ಬಣ ರಾಜಕಾರಣ ಮಾಡಿಲ್ಲ, ನಾಯಕತ್ವಕ್ಕೆ ವಿಜಯೇಂದ್ರ ಸಮರ್ಥನಲ್ಲ; ಬಿಜೆಪಿ ನೋಟಿಸ್‌ಗೆ ಯತ್ನಾಳ್ ಉತ್ತರ

Date:

ತನ್ನದೇ ಬಣ ಕಟ್ಟಿಕೊಂಡು, ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ ಆರೋಪದ ಮೇಲೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೀಡಿದ್ದ ನೋಟಿಸ್‌ಗೆ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್‌ ಉತ್ತರಿಸಿದ್ದಾರೆ. ನಾವು ನಾವುದೇ ಬಣ ರಾಜಕಾರಣ ಮಾಡಿಲ್ಲ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಯಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಿ, ಸಮರ್ಥರನ್ನು ಆಯ್ಕೆ ಮಾಡಬೇಕು ಎಂದು ಹೇಳಿದ್ದಾರೆ.

- Advertisement -

ಯತ್ನಾಳ್‌ಗೆ ಬಿಜೆಪಿ ಶಿಸ್ತು ಸಮಿತಿ ಫೆಬ್ರವರಿ 10ರಂದು 2ನೇ ಬಾರಿಗೆ ನೋಟಿಸ್‌ ನೀಡಿತ್ತು. 72 ಗಂಟೆಗಳ ಒಳಗೆ ಉತ್ತರ ನೀಡುವಂತೆ ಸೂಚಿಸಿತ್ತು. ಆ ನೋಟಿಸ್‌ಗೆ ಯತ್ನಾಳ್‌ ಉತ್ತರಿಸಿದ್ದಾರೆ. “ಯಾವುದೇ ಬಣ ರಾಜಕಾರಣ ಮಾಡಿಲ್ಲ. ಪಕ್ಷಕ್ಕೆ ಧಕ್ಕೆಯಾಗುವ ರೀತಿಯಲ್ಲಿ ಯಾವುದೇ ಕೆಲಸ ಮಾಡಿಲ್ಲ. ಪಕ್ಷದ ಚೌಕಟ್ಟಿನೊಳಗೆಯೇ ವಕ್ಫ್‌ ಆಸ್ತಿ ವಿರುದ್ದದ ಹೋರಾಟ ನಡೆಸಿದ್ದೇನೆ. ತಂಡವಾಗಿ ನಡೆಸಿದ ಆ ಹೋರಾಟ ಯಶಸ್ಸು ಕಂಡಿದೆ” ಎಂದು ಉತ್ತರಿಸಿದ್ದಾರೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿಜಯೇಂದ್ರ ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ. ಅವರು ಪಕ್ಷದ ಹಿರಿಯರು ಮತ್ತು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ಕೈಗೊಂಡ ಎಲ್ಲ ಹೋರಾಟಗಳು ವಿಫಲವಾಗಿವೆ. ಇದಕ್ಕೆ ವಿಜಯೇಂದ್ರ ಅವರ ಅಸಮರ್ಥತೆಯೇ ಕಾರಣ” ಎಂದು ಆರೋಪಿಸಿದ್ದಾರೆ.

“ಕರ್ನಾಟಕದಲ್ಲಿ ಬಿಜೆಪಿಯೊಳಗೆ ಕುಟುಂಬ ರಾಜಕಾರಣ, ಸ್ವಜನಪಕ್ಷಪಾತಕ್ಕೆ ಅಂತ್ಯ ಹಾಡಬೇಕು. ಮುಂದಿನ ಚುನಾವಣೆ ವೇಳೆಗೆ ಬಿಜೆಪಿ ಬಲಗೊಳ್ಳಬೇಕೆಂದರೆ, ಈಗಲೇ ರಾಜ್ಯಾಧ್ಯಕ್ಷರನ್ನು ಬದಲಿಸಬೇಕು. ಎಲ್ಲರನ್ನು ವಿಶ್ವಾಸದಿಂದ ನಿಭಾಯಿಸಬಲ್ಲವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಬೇಕು” ಎಂದು ಒತ್ತಾಯಿಸಿರುವುದಾಗಿ ತಿಳಿದುಬಂದಿದೆ.

ಯತ್ನಾಳ್‌ಗೆ 2024ರ ಡಿಸೆಂಬರ್‌ನಲ್ಲಿಯೂ ನೋಟಿಸ್ ನೀಡಲಾಗಿತ್ತು. ಆಗ, ಶಿಸ್ತು ಸಮಿತಿಯ ಎದುರು ಖುದ್ದು ಹಾಜರಾಗಿದ್ದ ಯತ್ನಾಳ್‌, ಪಕ್ಷದ ನಾಯಕರ ವಿರುದ್ಧ ಬಹಿರಂಗವಾಗಿ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಭರವಸೆ ನೀಡಿದ್ದರು. ಆದರೆ, ಮತ್ತೆ ವಾಗ್ದಾಳಿಯನ್ನು ಮುಂದುವರೆಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...