ಯತ್ನಾಳ್ ಬೆನ್ನಲ್ಲೇ ಶಾಸಕ ಸೋಮಶೇಖರ್, ಶಿವರಾಮ್ ಹೆಬ್ಬಾರ್ ಉಚ್ಚಾಟನೆ ಸಾಧ್ಯತೆ; ಬಿಜೆಪಿ ಸುಳಿವು

Date:

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿದೆ. ಅವರ ಉಚ್ಚಾಟನೆ ಬೆನ್ನಲ್ಲೇ ಇನ್ನಿಬ್ಬರು ಬಿಜೆಪಿ ಶಾಸಕರಾದ ಎಸ್‌.ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನೂ ಪಕ್ಷದಿಂದ ಉಚ್ಚಾಟಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

- Advertisement -

ಈ ಇಬ್ಬರೂ ಶಾಸಕರು ಕಾಂಗ್ರೆಸ್‌ ವಲಯದಲ್ಲಿ ಹೆಚ್ಚು ಗುರುತಿಸಿಕೊಳ್ಳುತ್ತಿದ್ದು, ಕಾಂಗ್ರೆಸ್‌ ಕಾರ್ಯಕ್ರಮಗಳಲ್ಲಿ ವೇದಿಕೆಯನ್ನೂ ಹಂಚಿಕೊಂಡಿದ್ದಾರೆ. ಪಕ್ಷದ ವಿರುದ್ಧ ಹೇಳಿಕೆಗಳನ್ನೂ ನೀಡುತ್ತಿದ್ದಾರೆ. ಇಬ್ಬರೂ ಬಿಜೆಪಿಯಿಂದ ಒಂದು ಕಾಲು ಹೊರಗಿಟ್ಟಿದ್ದಾರೆ ಎಂದೂ ಹೇಳಲಾಗುತ್ತಿದೆ. ಹೀಗಾಗಿ, ಇಬ್ಬರು ಕೂಡ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇಬ್ಬರಿಗೂ ಬಿಜೆಪಿ ಶಿಸ್ತು ಕಮಿಟಿ ನೋಟಿಸ್‌ ನೀಡಿದ್ದು, 72 ಗಂಟೆಯೊಳಗೆ ಉತ್ತರಿಸುವಂತೆ ಸೂಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಈ ನಡುವೆ, ಯತ್ನಾಳ್ ಉಚ್ಚಾಟನೆ ಬಗ್ಗೆ ಮಾತನಾಡಿರುವ ಬಿಜೆಪಿ ಶಿಸ್ತು ಸಮಿತಿ ರಾಜ್ಯಾಧ್ಯಕ್ಷ ಲಿಂಗರಾಜ ಪಾಟೀಲ್, “ಯತ್ನಾಳ್ ವಿರುದ್ಧದ ಕ್ರಮವು ಎಲ್ಲರಿಗೂ ಎಚ್ಚರಿಕೆ ಗಂಟೆಯಾಗಿದೆ. ಶಾಸಕ ಎಸ್‌.ಟಿ ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ವಿರುದ್ಧವೂ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಹೇಳಿದ್ದಾರೆ. ಅವರ ಹೇಳಿಕೆಯು ಈ ಇಬ್ಬರೂ ಶಾಸಕರನ್ನು ಬಿಜೆಪಿಯಿಂದ ಉಚ್ಚಾಟಿಸುವ ಸಾಧ್ಯತೆ ಕುರಿತಾದ ಚರ್ಚೆಗಳನ್ನು ಹುಟ್ಟುಹಾಕಿದೆ.

ಈ ವರದಿ ಓದಿದ್ದೀರಾ?: ನಟಿ ರನ್ಯಾ ಬಗ್ಗೆ ಅಶ್ಲೀಲ ಹೇಳಿಕೆ: ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್

ಇತ್ತ, ಯತ್ನಾಳ್ ಉಚ್ಛಾಟನೆ ವಿರುದ್ಧ ಬಿಜೆಪಿಯೊಳಗೆ ಮತ್ತು ಪಂಚಮಸಾಲಿ ಸಮುದಾಯದಲ್ಲಿ ಆಕ್ಷೇಪ, ಆಕ್ರೋಶ ವ್ಯಕ್ತವಾಗಿವೆ. ಪಂಚಮಸಾಲಿ ಸಮುದಾಯದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು, “ಯತ್ನಾಳ್‌ ಉಚ್ಚಾಟನೆಯನ್ನು ಪಕ್ಷವು ವಾಪಸ್‌ ಪಡೆಯಬೇಕು. ಇಲ್ಲದಿದ್ದಲ್ಲಿ, ಬಿಜೆಪಿಯಲ್ಲಿರುವ ಪಂಚಾಮಸಾಲಿ ಮುಖಂಡರು ಪಕ್ಷಕ್ಕೆ ರಾಜೀನಾಮೆ ನೀಡಿ, ಎಲ್ಲರೂ ಹೊರಬರಬೇಕು” ಎಂದು ಕರೆಕೊಟ್ಟಿದ್ದಾರೆ.

ಬಿಜೆಪಿ ಹಿರಿಯ ನಾಯಕ, ವಿಧಾನಸಭೆ ವಿಪಕ್ಷ ಉಪನಾಯಕ ಅರವಿಂದ​ ಬೆಲ್ಲದ್ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ. “ಯತ್ನಾಳ್ ತಮ್ಮ ಮನಸ್ಸಿನಲ್ಲಿ ಇದ್ದುದ್ದನ್ನು ನೇರವಾಗಿ ಮಾತನಾಡುತ್ತಿದ್ದರು. ಪಕ್ಷದಿಂದ ಯತ್ನಾಳ್ ಅವ​ರನ್ನು ಉಚ್ಚಾಟಿಸಿರುವುದು ಬೇಸರ ತಂದಿದೆ. ಆದರೆ, ಹೈಕಮಾಂಡ್ ನಿರ್ಧಾರಕ್ಕೆ ತಲೆಬಾಗುವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ ಚುನಾವಣೆ : ಬಿಜೆಪಿ-ಕಾಂಗ್ರೆಸ್‌ ತೀವ್ರ ಪೈಪೋಟಿ, ಗೆಲುವು ಯಾರಿಗೆ?

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ತಡೆ...

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ ಸಂವಿಧಾನಾತ್ಮಕ ಪರಿಹಾರವೇನು?

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು...

ವೈಎಸ್‌ಆರ್‌ಸಿಪಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ವಿಶೇಷ ಪೀಠ ರಚನೆ!

ಆಂಧ್ರಪ್ರದೇಶದಲ್ಲಿ ನಡೆದ ಹಿಂಸಾಚಾರದಿಂದಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ತಮ್ಮ ಅಭ್ಯರ್ಥಿಗಳು ನಾಮಪತ್ರ...