ಯುಪಿ ಬಿಜೆಪಿಯಲ್ಲಿ ಯೋಗಿ-ಮೌರ್ಯ ನಡುವೆ ಗುದ್ದಾಟ; ಮೋದಿ-ಶಾ ಚರ್ಚೆ

Date:

ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ತೀರಾ ಕಳಪೆ ಪ್ರದರ್ಶನ ನೀಡಿದೆ. ರಾಮಮಂದಿರವಿದ್ದ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋಲುಂಡು ಮುಖಭಂಗ ಅನುಭವಿಸಿದೆ. ಈ ಬೆನ್ನಲ್ಲೇ, ಉತ್ತರ ಪ್ರದೇಶ ಬಿಜೆಪಿಯಲ್ಲಿ ಆಂತರಿಕ ಕಲಹ ಭುಗಿಲೆದ್ದಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಮತ್ತು ಉಪ ಮುಖ್ಯಮಂತ್ರಿ ಕೇಶವ್ ಮೌರ್ಯ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಉತ್ತರ ಪ್ರದೇಶ ಬಿಜೆಪಿಯ ಗಲಾಟೆಗಳ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಅವರು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು, ಸುಧೀರ್ಘ ಸಭೆ ನಡೆಸಿದ್ದಾರೆ. ಇದಕ್ಕೂ ಮುನ್ನ, ಬಿಜೆಪಿ ರಾಜ್ಯಾಧ್ಯಕ್ಷ ಭೂಪೇಂದ್ರ ಚೌಧರಿ ಕೂಡ ಮೋದಿ ಅವರನ್ನು ಭೇಟಿ ಮಾಡಿದ್ದು, ತಮ್ಮ ರಾಜ್ಯದಲ್ಲಿ ಪಕ್ಷದ ಕಳಪೆ ಪ್ರದರ್ಶನ ಹೊಣೆ ಹೊತ್ತುಕೊಳ್ಳುವುದಾಗಿ ಹೇಳಿಕೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

ಮೋದಿ-ಶಾ ಭೇಟಿಯಲ್ಲಿ ಮಂಗಳವಾರ ನಡೆದ ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಮೌರ್ಯ ಮತ್ತು ಪಕ್ಷದ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ನಡುವಿನ ಸಭೆಯಲ್ಲಿ ಏನಾಯಿತು ಎಂಬುದನ್ನು ಮೋದಿಗೆ ಅಮಿತ್ ಶಾ ವಿವರಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ರಾಷ್ಟ್ರೀಯ ಉಸ್ತುವಾರಿಗಳ ಬದಲಾವಣೆಯ ಅಗತ್ಯವಿದೆ. ಜೊತೆಗೆ, ರಾಜ್ಯ ಘಟಕದೊಳಗೆ ಸಾಂಸ್ಥಿಕ ಬದಲಾವಣೆಗಳನ್ನು ತರಬೇಕಿದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಯೋಗಿ ಮತ್ತು ಮೌರ್ಯ ಭಿನ್ನಾಭಿಪ್ರಾಯವು ಪಕ್ಷಕ್ಕೆ ಸವಾಲಾಗಿದೆ ಎಂದು ಬಿಂಬಿಸಲಾಗುತ್ತಿದೆ. ಈ ಹಿಂದೆ, ಮೌರ್ಯ ಅವರು ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷರಾಗಿದ್ದಾಗ ಅವರ ನೇತೃತ್ವದಲ್ಲಿ ನಡೆದ 2022ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭಾರೀ ಬಹುಮತ ಗಳಿಸಿ, ಎರಡನೇ ಬಾರಿಗೆ ಅಧಿಕಾರಕ್ಕೇರಿತ್ತು. ಅದಾಗ್ಯೂ, 2017ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಯೋಗಿ-ಮೌರ್ಯ ನಡುವೆ ಒಳಜಗಳ ನಡೆಯುತ್ತಲೇ ಇದೆ. ಇದೀಗ, ಇಬ್ಬರ ನಡುವಿನ ಅಸಮಾಧಾನ ತೀವ್ರತೆ ಪಡೆದುಕೊಂಡಿದೆ ಎಂದು ಹೇಳಲಾಗುತ್ತಿದೆ.

ಸದ್ಯದ ಪರಿಸ್ಥಿತಿಯಲ್ಲಿ ಭಾನುವಾರ ಲಕ್ನೋದಲ್ಲಿ ನಡೆದ ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಮೌರ್ಯ ಅವರು ‘ಸಂಘಟನೆ ಮೊದಲು – ಅಧಿಕಾರ/ಸರ್ಕಾರವಲ್ಲ’ ಎಂದು ಬ್ಯಾಟಿಂಗ್ ಮಾಡಿದ್ದಾರೆ. ಕೇಂದ್ರ ನಾಯಕತ್ವದೊಂದಿಗೆ ಯೋಗಿಯವರ ಆಡಳಿತ ಶೈಲಿಯ ಬಗ್ಗೆ ತಮ್ಮ ಅಸಮಾಧಾನವನ್ನು ಮೌರ್ಯ ಹೇಳಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಈ ನಡುವೆ, ಯೋಗಿ-ಮೌರ್ಯ ಇಬ್ಬರೂ ಒಟ್ಟಾಗಿ ಕೆಲಸ ಮಾಡಬೇಕು. ವಿಪಕ್ಷಗಳಿಗೆ ಟೀಕೆಗೆ ಅವಕಾಶ ನೀಡುವಂತಹ ಹೇಳಿಕೆಗಳು ಮತ್ತು ಪೋಸ್ಟ್‌ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಬಾರದು ಎಂದು ನಡ್ಡಾ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ 2019ರಲ್ಲಿ 62 ಸ್ಥಾನಗಳನ್ನು ಗಳಿಸಿದ್ದ ಬಿಜೆಪಿ, 2024ರಲ್ಲಿ 33 ಸ್ಥಾನಗಳಿಗೆ ಕುಸಿದಿದೆ. ಈ ಹೀನಾಯ ಸೋಲಿನಿಂದ ಹೊರಬಂದು, ಮತ್ತೆ ತನ್ನ ಮತಗಳನ್ನು ಗಟ್ಟಿ ಮಾಡಿಕೊಳ್ಳಲು ಬಿಜೆಪಿ ಹವಣಿಸುತ್ತಿದೆ. 2027ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಅಧಿಕಾರವನ್ನು ಉಳಿಸಿಕೊಳ್ಳಲು ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಬಿಸಿ ನಾಯಕನ್ನು ನೇಮಿಸಲು ತಂತ್ರ ಎಣೆಯುತ್ತಿದೆ ಎಂದು ತಿಳಿದುಬಂದಿದೆ.

ಪ್ರಸ್ತುತ, ಉತ್ತರ ಪ್ರದೇಶ ಬಿಜೆಪಿ ಅಧ್ಯಕ್ಷ ಚೌಧರಿ ಅವರು ಜಾಟ್ ಸಮುದಾಯಕ್ಕೆ ಸೇರಿದವರು. ಕೇಂದ್ರ ಸರ್ಕಾರದ ಮೂರು ರೈತ ವಿರೋಧಿ ಕೇಂದ್ರ ಸರ್ಕಾರದ ವಿರುದ್ಧ ನಡೆದ ರೈತ ಹೋರಾಟದಲ್ಲಿ ಜಾಟ್‌ ಸಮುದಾಯವು ಪ್ರಮುಖ ಪಾತ್ರ ವಹಿಸಿತ್ತು. ಹೀಗಾಗಿ, ಸಮುದಾಯದ ಮತಗಳು ಬಿಜೆಪಿಯಿಂದ ಹೊರಹೋಗದಂತೆ ತಡೆಯಲು 2022ರಲ್ಲಿ ಚೌಧರಿ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ನೇಮಿಸಲಾಗಿತ್ತು.

ಆದಾಗ್ಯೂ, 2024ರ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಪ್ರದರ್ಶನ ನೀಡಿದೆ. ಹೀಗಾಗಿ, ಚೌಧರಿ ಬದಲಿಗೆ ಒಬಿಸಿ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಲು ಬಿಜೆಪಿ ಹವಣಿಸುತ್ತಿದೆ. ಉತ್ತರ ಪ್ರದೇಶದಲ್ಲಿ 42%ಗೂ ಹೆಚ್ಚಿನ ಸಂಖ್ಯೆಯಲ್ಲಿ ಒಬಿಸಿ ಸಮುದಾಯದ ಜನರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...