ಬಿಜೆಪಿ ಶಿಸ್ತು ಸಮಿತಿಯಿಂದ ಯತ್ನಾಳ್‌ಗೆ 2ನೇ ನೋಟಿಸ್

Date:

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ ಶಿಸ್ತುಸಮಿತಿ ಎರಡನೇ ಬಾರಿಗೆ ಶೋಕಾಸ್ ನೋಟಿಸ್ ನೀಡಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದೀರಿ, ಆದರೆ ಸಮಜಾಯಿಷಿ ನೀಡಿದ ರೀತಿಯಲ್ಲಿ ನೀವು ನಡೆದುಕೊಂಡಿಲ್ಲ ಎಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

- Advertisement -

ಕೇಂದ್ರೀಯ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರು ಶೋಕಾಸ್ ನೋಟಿಸ್ ನೀಡಿದ್ದಾರೆ. ತಮ್ಮ ಭರವಸೆ ತಾವೇ ಮುರಿದು ಮತ್ತೆ ಪದೇ ಪದೇ ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ಕೊಡುತ್ತಿದ್ದ ಯತ್ನಾಳ್‌ಗೆ ಇಂದು ಎರಡನೇ ಶೋಕಾಸ್ ನೋಟಿಸ್ ಕೊಟ್ಟು ಮತ್ತೆ ಸ್ಪಷ್ಟನೆ ನೀಡುವಂತೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಹಿಂದೆ ನೀಡಲಾಗಿದ್ದ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಿದ್ದೀರಿ. ಮುಂದಿನ ದಿನಗಳಲ್ಲಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದಿಲ್ಲ ಎಂದು ಹೇಳಿದ್ದೀರಿ. ಆದರೆ ಸಮಜಾಯಿಷಿ ನೀಡಿದ ರೀತಿಯಲ್ಲಿ ನೀವು ನಡೆದುಕೊಂಡಿಲ್ಲ. ಪಕ್ಷ ವಿರೋಧ ಚಟುವಟಿಕೆಗಳನ್ನು ಮುಂದುವರಿಸಿದ್ದೀರಿ. ಹೀಗಾಗಿ ಈ ಬಗ್ಗೆ 72 ಗಂಟೆಗಳಲ್ಲಿ ಸ್ಪಷ್ಟನೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಪಾರದರ್ಶಕತೆ ನಗೆಪಾಟಲಿಗೀಡಾಯಿತೇ?

ಇದಕ್ಕೂ ಮುನ್ನ ಕಳೆದ ವರ್ಷದ ಡಿಸೆಂಬರ್ 02 ರಂದು ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಮೊದಲ ಶೋಕಾಸ್ ನೋಟಿಸ್ ನೀಡಿತ್ತು. ಆಗ ಯತ್ನಾಳ್ ಬಹಿರಂಗ ಹೇಳಿಕೆ ಕೊಡುವುದಿಲ್ಲ ಎಂದು ಭರವಸೆ ನೀಡಿ, ಶೋಕಾಸ್ ನೋಟಿಸ್‌ಗೆ ಉತ್ತರಿಸಿದ್ದರು.

ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿರುವುದಕ್ಕೆ ಯತ್ನಾಳ್​ ಸಿಡಿದೆದ್ದಿದ್ದು, ಬಹಿರಂಗವಾಗಿಯೇ ಯಡಿಯೂರಪ್ಪ ಹಾಗೂ ವಿಜಯೇಂದ್ರ ವಿರುದ್ಧ ಟೀಕೆಗಳನ್ನು ಮಾಡುತ್ತಲೇ ಬಂದಿದ್ದಾರೆ. ಹೀಗಾಗಿ ಕಳೆದ ವರ್ಷ ಡಿಸೆಂಬರ್‌ನಲ್ಲಿಯೂ ಯತ್ನಾಳ್​ಗೆ ಶಿಸ್ತುಪಾಲನಾ ಸಮಿತಿ ಮೊದಲ ಶೋಕಾಸ್ ನೋಟಿಸ್ ಜಾರಿಗೊಳಿಸಿತ್ತು. ಆದರೆ ನೋಟಿಸ್‌ಗೆ ಯತ್ನಾಳ್​ ಉತ್ತರ ನೀಡದೆ ಖುದ್ದು ಶಿಸ್ತು ಸಮಿತಿ ಮುಂದೆ ಹಾಜರಾಗಿ ವಿವರಣೆ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಪ್ರಮಾಣ ವಚನ ಸ್ವೀಕಾರ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರು ಶುಕ್ರವಾರ ಅಧಿಕಾರ...

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

ಚರ್ಚ್‌ನಲ್ಲಿ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಫಾದರ್ ವಿರುದ್ಧ ಪೋಕ್ಸೋ ಕೇಸ್

ಪ್ರಾರ್ಥನೆಗಾಗಿ ಚರ್ಚ್‌ಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ...