ಚುನಾವಣಾ ಪ್ರಚಾರಕ್ಕೆ ತೆರಳುತ್ತಿದ್ದ ಮಾಜಿ ಸಚಿವ, ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರ ಕಾರು ಪಲ್ಟಿಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ನಡೆದಿದೆ. ಅದೃಷ್ಟವಶಾತ್ ಭರತಿ ಬಸವರಾಜ್ ಅಪಾಯದಿಂದ ಪಾರಾಗಿದ್ದಾರೆ.
ಯಾದಗಿರಿಯ ಬಿಜೆಪಿ ಅಭ್ಯರ್ಥಿ ರಾಜುಗೌಡ ಪರ ಪ್ರಚಾರಕ್ಕಾಗಿ ಭೈರತಿ ಬಸವರಾಜ್ ತೆರಳುತ್ತಿದ್ದರು. ಈ ವೇಳೆ ಹಣಸಗಿಯ ಕಾಮನಟಗಿ ಬಳಿ ಅಪಘಾತವಾಗಿದೆ. ಭೈರತಿ ಬಸವರಾಜ್ ಅವರ ಕಾರು ಚಾಲಕ ಮತ್ತು ಗನ್‌ಮ್ಯಾನ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಹುಣಸಗಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದಾರೆ.