ಮಿಜೋರಾಂ ಮೇಲೆ ನನ್ನ ತಂದೆ ಬಾಂಬ್‌ ಹಾಕಿಲ್ಲ: ದಾಖಲೆಯೊಂದಿಗೆ ಬಿಜೆಪಿಗೆ ತಿರುಗೇಟು ನೀಡಿದ ಸಚಿನ್‌ ಪೈಲಟ್

Date:

Advertisements

ಮಿಜೋರಾಂನಲ್ಲಿ 1966ರ ಮಾರ್ಚ್‌ನಲ್ಲಿ ರಾಜೇಶ್ ಪೈಲಟ್ ವಾಯುಪಡೆಯ ಪೈಲಟ್ ಆಗಿ ಬಾಂಬ್‌ಗಳನ್ನು ಹಾಕಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಆರೋಪಕ್ಕೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ.

“ಮಾಳವೀಯ ಅವರು ಹೇಳಿರುವ ವಿಷಯ ಹಾಗೂ ದಿನಾಂಕ ತಪ್ಪಾಗಿವೆ. ನನ್ನ ತಂದೆ ಆ ವರ್ಷದ ಅಕ್ಟೋಬರ್‌ನಲ್ಲಿ ವಾಯುಪಡೆಗೆ ಸೇರಿದ್ದರು” ಎಂದು ಟ್ವಿಟರ್‌ನಲ್ಲಿ ದಾಖಲೆ ಸಮೇತ ಸಚಿನ್ ಪೈಲಟ್ ಪ್ರತಿಕ್ರಿಯೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪ್ರಧಾನಿಯ ಸೇಡಿನ ರಾಜಕಾರಣ ಎಂದ ಕಾಂಗ್ರೆಸ್

Advertisements

“ನೀವು ತಪ್ಪು ದಿನಾಂಕಗಳನ್ನು ಹೇಳಿದ್ದೀರಿ, ತಪ್ಪು ಸಂಗತಿಗಳನ್ನು ತಿಳಿಸಿದ್ದೀರಿ. ಹೌದು, ಭಾರತೀಯ ವಾಯುಪಡೆಯ ಪೈಲಟ್ ಆಗಿ, ನನ್ನ ತಂದೆ ಬಾಂಬ್‌ಗಳನ್ನು ಹಾಕಿದ್ದಾರೆ. ಆದರೆ ಅದು 1971ರ ಭಾರತ –ಪಾಕ್‌ ಯುದ್ಧದ ಸಮಯದಲ್ಲಿ, ಹಿಂದಿನ ಪೂರ್ವ ಪಾಕಿಸ್ತಾನದ ಮೇಲೆ ಬಾಂಬ್‌ ಹಾಕಿದ್ದರು. ನೀವು ಹೇಳುವಂತೆ ಮಾರ್ಚ್ 5, 1966 ರಂದು ಮಿಜೋರಾಂ ಮೇಲೆ ಬಾಂಬ್‌ ಎಸೆದಿರಲಿಲ್ಲ. ಅವರು ಭಾರತೀಯ ವಾಯುಸೇನೆಗೆ ನೇಮಕಗೊಂಡಿದ್ದು ಅಕ್ಟೋಬರ್ 29, 1966 ರಂದು (ಪ್ರಮಾಣ ಪತ್ರ ಲಗತ್ತಿಸಲಾಗಿದೆ). ಜೈ ಹಿಂದ್ ಮತ್ತು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು’ ಎಂದು ಬರೆದುಕೊಂಡಿದ್ದಾರೆ.

ಪೈಲಟ್ ಹಂಚಿಕೊಂಡಿರುವ ಪ್ರಮಾಣ ಪತ್ರದ ಪ್ರಕಾರ ಅಕ್ಟೋಬರ್ 29, 1966ರಲ್ಲಿ ಭಾರತೀಯ ವಾಯುಪಡೆಗೆ ರಾಜೇಶ್ ಪೈಲಟ್ ಅವರನ್ನು ನಿಯೋಜಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಹಿಮಾಚಲ ಪ್ರದೇಶ | ಭಾರಿ ಮಳೆಗೆ ಮೃತರ ಸಂಖ್ಯೆ 60ಕ್ಕೆ ಏರಿಕೆ; ಶಾಲಾ, ಕಾಲೇಜುಗಳಿಗೆ ರಜೆ

ಮಾರ್ಚ್ 5, 1966ರಂದು ಮಿಜೋರಾಂನ ರಾಜಧಾನಿ ಐಜ್ವಾಲ್‌ನಲ್ಲಿ ವಾಯುಪಡೆ ನಡೆಸಿದ ಬಾಂಬ್‌ ದಾಳಿಯಲ್ಲಿ ರಾಜೇಶ್ ಪೈಲಟ್ ಮತ್ತು ಸುರೇಶ್ ಕಲ್ಮಾಡಿ ಅವರ ಪಾತ್ರವೂ ಇದೆ. ಅಂದು ವಾಯುಪಡೆಯ ವಿಮಾನವನ್ನು ಅವರಿಬ್ಬರು ನಡೆಸುತ್ತಿದ್ದರು. ಇದಾದ ಬಳಿಕ ಇಬ್ಬರಿಗೂ ಕಾಂಗ್ರೆಸ್‌ ಟಿಕೆಟ್ ನೀಡಿತ್ತು.

‘ತಮ್ಮದೇ ಜನರ ಮೇಲೆ ದಾಳಿ ನಡೆಸಿದವರಿಗೆ ಇಂದಿರಾ ಗಾಂಧಿ ಅವರು ಹೇಗೆ ಗೌರವ ನೀಡಿದರು ಎಂಬುದಕ್ಕೆ ಇದೊಂದು ಉತ್ತಮ ಉದಾಹರಣೆ’ ಎಂದು ಅಮಿತ್‌ ಮಾಳವೀಯ ಟ್ವಿಟರ್‌ನಲ್ಲಿ(ಎಕ್ಸ್‌) ಆರೋಪಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X