ಕೇಂದ್ರದ ವಿರುದ್ಧ ಯಡಿಯೂರಪ್ಪ ಅಂತೂ ಧ್ವನಿ ಎತ್ತಲಿಲ್ಲ, ನಾನು ಎತ್ತಬಾರದೇ: ಸಿಎಂ ಸಿದ್ದರಾಮಯ್ಯ ಪ್ರಶ್ನೆ

Date:

Advertisements

ಮುಖ್ಯಮಂತ್ರಿಯಾಗಿದ್ದಾಗ ಯಡಿಯೂರಪ್ಪನವರು ಕೇಂದ್ರದ ವಿರುದ್ಧ ಧ್ವನಿ ಎತ್ತಲಿಲ್ಲ. ರಾಜ್ಯಕ್ಕೆ ಆದ ಕೇಂದ್ರದ ಅನ್ಯಾಯ ವಿರೋಧಿಸುವುದು ತಪ್ಪೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದರು.

ನವದೆಹಲಿಯಲ್ಲಿ ತೆರಿಗೆ ಹಂಚಿಕೆಯ ಬಗ್ಗೆ ರಾಜ್ಯದ ಪ್ರತಿಭಟನೆಯನ್ನು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪವರು ಟೀಕಿಸಿರುವುದಕ್ಕೆ ದಾವಣಗೆರೆಯಲ್ಲಿ ಪ್ರತಿಕ್ರಿಯಿಸಿ, “ಕರ್ನಾಟಕದಿಂದ ನೀಡಲಾಗಿರುವ ತೆರಿಗೆಯನ್ನು ನಮಗೆ ನೀಡುತ್ತಿಲ್ಲ. 100 ರೂ.ಗೆ ಕೇವಲ 13 ರೂ. ರಾಜ್ಯಕ್ಕೆ ವಾಪಸ್ಸು ಬರುತ್ತಿದೆ. ರಾಜ್ಯದಿಂದ 4,30,000 ಕೋಟಿ ತೆರಿಗೆ ಬರುತ್ತಿದ್ದರೆ, ನಮಗೆ ಕೇವಲ 50,257 ಕೋಟಿ ರೂ.ಮಾತ್ರ ರಾಜ್ಯಕ್ಕೆ ಬರುತ್ತಿದೆ. ಕೇಂದ್ರದ ಈ ಧೋರಣೆಯನ್ನು ವಿರೋಧಿಸಲಾಗುತ್ತಿದೆ” ಎಂದರು.

ರಾಜ್ಯ ಸರ್ಕಾರದಿಂದ 650 ಕೋಟಿ ರೂ. ತಾತ್ಕಾಲಿಕ ಬರ ಪರಿಹಾರ

Advertisements

ಬರನಿರ್ವಹಣೆಗೆ ಸರ್ಕಾರದ ಕ್ರಮಗಳ ಬಗೆಗಿನ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, “ಬರ ನಿರ್ವಹಣೆಯ ಕ್ರಮವಾಗಿ, ಕುಡಿಯುವ ನೀರು, ಮೇವು, ಉದ್ಯೋಗ ನೀಡಲಾಗುತ್ತಿದ್ದು, ಒಟ್ಟು 860 ಕೋಟಿ ರೂ.ಗಳನ್ನು ಎಲ್ಲ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಜನರು ಗುಳೇ ಹೋಗದಂತೆ ತಪ್ಪಿಸಲು ಹಾಗೂ ಅವರ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದಂತೆ ಕ್ರಮಕೈಗೊಳ್ಳಲು ಸ್ಪಷ್ಟ ನಿರ್ದೇಶನ ನೀಡಲಾಗಿದೆ” ಎಂದರು.

“ತಾತ್ಕಾಲಿಕ ಪರಿಹಾರವಾಗಿ ಒಬ್ಬ ರೈತನಿಗೆ ತಲಾ ರೂ. 2000 ದಂತೆ ಸುಮಾರು 34 ಲಕ್ಷ ರೈತರಿಗೆ 650 ಕೋಟಿ ರೂ. ನೀಡಲಾಗಿದೆ. ಐದು ತಿಂಗಳು ಕಳೆದರೂ ಕೇಂದ್ರ ಸರ್ಕಾರ ಬರಪರಿಹಾರ ನೀಡಿಲ್ಲ. ರಾಜ್ಯದ ಬಿಜೆಪಿ ನಾಯಕರು ಕೇವಲ ಭಾಷಣ ಮಾಡುತ್ತಾರೆಯೇ ಹೊರತು, ಕೇಂದ್ರದೊಂದಿಗೆ ಸಂವಹಿಸಿ ಪರಿಹಾರ ದೊರಕಿಸಿ ಕೊಡುತ್ತಿಲ್ಲ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಕೇಂದ್ರದಿಂದ ರಾಜ್ಯದ ಪಾಲು ಬರಲಿಲ್ಲವೆಂದು ಕಾಂಗ್ರೆಸ್ – ಬಿಜೆಪಿ ನಡುವೆ ಹಗ್ಗಾ ಜಗ್ಗಾಟ ನಡೆದೆ. ಒಂದೆಜ್ಜೆ ಮುಂದೆ ಹೋಗಿ ಪರಸ್ಪರರು ಧರಣಿ ಪ್ರತಿಭಟನೆ ನಡೆಸಿದ್ರು. ಈ ಬಗ್ಗೆ ಬಿಳಿ ಪತ್ರ, ಕಪ್ಪು ಪತ್ರ ಬಿಡುಗಡೆ ಮಾಡೋದಾಗಿ ಕೂಗಾಡಿದ್ರೂ.. ಅದ್ರೂ ಕಾಂಗ್ರೆಸ್ – ಬಿಜೆಪಿ ಮಾತ್ರ ತಮಗೆ ಕೊಟ್ಟ ಹಣವೆಷ್ಟು ಅನ್ನೋದನ್ನು ಕಾಂಗ್ರೆಸ್ ನವರು ಹೇಳಿಲ್ಲ. ಅಲ್ಲದೇ, ನಾವು ಕಾಂಗ್ರೆಸ್ಸಿಗೆ ಕೊಟ್ಟ ಹಣದ ಬಗ್ಗೆ ಬಿಜೆಪಿ ಕೂಡ ಲೆಕ್ಕ ನೀಡಿಲ್ಲ… ಇಬ್ಬರು ಈ ಬಗ್ಗೆ ಮಾಧ್ಯಮಗಳ ಮೂಲಕ ಅಂಕಿ-ಅಂಶವನ್ನು ಬಿತ್ತರಿಸಿದ್ರೆ ಎಲ್ಲವೂ ಬಹಿರಂಗವಾಗ್ತಿತ್ತು. ಅಲ್ಲದೇ, ಜನ್ರು ಇಬ್ಬರ ಕುರಿತಂತೆ ತೀರ್ಮಾನಿಸುತ್ತಿದ್ದರು. ಅದ್ರೆ ಯಾವುದೇ ಮಾಹಿತಿ ನೀಡದೇ ಪರಸ್ಪರ ಗಾಳಿಯಲ್ಲಿ ಗುಂಡು ಹೊಡೆಯೋದು ಎಷ್ಟು ಸರಿ…

    ಮುಂದಾದ್ರೂ ಕೇಂದ್ರ ಕೊಟ್ಟಿದೆಷ್ಟು…ರಾಜ್ಯ ಪಡೆದ ಹಣದ ಪಾಲೆಷ್ಟು ಅನ್ನೋದನ್ನು ಮೀಡಿಯಾಗಳ ಮೂಲಕ ಪ್ರಕಟಿಸಲಿ…

    ಎಂ. ಶಿವರಾಂ.. ಬೆಂಗಳೂರು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X