ಕಾಂಗ್ರೆಸ್‌ಗೆ ಯೋಗೇಶ್ವರ್ ಸೇರ್ಪಡೆ; ಕೆಪಿಸಿಸಿ ಕಚೇರಿಯಲ್ಲಿ ಗರಿಗೆದರಿದ ಚಟುವಟಿಕೆಗಳು

Date:

ಚನ್ನಪಟ್ಟಣ ಉಪಚುನಾವಣೆಗೆ ಬಿಜೆಪಿ ಟಿಕೆಟ್ ಕೊಡದ ಕಾರಣ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಅವರು ತಮ್ಮ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬಿಜೆಪಿ ತೊರೆದಿದ್ದಾರೆ. ಇದೀಗ, ಅವರು ಡಿಸಿಎಂ ಡಿ.ಕೆ ಶಿವಕುಮಾರ್ ಮತ್ತು ಮಾಜಿ ಸಂಸದ ಡಿ.ಕೆ ಸುರೇಶ್ ಜೊತೆ ಕಾಂಗ್ರೆಸ್‌ ಕಚೇರಿಗೆ ಬಂದಿದ್ದು, ಕೆಪಿಸಿಸಿ ಕಚೇರಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ.

- Advertisement -

ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿರುವ ಯೋಗೇಶ್ವರ್, ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಸಲ್ಲಿಸಿದ್ದರು. ಬಳಿಕ, ಬುಧವಾರ ಬೆಳಗ್ಗೆ ಡಿ.ಕೆ ಶಿವಕುಮಾರ್ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಯೋಗೇಶ್ವರ್, ಈಗ ಕಾಂಗ್ರೆಸ್‌ ಕಚೇರಿಗೆ ತೆರಳಿದ್ದು, ಸುದ್ದಿಗೋಷ್ಠಿ ನಡೆಸುತ್ತಿದ್ದಾರೆ. ಅವರನ್ನು ಕಾಂಗ್ರೆಸ್‌ಗೆ ಕರೆತರುವಲ್ಲಿ ಶಿವಕುಮಾರ್ ಮತ್ತು ಸುರೇಶ್ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಶಿವಕುಮಾರ್ ಮತ್ತು ಸುರೇಶ್ ಜೊತೆ ಕಾಂಗ್ರೆಸ್‌ ಕಚೇರಿಗೆ ಬಂದಿರುವ ಯೋಗೇಶ್ವರ್ ಅವರು ಸಚಿವ ಚಲುವರಾಯಸ್ವಾಮಿ, ಜಮೀರ್ ಅಹ್ಮದ್, ಕೃಷ್ಣ ಬೈರೇಗೌಡರ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಲಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಗೆ ಅಚ್ಚರಿಯ ಅಭ್ಯರ್ಥಿಯನ್ನು ಕಾಂಗ್ರೆಸ್‌ನಿಂದ ಕಣಕ್ಕಿಳಿಸುತ್ತೇವೆಂದು ಡಿ.ಕೆ ಸುರೇಶ್ ಈ ಹಿಂದೆ ಹೇಳಿದ್ದರು. ಇದೀಗ, ಯೋಗೇಶ್ವರ್ ಅವರನ್ನು ಪಕ್ಷಕ್ಕೆ ಕರೆತಂದಿದ್ದು, ಅವರಿಗೆ ಕಾಂಗ್ರೆಸ್‌ ಟಿಕೆಟ್ ಕೊಡಲಾಗುತ್ತದೆ ಎಂಬುದು ಸ್ಪಷ್ಟವಾಗಿದೆ.

ಒಂದೇ ಕಾರಿನಲ್ಲಿ ಬಂದ ಸಿಪಿ-ಡಿಕೆಶಿ
ಸಿ ಪಿ ಯೋಗೇಶ್ವರ್ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಒಂದೇ ಕಾರಿನಲ್ಲಿ ಕೆಪಿಸಿಸಿ ಕಚೇರಿಗೆ ಆಗಮಿಸಿದರು. ಈ ವೇಳೆ ಮಾಧ್ಯಮದ ಪ್ರತಿನಿಧಿಗಳು ಯೋಗೇಶ್ವರ್ ಅವರನ್ನು ಬೈಟ್ ಪಡೆದುಕೊಳ್ಳಲು ತಳ್ಳಾಟ-ನೂಕಾಟ ನಡೆಸಿದ ಘಟನೆ ಕೂಡ ನಡೆಯಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...