ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಬದಲಾವಣೆ ಆಗಲೇಬೇಕು. ಅಧ್ಯಕ್ಷರ ಚುನಾವಣೆಯಲ್ಲಿ ನಮ್ಮ ಬಣದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.
ಹುಬ್ಬಳ್ಳಿ ನಗರದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘ಶಾಸಕ ರಮೇಶ ಜಾರಕಿಹೊಳಿ ಅವರ ಜೊತೆ ಚರ್ಚಿಸಿ, ನಮ್ಮ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು’ ಎಂದು ಹೇಳಿದರು.
ಪಕ್ಷದ ಹೈಕಮಾಂಡ್ ವಿಜಯೇಂದ್ರ ಅವರನ್ನು ಏಕೆ ಅಧ್ಯಕ್ಷರನ್ನಾಗಿ ಮಾಡಿದೆಯೊ ಗೊತ್ತಿಲ್ಲ. ಪಕ್ಷದ ಹಿತದೃಷ್ಟಿಯಿಂದ ಅವರನ್ನು ಬದಲಾಯಿಸಲೇಬೇಕು ಎಂದು ಒತ್ತಾಯಿಸಿದರು.
ವಂಶಾಡಳಿತ ಹಾಗೂ ಭ್ರಷ್ಟಾಚಾರದ ವಿರುದ್ಧ ನಾವು ಹೋರಾಡುತ್ತಿದ್ದೇವೆ ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!
ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಹಲವು ಕಡತಗಳಿಗೆ ವಿಜಯೇಂದ್ರ ಅವರೇ ಯಡಿಯೂರಪ್ಪ ಅವರ ನಕಲಿ ಸಹಿ ಮಾಡಿದ್ದಾರೆ. ಇದರ ಬಗ್ಗೆ ತನಿಖೆಯಾಗಲಿ ಎಂದು ಒತ್ತಾಯಿಸಿದರು.
ನಕಲಿ ಸಹಿ ಮಾಡಿರುವ ವ್ಯಕ್ತಿಯನ್ನು ಪಕ್ಷದ ಅಧ್ಯಕ್ಷ ಅಥವಾ ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮಾಡಬಹುದೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
