ಯತೀಂದ್ರ ಸಿದ್ದರಾಮಯ್ಯನವರ ಮಾತನ್ನು ತಿರುಚುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್

Date:

“ಯತೀಂದ್ರ ಅವರು ಜವಾಬ್ದಾರಿಯುತ ನಾಯಕ. ತಮಗೆ ಶಕ್ತಿ ನೀಡುವಂತೆ ಜನರನ್ನು ಕೇಳುವುದು ಸ್ವಾಭಾವಿಕ. ಅವರ ಹೇಳಿಕೆಯನ್ನು ತಿರುಚುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಕುಮಾರಕೃಪಾ ಅತಿಥಿ ಗೃಹದ ಬಳಿ ಮಾಧ್ಯಮಗಳೊಂದಿಗೆ ಮಾತನಾಡುತ್ತಿದ್ದ ವೇಳೆ, ‘ಲೋಕಸಭೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸ್ಥಾನ ಗೆದ್ದರೆ ಐದು ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ’ ಎಂಬ ಯತೀಂದ್ರ ಹೇಳಿಕೆ ಬಗ್ಗೆ ಕೇಳಿದಾಗ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

“ನಮ್ಮ ಸರ್ಕಾರ ಐದು ವರ್ಷ ಬಲಿಷ್ಠವಾಗಿರುತ್ತದೆ. ಸಿದ್ದರಾಮಯ್ಯ ಅವರು ಈಗ ನಮ್ಮ ಮುಖ್ಯಮಂತ್ರಿಗಳು. ಅವರು ಮುಖ್ಯಮಂತ್ರಿಯಾಗಿ, ನಾನು ಕಾಂಗ್ರೆಸ್ ಪಕ್ಷದ ರಾಜ್ಯ ಅಧ್ಯಕ್ಷನಾಗಿ ಇಬ್ಬರೂ ಒಟ್ಟಿಗೆ ಚುನಾವಣೆ ನಡೆಸುತ್ತೇವೆ. ಅವರ ನಾಯಕತ್ವದಲ್ಲಿ ಚುನಾವಣೆ ನಡೆಯಲಿದೆ. ಅದರಲ್ಲಿ ಅನುಮಾನವಿಲ್ಲ. ಆಸೆ ಪಡುವುದು, ಜನರಿಗೆ ಶಕ್ತಿ ನೀಡುವಂತೆ ಕೇಳುವುದು ತಪ್ಪಲ್ಲ. ನಮ್ಮ ಭಾಗದಲ್ಲಿ ನಾನು ಕೂಡ ಶಕ್ತಿ ನೀಡುವಂತೆ ಜನರ ಬಳಿ ಕೇಳುತ್ತೇನೆ. ಅದನ್ನು ತಿರುಚುವ ಅಗತ್ಯವಿಲ್ಲ. ಯತೀಂದ್ರ ಬಹಳ ಜವಾಬ್ದಾರಿಯುತ ನಾಯಕ. ನಾವು ಅವರಿಗೆ ಪ್ರೋತ್ಸಾಹ ನೀಡುತ್ತೇವೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಿಗಮ ಮಂಡಳಿ ಪಟ್ಟಿ ವಿಚಾರವಾಗಿ ಕೇಳಿದಾಗ, “ನಿಗಮ ಮಂಡಳಿ ನೇಮಕ ಪಟ್ಟಿ ಶೀಘ್ರವೇ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿಗಳು ಹೇಳಿದಾಗ ನಿಮ್ಮ ಗಮನಕ್ಕೆ ತರುತ್ತೇನೆ” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಶಿವಕುಮಾರ್ ಅವರಿಗೆ ಅಧಿಕಾರ ಸಿಗಬಾರದು ಎಂಬ ಅಧಿಕಾರ ಹಂಚಿಕೆ ಸೂತ್ರ ಕಾಂಗ್ರೆಸ್‌ನಲ್ಲಿ ಆಗಿದೆ ಎಂಬ ಬಿಜೆಪಿ ಟೀಕೆಯ ಬಗ್ಗೆ ಕೇಳಿದಾಗ, “ಬಿಜೆಪಿಯವರು ಅವರ ಪಕ್ಷದ ವಿಚಾರ ಸರಿ ಮಾಡಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

ಮೈಸೂರು ಸ್ಯಾಂಡಲ್ ನಕಲಿ ಸೋಪು ತಯಾರಕರ ಜತೆ ಬಿಜೆಪಿ ನಾಯಕರ ಒಡನಾಟದ ವಿಚಾರವಾಗಿ ಕೇಳಿದಾಗ, “ನಕಲಿ ಮೈಸೂರು ಸ್ಯಾಂಡಲ್ ಸೋಪ್‌ಗಳನ್ನು ನಾನೂ ನೋಡಿದ್ದೇನೆ. ನೈಜ ಹಾಗೂ ನಕಲಿ ಎರಡೂ ಮಾದರಿಯ ಸಾಬೂನು ನೋಡಿದ್ದೇವೆ. ನಕಲಿ ಸೋಪುಗಳು ಒಂದು ದಿನದ ನಂತರ ಬಣ್ಣ ಕಳೆದುಕೊಳ್ಳುತ್ತವೆ. ಈ ಬಗ್ಗೆ ತನಿಖೆಯಾಗಬೇಕು ಎಂದು ನಾನು ಈಗಾಗಲೇ ಹೇಳಿದ್ದೆ. ಈ ಹಿಂದೆ ಮೈಸೂರು ಲ್ಯಾಂಪ್ಸ್‌ಗಳನ್ನು ನಕಲು ಮಾಡಲಾಗುತ್ತಿತ್ತು. ಈಗ ಮೈಸೂರು ಸ್ಯಾಂಡಲ್ ನಕಲಿ ಸೋಪು ಬಗ್ಗೆ ತನಿಖೆ ಮಾಡಿ ಒಳ್ಳೆಯ ಕೆಲಸ ಮಾಡಿದ್ದಾರೆ. ಇದರ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಹುಬ್ಬಳ್ಳಿಯಲ್ಲಿ 300 ಕೋಟಿ ಮೌಲ್ಯದ ರೈಲ್ವೆ ಭೂಮಿಯನ್ನು ಕೇವಲ 80 ಕೋಟಿಗೆ ಬಿಡ್ ಕರೆಯಲು ಮುಂದಾಗಿದ್ದು, ಇದರ ಹಿಂದೆ ಬಿಜೆಪಿ ನಾಯಕರ ಕೈವಾಡದ ಬಗ್ಗೆ ಪ್ರಶ್ನಿಸಿದಾಗ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿ ಇಲ್ಲದೆ ಅನಗತ್ಯವಾಗಿ ಮಾತನಾಡುವುದಿಲ್ಲ” ಎಂದು ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕ ಹಾಕಲು ಬುಧವಾರವೇ ಕೊನೆ ದಿನ

ಫೆ.28ರೊಳಗೆ ಕಡ್ಡಾಯವಾಗಿ ಶೇ.60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ವಾಣಿಜ್ಯ ಮಳಿಗೆಗಳ ಮುಂದೆ...

ಬೆಂಗಳೂರು ಪೂರ್ವ | ಆರು ತಿಂಗಳಲ್ಲಿ 46 ‘ವ್ಹೀಲಿಂಗ್ ಮಾಡಿದ’ ಪ್ರಕರಣ ದಾಖಲು

ಬೆಂಗಳೂರಿನ ಸಂಚಾರ ಪೂರ್ವ ವಿಭಾಗದ ವ್ಯಾಪ್ತಿಯಲ್ಲಿ ಸೆಪ್ಟೆಂಬರ್ 2023 ರಿಂದ 2024ರ...

ಪಾಕಿಸ್ತಾನ ಜಿಂದಾಬಾದ್ | ಸದನದಲ್ಲಿ ಬಿಜೆಪಿ ಗಲಾಟೆ, ಕಲಾಪ ನಾಳೆಗೆ ಮುಂದೂಡಿಕೆ

ವಿಧಾನಸೌಧ ಆವರಣದಲ್ಲಿ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ್ದಾರೆ‌ ಎನ್ನಲಾಗಿರುವ ಪ್ರಕರಣವನ್ನು ರಾಜಕೀಯವಾಗಿ...