ಬಿಜೆಪಿಯ ಇಬ್ಬರು ನಾಯಕರಿಗೆ ಯತ್ನಾಳ್‌ ಎಚ್ಚರಿಕೆ

Date:

ಸಾಮಾನ್ಯವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸದಾ ಕೆಂಡ ಕಾರುತ್ತಿದ್ದ ಶಾಸಕ ಯತ್ನಾಳ್, ಇದೀಗ ಅಚ್ಚರಿ ಎಂಬಂತೆ ಸಿದ್ದರಾಮಯ್ಯರ ವ್ಯಕ್ತಿತ್ವವನ್ನು ಶ್ಲಾಘಿಸಿದ್ದಾರೆ. “ಸಿದ್ದರಾಮಯ್ಯ ಎಂದಿಗೂ ದ್ವೇಷ ರಾಜಕಾರಣ ಮಾಡಿಲ್ಲ. ಆದರೆ, ಈಗ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇಲ್ಲ. ಮುಂದಿನ ದಿನಗಳಲ್ಲಿ ಅವರಿದ್ದ ರೀತಿಯ ಸೌಮ್ಯ ರಾಜಕರಣ ಇರುವುದಿಲ್ಲ. ಇನ್ನು ಮುಂದೆ, ಬಿಜೆಪಿಯ ಬಿ.ವೈ ವಿಜಯೇಂದ್ರ ಮತ್ತು ಆರ್‌ ಅಶೋಕ್ ಮಾತನಾಡುವ ಮುನ್ನ ಎಚ್ಚರಿಕೆ ಇಂದ ಇರಬೇಕು” ಎಂದು ಯತ್ನಾಳ್‌ ಎಚ್ಚರಿಕೆ ನೀಡಿದ್ದಾರೆ.

- Advertisement -

ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಯತ್ನಾಳ್, “ನಾನೊಬ್ಬ ಲಿಂಗಾಯತ ನಾಯಕನಾಗಿ ಸಿದ್ದರಾಮಯ್ಯನವರ ಬಗ್ಗೆ ಕೀಳಾಗಿ ಮಾತನಾಡುವುದಿಲ್ಲ. ಅವರು ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಅನುಭವಿ ಹಾಗೂ ಹಿರಿಯ ನಾಯಕರು. ಅವರಲ್ಲಿರುವ ಅತ್ಯಂತ ಪ್ರಶಂಸನೀಯ ಗುಣವೆಂದರೆ, ಅವರು ಎಂದಿಗೂ ವೈಯಕ್ತಿಕ ದ್ವೇಷದ ರಾಜಕಾರಣ ಮಾಡುವುದಿಲ್ಲ. ವಿರೋಧ ಪಕ್ಷದವರು ನಾವು ಎಷ್ಟೇ ಟೀಕೆ ಮಾಡಿದರೂ, ಅವರು ಹಳೆಯ ಫೈಲ್‌ಗಳನ್ನು ತೆಗೆದು ದ್ವೇಷ ಸಾಧಿಸುವ ವ್ಯಕ್ತಿಯಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮುಖ್ಯಮಂತ್ರಿ ಬದಲಾವಣೆ ಕುರಿತು ಮಾತನಾಡಿದ ಯತ್ನಾಳ್, ಸ್ವಪಕ್ಷ (ಬಿಜೆಪಿ) ರಾಜ್ಯಾಧ್ಯಕ್ಷರ ವಿರುದ್ಧವೇ ಪರೋಕ್ಷವಾಗಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. “ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೆ ಕಾಂಗ್ರೆಸ್‌ನವರಿಗಿಂತ ಹೆಚ್ಚು ಸಂತೋಷಪಡುವುದು ನಮ್ಮ ಶಾಸಕಾಂಗ ಪಕ್ಷದ ನಾಯಕರು (ಆರ್ ಅಶೋಕ್) ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ. ಅವರಿಬ್ಬರೂ ಆಂತರಿಕವಾಗಿ ಬ್ಯುಸಿನೆಸ್ ಪಾರ್ಟ್ನರ್‌ಗಳು” ಎಂದಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...

ಪಶ್ಚಿಮ ಬಂಗಾಳ | ದುರ್ಗಾ ಪೂಜೆ ಪಂಡಾಲ್‌ನಲ್ಲಿ ಮಮತಾ ಮೇಲೆ ದಾಳಿ; ಟಿಎಂಸಿ ಮುಖಂಡರೇ ಗುರಿಯೆ?

ಈಗಾಗಲೇ ಸರಣಿ ದಾಳಿಯು ಟಿಎಂಸಿ ಕಾರ್ಯಕರ್ತರಲ್ಲಿ ಆತಂಕ ಸೃಷ್ಟಿಸಿದೆ. ಹೀಗಿರುವಾಗ ನಿನ್ನೆಯಷ್ಟೇ...

ದಿನಸಿ ಬೆಲೆ ಏರಿಕೆ ಬರೆ; ಗ್ರಾಮೀಣ ಕುಟುಂಬಗಳ ಬಜೆಟ್‌ಗೆ ಕತ್ತರಿ

ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲದ ಬೆಲೆ ಏರಿಕೆಯ...

KPSC ಅಕ್ರಮ | ಫೋನ್ ಟ್ಯಾಪಿಂಗ್ ಆರೋಪದ ನೆರಳು; ಹೈಕೋರ್ಟ್ ಎಸ್‌ಐಟಿ ತಂಡಕ್ಕೆ ಸುಪ್ರೀಂ ಬ್ರೇಕ್

ಕರ್ನಾಟಕ ಲೋಕಸೇವಾ ಆಯೋಗದ (KPSC) ಗಂಭೀರ ಅಕ್ರಮ ಮತ್ತು ಭ್ರಷ್ಟಾಚಾರ ಪ್ರಕರಣಗಳ...