ಯತ್ನಾಳ್ 40 ಸಾವಿರ ಕೋಟಿ ಆರೋಪ | ಸತ್ಯಾಂಶವಿದ್ದರೆ ಸರ್ಕಾರ ತನಿಖೆ ಮಾಡಲಿ: ವಿಜಯೇಂದ್ರ

Date:

ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷದವರ ವಿರುದ್ಧವೇ ಆರೋಪಗಳ ಮೇಲೆ ಆರೋಪ ಮಾಡುತ್ತಿದ್ದಾರೆ. ಈ ಎಲ್ಲ ಬೆಳವಣಿಗೆಗಳ ನಡುವೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ವಿಜಯಪುರಕ್ಕೇ ಕರೆಸಿಕೊಂಡಿರುವ ಅವರ ಬೆಂಬಲಿಗರು, ಪರೋಕ್ಷವಾಗಿ ಯತ್ನಾಳ್ ಬಾಯಿ ಮುಚ್ಚಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ.

- Advertisement -

ಬಿಜೆಪಿ ರಾಜ್ಯಾಧ್ಯಕ್ಷನಾದ ಬಳಿಕ ಮೊದಲ ಬಾರಿಗೆ ವಿಜಯಪುರಕ್ಕೆ ಆಗಮಿಸಿದ ಬಿ ವೈ ವಿಜಯೇಂದ್ರ ಅವರಿಗೆ ಕಾರ್ಯಕರ್ತರು ಹಾಗೂ ಬಿಜೆಪಿ ಅಭಿಮಾನಿಗಳು ಅಭಿನಂದನಾ ಸಮಾರಂಭ ಏರ್ಪಡಿಸಿದ್ದರು. ಆದರೆ ಈ ಸಮಾರಂಭದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭಾಗವಹಿಸಿಯೂ ಇರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಮಾರಂಭದ ಬಳಿಕ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಈ ವೇಳೆ ಸಮಾರಂಭಕ್ಕೆ ಶಾಸಕ ಯತ್ನಾಳ್ ಗೈರು ವಿಚಾರದ ಬಗ್ಗೆ ಕೇಳಿದ್ದಕ್ಕೆ ಉತ್ತರಿಸಿದ ವಿಜಯೇಂದ್ರ, “ಇಲ್ಲಿ ಸಂಸದ ರಮೇಶ್ ಜಿಗಜಿಣಗಿ, ಮುರುಗೇಶ್ ನಿರಾಣಿ, ಬೆಳ್ಳುಬ್ಬಿ ಮತ್ತಿತರರು ಇದ್ದಾರೆ. ಇರುವವರ ಬಗ್ಗೆ ಮಾತನಾಡೋಣ. ಇಲ್ಲದವರ ಬಗ್ಗೆ ಮಾತನಾಡೋದು ಬೇಡ” ಎಂದು ತಿಳಿಸಿದರು.

ಯತ್ನಾಳ್ 40 ಸಾವಿರ ಕೋಟಿ ಆರೋಪದ ಬಗ್ಗೆ ಕೇಳಿದಾಗ, “ಯತ್ನಾಳ್ ಆರೋಪಗಳು ಹುಡುಗಾಟಿಕೆಯದ್ದು” ಎಂದು ಜರೆದಿದ್ದಾರೆ.

“ಆರೋಪ ಮಾಡಿರುವವರ ಹೇಳಿಕೆಗಳಲ್ಲಿ ಗಂಭೀರತೆ ಇದ್ದಿದ್ದರೆ ಉತ್ತರವನ್ನು ಕೊಡಬಹುದು. ಸತ್ಯಾಂಶ, ಹುರುಳಿದ್ದರೆ ಉತ್ತರಿಸಬಹುದು. ಆದರೆ ಹುಡುಗಾಟಿಕೆಯ ಆರೋಪಗಳಿಗೆ ಉತ್ತರ ಕೊಡುವ ಅವಶ್ಯಕತೆ ನನಗಿಲ್ಲ” ಎಂದು ತಿಳಿಸಿದರು.

“ರಾಜ್ಯ ಸರ್ಕಾರವು ಯಡಿಯೂರಪ್ಪ ಮತ್ತು ಅವರ ಕುಟುಂಬದವರ ಮೇಲೆ ಯಾವುದೇ ಅನುಕಂಪ ತೋರುವ ಅವಶ್ಯಕತೆ ಇಲ್ಲ. 40 ಸಾವಿರ ಕೋಟಿ ಆರೋಪ ಮಾಡಿರುವವರಲ್ಲಿ ದಾಖಲೆಗಳಿದ್ದರೆ ಸರ್ಕಾರಕ್ಕೆ ನೀಡಲಿ. ಅದರ ಬಗ್ಗೆ ಏನು ಮಾಡಬೇಕೆಂದು ಸರ್ಕಾರ ತೀರ್ಮಾನ ಮಾಡಿಕೊಳ್ಳಲಿ. ಅದರ ಬಗ್ಗೆ ನನಗೇನೂ ಅಂಜಿಕೆ ಇಲ್ಲ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳುವ ಮೂಲಕ ಯತ್ನಾಳ್‌ಗೆ ಟಾಂಗ್ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...