ಬಿಜೆಪಿಗೆ ಸಿ ಪಿ ಯೋಗೇಶ್ವರ್ ರಾಜೀನಾಮೆ ಕೊಟ್ಟಿರುವುದು ಆಶ್ಚರ್ಯ ಪಡುವಂತದ್ದು ಏನೂ ಇಲ್ಲ, ಗಾಳಿಯಲ್ಲಿ ಗುಂಡು ಹೊಡೆಯುವಂತ ಆರೋಪ ಅಲ್ಲ, ಯಾವಾಗ ತರಾತುರಿ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ರೋ ಅವತ್ತೇ ಗೊತ್ತಿತ್ತು ಇದರಲ್ಲಿ ಆಶ್ಚರ್ಯ ಏನು ಇಲ್ಲ” ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಜೆಪಿ ನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, “ಚನ್ನಪಟ್ಟಣ ಟಿಕೆಟ್ ವಿಚಾರದಲ್ಲಿ ಕಳೆದ ಎರಡು ತಿಂಗಳಿಂದ ನಿರಂತರವಾಗಿ ನನ್ನ ಹೆಸರು ಚಾಲ್ತಿಯಲ್ಲಿದೆ. ಜೆಡಿಎಸ್ ಕಾರ್ಯಕರ್ತರು ನಿಖಿಲ್‌ಗೆ ಟಿಕೆಟ್ ಕೊಟ್ರೆ ನಾವು ಕೆಲಸ ಮಾಡ್ತೀವಿ ಅಂದಿದ್ರು. ಇಲ್ಲಿ ಯಾವುದೇ ತೀರ್ಮಾನಗಳು ಅಂತಿಮ ಆಗಬೇಕಾದ್ರೆ ಎನ್‌ಡಿಎ ಕಡೆಯಿಂದ ಘೋಷಣೆ ಆಗಬೇಕು. ನಿನ್ನೆಯೂ ಕುಮಾರಸ್ವಾಮಿ ಅವರು ಇದನ್ನೇ ಹೇಳಿದ್ದಾರೆ. ‘ತಾಳಿದವನು ಬಾಳಿಯಾನು’ ಅಂತ. ಅಂತಿಮವಾಗಿ ನಮ್ಮ ನಾಯಕರು ಮತ್ತು ಬಿಜೆಪಿ ನಾಯಕರು ಅಭ್ಯರ್ಥಿಯನ್ನು ಘೋಷಣೆ ಮಾಡುತ್ತಾರೆ” ಎಂದರು.
ಕಾಂಗ್ರೆಸ್‌ಗೆ ಕುಮಾರಣ್ಣನೇ ಟಾರ್ಗೆಟ್
ಕಾಂಗ್ರೆಸ್‌ಗೆ ಕುಮಾರಸ್ವಾಮಿಯೇ ಟಾರ್ಗೆಟ್ ಮಾಧ್ಯಮ ಪ್ರಶ್ನೆಗೆ ಉತ್ತರಿಸಿ ಅವರು, “ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ 14 ಲೋಕಸಭೆ ಕ್ಷೇತ್ರಗಳಲ್ಲಿ 12 ಕ್ಷೇತ್ರವನ್ನು ಗೆದ್ದಿದ್ದೇವೆ. ಅದ್ರಲ್ಲಿ ಪ್ರಮುಖ ಪಾತ್ರ ನಮ್ಮ ಕಾರ್ಯಕರ್ತರು, ಕುಮಾರಣ್ಣನ ನಾಯಕತ್ವ ಈ ವಿಚಾರಕ್ಕೆ ಕುಮಾರಣ್ಣ ಟಾರ್ಗೆಟ್ ಮಾಡುತ್ತಿದ್ದಾರೆ” ಎಂದು ಹೇಳಿದರು.
ಯೋಗೇಶ್ವರ್ ಹೇಳಿಕೆಗೆ ಕುಮ್ಮಕ್ಕು ಕೊಟ್ಟವರು ಯಾರಂತ ಗೊತ್ತಾಗುತ್ತಿದೆ
“ಬಿಜೆಪಿಯ ರಾಜ್ಯಮಟ್ಟದ ಒಕ್ಕಲಿಗರನ್ನು ಕುಮಾರಣ್ಣ ಅವರು ತುಳಿತಾರೆ ಅನ್ನೋ ಮಾತಿಗೆ ಕುಮ್ಮಕ್ಕು ಕೊಟ್ಟವರು ಯಾರು ಎಂಬುದು ಪ್ರಸ್ತುತ ಬೆಳವಣಿಗೆ ನೋಡಿದರೆ ರಾಜ್ಯದ ಜನಕ್ಕೆ ಗೊತ್ತಾಗುತ್ತಿದೆ” ಎಂದು ನಿಖಿಲ್ ಕುಮಾರಸ್ವಾಮಿ ಪರೋಕ್ಷವಾಗಿ ಡಿ ಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.
ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ಮಾತನಾಡಿ, “ಎನ್‌ಡಿಎ ಅಭ್ಯರ್ಥಿ ನಿಲ್ಲಲಿದ್ದಾರೆ. ಸಾಮಾನ್ಯ ಕಾರ್ಯಕರ್ತ ಚುನಾವಣೆಗೆ ನಿಲ್ಲಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ” ಎಂದರು.