ಅಯೋಧ್ಯೆಯಲ್ಲಿ ಜನವರಿ 22ರಂದು ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭದಲ್ಲಿ ಭಾಗಿಯಾಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವುದಿಲ್ಲ. ಉದ್ಘಾಟನೆಯಾದ ಒಂದು ತಿಂಗಳೊಳಗೆ ಅಯೋಧ್ಯೆಗೆ ತೆರಳಿ, ದರ್ಶನ ಮಾಡುತ್ತೇನೆ” ಎಂದು ಹೇಳಿದ್ದಾರೆ.
“ದೇಶಾದ್ಯಂತ ರಾಮ ಪ್ರಾಣ ಪ್ರತಿಷ್ಠಾಪನೆ ವಿಚಾರ ಚರ್ಚೆಯಾಗುತ್ತಿದೆ. ಸಮಾರಂಭ ಯಾವುದೇ ಅಡ್ಡಿಯಿಲ್ಲದೆ ಅದ್ದೂರಿಯಾಗಿ ನಡೆಯುವ ವಿಶ್ವಾಸವಿದೆ” ಎಂದು ಹೇಳಿದ್ದಾರೆ.
“ಪ್ರಧಾನಿ ಮೋದಿ ಅವರು ಎರಡು ದಿನ ಮೊದಲೇ ಅಯೋಧ್ಯೆಗೆ ತೆರಳಲಿದ್ದಾರೆ. ಅವರು ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ” ಎಂದು ತಿಳಿಸಿದ್ದಾರೆ.
ಈ ನಡುವೆ, ಕುಟುಂಬ ಸಮೇತರಾಗಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಭಾಗಿಯಾಗುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ ಹೇಳಿದ್ದಾರೆ.