ಯಡಿಯೂರಪ್ಪ ಅವರು ನಮ್ಮ ಪಕ್ಷದಲ್ಲಿ ಶಕುನಿ ಇದ್ದ ಹಾಗೆ: ಬಸನಗೌಡ ಪಾಟೀಲ ಯತ್ನಾಳ್‌

Date:

ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ನಮ್ಮ ಪಕ್ಷದಲ್ಲಿ ಶಕುನಿ ಇದ್ದ ಹಾಗೆ.
ಬಿ ಎಸ್​ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು ಏನೂ ನಡೆಯುತ್ತಿಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಕಿಡಿಕಾರಿದರು.

- Advertisement -

ಅಟಲ್​ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಪ್ರಯುಕ್ತ ವಿಜಯಪುರ ನಗರದಲ್ಲಿ ವಾಜಪೇಯಿ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಯತ್ನಾಳ್, “ಯಡಿಯೂರಪ್ಪ ಅವರು ಏನು ಹೇಳುತ್ತಾರೆ ಅದು ಉಲ್ಟಾ ನಡೆದಿರುತ್ತದೆ. ಈ ಹಿಂದೆ ಶೋಭಾ ಕರಂದ್ಲಾಜೆ ಬಿಜೆಪಿ ರಾಜ್ಯಾಧ್ಯಕ್ಷೆಯಾಗಲಿ ಎಂದಿದ್ದರು. ಬಸನಗೌಡ ಪಾಟೀಲ್​ ಯತ್ನಾಳ್ ಅವರು ವಿಪಕ್ಷ ನಾಯಕರಾಗಲು ನಮ್ಮ ಅಭ್ಯಂತರವಿಲ್ಲ ಎಂದು ಬಿ ವೈ ವಿಜಯೇಂದ್ರ ಹೇಳಿದ್ದರು. ಅಷ್ಟರಲ್ಲಿ ಹೈಕಮಾಂಡ್​ನಲ್ಲಿ ಎಲ್ಲಾ ಪ್ಯಾಕ್ ಮಾಡಿಕೊಂಡು ಬಂದಿದ್ದರು” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ರೈತರ ಬರಗಾಲ ಬಯಸುತ್ತಾರೆಂದು ಸಚಿವ ಶಿವಾನಂದ ಪಾಟೀಲ್‌ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಇದು ದುರ್ದೈವ, ಯಾಕಂದರೆ ಶಿವಾನಂದ ಪಾಟೀಲ್‌ ಈ ಹಿಂದೆ ರೈತರ ಆತ್ಮಹತ್ಯೆ ಬಗ್ಗೆನೂ ಮಾತನಾಡಿದ್ದರು. ಇವತ್ತು ಬರಗಾಲವನ್ನು ರೈತರು ಬಯಸುತ್ತಾರೆ ಅಂತ ಹೇಳಿದ್ದಾರೆ. ಇದನ್ನು ಯಾವ ರೀತಿ ಖಂಡನೆ ಮಾಡಬೇಕು ಗೊತ್ತಾಗುತ್ತಿಲ್ಲ. ಒಬ್ಬ ಜವಾಬ್ದಾರಿಯುತ ಮಂತ್ರಿಗಳು, ಅದರಲ್ಲಿಯೂ ಕೃಷಿ ಉತ್ಪನ್ನ ಮಾರುಕಟ್ಟೆ ಸಚಿವರು ರೈತರ ಬಗ್ಗೆ ಇಷ್ಟು ಹಗುರವಾಗಿ ಮಾತನಾಡಬಾರದು” ಎಂದರು.

ಮೂರನೇ ಟಿಪ್ಪು ಎಂದು ಸಚಿವ ಎಂ ಬಿ ಪಾಟೀಲ್ ಹೇಳಿಕೆ ವಿಚಾರವಾಗಿ ”ನಾನು ಮೂರನೇ ಟಿಪ್ಪು ಆದರೆ ಎಂ ಬಿ ಪಾಟೀಲ್ ನಾಲ್ಕನೇ ಟಿಪ್ಪು ಸುಲ್ತಾನ್” ಎಂದು ತಿರುಗೇಟು ಕೊಟ್ಟರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಹಿಜಾಬ್ ಆದೇಶ ವಾಪಸ್ ವಿಚಾರವಾಹಿ ಮಾತನಾಡಿ, “ಇದೇ ರೀತಿ ಡ್ರೆಸ್ ಇರಬೇಕು ಎಂದು ಈ ಹಿಂದೆ ನಮ್ಮ ಸರ್ಕಾರ ಇದ್ದಾಗ ಎಲ್ಲಿಯೂ ಹಸ್ತಕ್ಷೇಪ ಮಾಡಿಲ್ಲ. ಇಡೀ ದೇಶದಲ್ಲಿ ಎಲ್ಲಿಯೂ ಈ ವಿಷಯ ಇಲ್ಲ, ಕರ್ನಾಟಕದಲ್ಲಿ ಯಾಕೆ? ಇದು ಇವರೇ ತೆಗೆದಿದ್ದು, ಈ ವಿಚಾರ ಕಾಂಗ್ರೆಸ್​ಗೆ ಲೋಕಸಭೆಯಲ್ಲಿ ನಿಶ್ಚಿತವಾಗಿ ಮುಳುವಾಗುತ್ತದೆ” ಎಂದು ಹೇಳಿದರು.

“ಪ್ರಧಾನಿ‌ ಮೋದಿ ಅವರು 2024ರ ಚುನಾವಣೆ ಒಳಗೆ ಅಥವಾ ಚುನಾವಣೆ ಬಳಿಕ ಸಮಾನ ನಾಗರಿಕತೆಯನ್ನು ಜಾರಿಗೆ ತರಬಹುದು. ನಮ್ಮ ದೇಶದಲ್ಲಿ ಸಮಾನ ನಾಗರಿಕತೆ ತರಬೇಕು ಎಂದು ಸುಪ್ರೀಂ ಕೋರ್ಟ್ ಸಹ ಸಲಹೆ ಕೊಟ್ಟಿದೆ. ಎಲ್ಲರಿಗೂ ಅನುಕೂಲವಾಗುವಂತಹ ಸಮಾನ ನಾಗರಿಕತೆ ಭಾರತದಲ್ಲಿ ಕೆಲವೇ ದಿನಗಳಲ್ಲಿ ಜಾರಿಯಾಗಲಿದೆ” ಎಂದು ಭವಿಷ್ಯ ನುಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಕ್ರಮ: ಸಿಎಂ ಡಿ ಕೆ ಶಿವಕುಮಾರ್

"ಗ್ರಾಮ ಪಂಚಾಯಿತಿಗಳ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಇನ್ನಷ್ಟು...

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...