಾನತೆ ಮತ್ತು ಮಹಿಳಾ ಹಕ್ಕುಗಳಿಗಾಗಿ ಹೋರಾಟ ನಡೆಸಲು ಪ್ರಾರಂಭಿಸಿದರು. ಅವರು ಸರ್ಕಾರದ ತಾರತಮ್ಯ ಮತ್ತು ದಬ್ಬಾಳಿಕೆಯನ್ನು ನಿರಂತರವಾಗಿ ಪ್ರತಿಭಟಿಸುತ್ತ ತಮ್ಮ ಬದುಕನ್ನೇ ಮಾನವ ಹಕ್ಕುಗಳ ಸಮಾನತೆಗೆ ಮೀಸಲಿಟ್ಟಿದ್ದಾರೆ.

ಈ ವರ್ಷ ನೊಬೆಲ್ ಬಹುಮಾನ ವಿಜೇತರನ್ನು ಅಕ್ಟೋಬರ್ 2ರ ಸೋಮವಾರದಿಂದ ಅಕ್ಟೋಬರ್ 9ರ ತನಕ ಪ್ರತಿದಿನ ಪ್ರಕಟಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ-ಝೆಲೆನ್ಸ್ಕಿ ಫೋನ್ ಮಾತುಕತೆ: ರಷ್ಯಾ ತೈಲ ಖರೀದಿ ಕುರಿತು ಭಾರತದ ಮೇಲೆ ಉಕ್ರೇನ್‌ ಒತ್ತಡ

ರಷ್ಯಾ ಜೊತೆ ಸಂಘರ್ಷದಲ್ಲಿರುವ ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರು ಪ್ರಧಾನಿ...

ಗಾಝಾದಲ್ಲಿ ಹತ್ಯೆಯಾದ ಯುವ ಪತ್ರಕರ್ತರೊಬ್ಬರ ಭಿನ್ನ ಉಯಿಲು !

ನಾನು ಸಾಯುವುದಾದರೆ, ನನ್ನ ಸಿದ್ಧಾಂತಗಳ ಮೇಲೆ ದೃಢವಾಗಿರುವೆ. ದೇವರ ಮುಂದೆ ನಾನು...

ಗಾಝಾದಲ್ಲಿ ಇಸ್ರೇಲ್ ದಾಳಿ: ಐವರು ಅಲ್‌ಜಝೀರಾ ಪತ್ರಕರ್ತರು ಹತ

ಭಾನುವಾರ ಗಾಝಾ ನಗರದಲ್ಲಿ ಅಲ್‌ಜಝೀರಾ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ...

ಟ್ರಂಪ್‌ ಕೊಟ್ಟ ಏಟಿಗೆ ಚೀನಾದತ್ತ ತಿರುಗಿದ ಪ್ರಧಾನಿ; ಚೀನೀ ಭಜನೆ ಮಾಡುತ್ತಿದೆ ಮೋದಿ ಭಕ್ತ ಗಣ

ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ...

Download Eedina App Android / iOS

X