ಯಡಿಯೂರಪ್ಪರನ್ನು ಎದುರಾಕಿಕೊಂಡ ಯಾರೂ ಉಳಿದಿಲ್ಲ- ಆಕೆಯೂ ಸತ್ತಳು; ಬಿಜೆಪಿ ಮುಖಂಡನ ಸ್ಪೋಟಕ ಹೇಳಿಕೆ

Date:

ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯ ಜಾಮೀನುರಹಿತ ವಾರಂಟ್ ಹೊರಡಿಸಿದೆ. ವಾರಂಟ್ ಬಂದ ಬೆನ್ನಲ್ಲೇ ಯಡಿಯೂರಪ್ಪರನ್ನು ಬಿಜೆಪಿ ಸಮರ್ಥಿಸಿಕೊಳ್ಳುತ್ತಿದೆ. ಇದೇ ವೇಳೆ, ಯಡಿಯೂರಪ್ಪ ಪರವಾಗಿ ಮಾತನಾಡುವ ಭರದಲ್ಲಿ ಬಿಜೆಪಿ ಮುಖಂಡ ಜಿ ಮರಿಸ್ವಾಮಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ‘ಯಡಿಯೂರಪ್ಪರನ್ನು ಎದುರು ಹಾಕಿಕೊಂಡವರು ಯಾರೂ ಉಳಿದಿಲ್ಲ. ದೂರುದಾರ ಮಹಿಳೆಯೂ ಸತ್ತುಹೋದಳು’ ಎಂದು ಹೇಳಿದ್ದಾರೆ. ಅವರ ಹೇಳಿಕೆ ಮಹಿಳೆಯ ಸಾವಿನ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.

- Advertisement -

ಸಕಲೇಶಪುರದಲ್ಲಿ ಮಾತನಾಡಿರುವ ಮರಿಸ್ವಾಮಿ, “ಯಡಿಯೂರಪ್ಪ ಸಾಹೇಬ್ರನ್ನು ಎದುರು ಹಾಕಿಕೊಂಡವರು ಯಾರೂ ಉಳಿದಿಲ್ಲ. ಅವಳೂ ಕೂಡ ಹದಿನೈದು ದಿನಗಳ ಹಿಂದೆ ಸತ್ತುಹೋದಳು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಲಿಂಗಾಯಿತ ಸಮುದಾಯದವಳೇ ಆದ ಮಹಿಳೆಯೊಬ್ಬಳು ತನ್ನ ಮಗಳೊಂದಿಗೆ ಯಡಿಯೂರಪ್ಪನವರ ನಿವಾಸಕ್ಕೆ ಬಂದಿದ್ದಳು. ಬಜಾಜ್ ಕಂಪನಿಯಿಂದ ನನಗೆ 5,000 ಕೋಟಿ ರುಪಾಯಿ ಬರುವುದಿದೆ. ಇದಕ್ಕೆ ಸಹಾಯ ಮಾಡಿ ಎಂದಳು. ಯಡಿಯೂರಪ್ಪ ಸಾಹೇಬ್ರು ಪೊಲೀಸ್ ಕಮಿಷನರ್‌ಗೆ ಫೋನ್ ಮಾಡಿ, ಇವರ ಸಮಸ್ಯೆ ಏನಿದೆಯೋ ನೋಡಿ‌ ಎಂದು ಹೇಳಿ ಅವರ ಬಳಿ ಆಕೆಯನ್ನು ಕಳಿಸಿದರು. ನಂತರ ಆಕೆ ಸಾಹೇಬ್ರ ವಿರುದ್ಧ ಇಲ್ಲಸಲ್ಲದ ದೂರು ದಾಖಲಿಸಿದರು. ಈ‌ ಪ್ರಕರಣದಲ್ಲಿ‌ ನನ್ನ ಹೆಸರೂ ಇದೆ. ನಾನೂ ಮತ್ತು ನನ್ನ ಸ್ನೇಹಿತ ರುದ್ರೇಶ್ ಇಂದು ಸಿಐಡಿ‌ ಮುಂದೆ ಹೇಳಿಕೆ ನೀಡಿದ್ದೇವೆ” ಎಂದು ಮರಿಸ್ವಾಮಿ ಹೇಳಿದ್ದಾರೆ.

“ಯಡಿಯೂರಪ್ಪ ಸಾಹೇಬ್ರನ್ನು ಬಂಧಿಸುತ್ತಾರೆ ಎಂದು ಟಿವಿ ಚಾನಲ್‌ಗಳಲ್ಲಿ ಸುದ್ದಿ ಬರುತ್ತಿದೆ. ಯಡಿಯೂರಪ್ಪ ಸಾಹೇಬ್ರನ್ನು ಎದುರು ಹಾಕಿಕೊಂಡವರು ಯಾರೂ ಉಳಿದಿಲ್ಲ. ಅವಳೂ (ಸಂತ್ರಸ್ತೆಯ ತಾಯಿ) ಹದಿನೈದು‌ ದಿನಗಳ ಹಿಂದೆ ಸತ್ತು ಹೋದಳು” ಎಂದು‌ ಅವರು ಹೇಳಿದರು.

ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದ ಸಂತ್ರಸ್ತೆಯ ತಾಯಿ ಇತ್ತೀಚಿಗೆ ಸಾವನ್ನಪ್ಪಿದ್ದಾರೆ. ಅವರು ಅನಾರೋಗ್ಯದಿಂದ‌ ಸಾವನ್ನಪ್ಪಿದರು ಎಂದು ಹೇಳಲಾಗಿದೆ. ಆದರೂ, ಅವರು ಆಕೆಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ, ಆ ಅನುಮಾನಗಳಿಗೆ ಮರಿಸ್ವಾಮಿ ಹೇಳಿಕೆ ಮತ್ತಷ್ಟು ಪುಷ್ಟಿ ನೀಡಿದೆ.

17 ವರ್ಷದ ಸಂತ್ರಸ್ತೆ ತನ್ನ ಮೇಲೆ ಅತ್ಯಾಚಾರ ನಡೆದಿದೆ. ತನಗೆ ನ್ಯಾಯ ಕೊಡಿಸಿ ಎಂದು ಕೋರಿ ತನ್ನ ತಾಯಿಯೊಂದಿಗೆ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ, ರೇಪ್ ಆಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕರೆದುಕೊಂಡು ಆಕೆಯ ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಯಡಿಯೂರಪ್ಪ ವಿರುದ್ಧ ಮಾರ್ಚ್‌ 14ರಂದು ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಪ್ರಕರಣವನ್ನು ದಾಖಲಿಸಲಾಗಿತ್ತು. ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿತ್ತು. ಇದೀಗ, ಯಡಿಯೂರಪ್ಪ ಬಂಧನಕ್ಕೆ ನ್ಯಾಯಾಲಯ ವಾರಂಟ್ ಹೊರಡಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ ಮುಕ್ತ ತಾಲ್ಲೂಕು: ಸಾರ್ವಜನಿಕರ ಸಹಕಾರ ಅಗತ್ಯ

ಬಾಗೇಪಲ್ಲಿ: ಬಾಲ್ಯವಿವಾಹ, ಪೋಕ್ಸೋ, ಮಹಿಳೆಯರ ಮತ್ತು ಹೆಣ್ಣುಮಕ್ಕಳ ಸಾಗಾಣಿಕೆ ಮುಕ್ತ ಬಾಗೇಪಲ್ಲಿ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...