ಬಿಜೆಪಿಯಿಂದ 6 ವರ್ಷ ಯತ್ನಾಳ್ ಉಚ್ಚಾಟನೆ; ಪಕ್ಷದ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದೇನು?

Date:

Advertisements

ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿ ಆದೇಶ ಹೊರಡಿಸಿರುವ ಬೆನ್ನಲ್ಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಬರೆದುಕೊಂಡಿರು ಅವರು, “ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ, ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ” ಎಂದಿದ್ದಾರೆ.

“ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ, ಸದ್ಯ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ” ಎಂದು ತಿಳಿಸಿದ್ದಾರೆ.

Advertisements

“ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ” ಎಂದಿದ್ದಾರೆ.

“ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ” ಎಂದು ಹೇಳಿದ್ದಾರೆ.

“ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ. ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ” ಎಂದು ತಿಳಿಸಿದ್ದಾರೆ.

“ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X