‘ನೀವು ವ್ಯವಸ್ಥೆಯ ದಬ್ಬಾಳಿಕೆಯಿಂದ ನಲುಗಿದ್ದೀರಿ’: ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ

Date:

“ಸಂವಿಧಾನ ರಚನೆಯಲ್ಲಿ ದಲಿತರ ಪಾತ್ರ ಪ್ರಮುಖವಾದದ್ದು. ಆದರೆ, ವ್ಯವಸ್ಥೆಯ ದಬ್ಬಾಳಿಕೆಯಿಂದಾಗಿ ದಲಿತರು ನಲುಗಿ ಹೋಗಿದ್ದಾರೆ” ಎಂದು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ.

- Advertisement -

ತಾವು ಪ್ರತಿನಿಧಿಸುವ ರಾಯ್‌ಬರೇಲಿಯ ಬರ್ಗಡ್ ಚೌರಾಹಾದಲ್ಲಿರುವ ‘ಮೂಲ್ ಭಾರತಿ’ ಹಾಸ್ಟೆಲ್‌ನಲ್ಲಿ ದಲಿತ ವಿದ್ಯಾರ್ಥಿಗಳೊಂದಿಗೆ ರಾಹುಲ್‌ ಗಾಂಧಿ ಗುರುವಾರ ಸಂವಾದ ನಡೆಸಿದ್ದಾರೆ.”ಭಾರತದಲ್ಲಿರುವ 500 ಅತೀ ದೊಡ್ಡ ಖಾಸಗಿ ಕಂಪನಿಗಳನ್ನು ಪಟ್ಟಿ ಮಾಡಿದರೆ, ಅವುಗಳ ಪೈಕಿ ಎಷ್ಟು ಕಂಪನಿಗಳನ್ನು ದಲಿತರು ನಡೆಸುತ್ತಿದ್ದಾರೆ” ಎಂದು ವಿದ್ಯಾರ್ಥಿಗಳನ್ನು ರಾಹುಲ್‌ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಅವರ ಪ್ರಶ್ನೆಗೆ ಉತ್ತರಿಸಿದ ಓರ್ವ ವಿದ್ಯಾರ್ಥಿ, ‘ಒಂದೂ ಇಲ್ಲ’ ಎಂದಿದ್ದಾರೆ. ‘ಯಾಕೆ ಹೀಗೆ’ ಎಂದು ರಾಹುಲ್‌ ಗಾಂಧಿ ಮರುಪ್ರಶ್ನೆ ಕೇಳಿದ್ದು, ಮತ್ತೋರ್ವ ವಿದ್ಯಾರ್ಥಿ, ‘ಏಕೆಂದರೆ, ನಮಗೆ ಸಾಕಷ್ಟು ಸೌಲಭ್ಯಗಳು ದೊರೆಯುತ್ತಿಲ್ಲ” ಎಂದು ಉತ್ತರಿಸಿದರು.

ಅವರ ಉತ್ತರವನ್ನು ಒಪ್ಪದ ರಾಹುಲ್‌ ಗಾಂಧಿ, “ಬಿ.ಆರ್ ಅಂಬೇಡ್ಕರ್ ಅವರಿಗೆ ಯಾವುದೇ ಸೌಲಭ್ಯವಿರಲಿಲ್ಲ. ಅವರು ಏಕಾಂಗಿಯಾಗಿ ತಮ್ಮ ಪ್ರಯತ್ನಗಳನ್ನು ಮಾಡುತ್ತಿದ್ದರು. ಅವರು ದೇಶದ ರಾಜಕೀಯವನ್ನೇ ಅಲ್ಲಾಡಿಸಿದರು” ಎಂದು ಹೇಳಿದ್ದಾರೆ.

“ಸಮಾಜದಲ್ಲಿ ನಿಮ್ಮ (ದಲಿತರು) ವಿರುದ್ಧವಾದ, ನಿಮ್ಮ ಪ್ರಗತಿಯನ್ನು ಸಹಿಸದ ವ್ಯವಸ್ಥೆ ಇದೆ. ಈ ವ್ಯವಸ್ಥೆಯು ಪ್ರತಿದಿನ ನಿಮ್ಮ ಮೇಲೆ ದಾಳಿ ಮಾಡುತ್ತದೆ. ಬಹುತೇಕ ಸಮಯದಲ್ಲಿ, ನಿಮ್ಮ ಮೇಲೆ ವ್ಯವಸ್ಥೆಯ ದಾಳಿ ಹೇಗೆ ನಡೆಯುತ್ತಿದೆ ಎಂಬುದು ನಿಮಗೂ ತಿಳಿದಿರುವುದಿಲ್ಲ” ಎಂದು ರಾಹುಲ್ ವಿವರಿಸಿದ್ದಾರೆ.

“ಸಂವಿಧಾನದ ಸಿದ್ಧಾಂತವೇ ನಿಮ್ಮ ಸಿದ್ಧಾಂತ ಎಂಬುದನ್ನು ನೀವು ಅರ್ಥಮಾಡಿಕೊಳ್ಳಬೇಕು. ಈ ದೇಶದಲ್ಲಿ ದಲಿತರು ಇಲ್ಲದಿದ್ದರೆ, ಭಾರತಕ್ಕೆ ಇಂತಹ ಸಂವಿಧಾನ ಸಿಗುತ್ತಿರಲಿಲ್ಲ ಎಂದು ನಾನು ಖಚಿತವಾಗಿ ಹೇಳುತ್ತೇನೆ. ಇದು ನಿಮ್ಮ ಸಿದ್ಧಾಂತ, ಇದು ನಿಮ್ಮ ಸಂವಿಧಾನ. ಆದರೆ, ನೀವು ಎಲ್ಲಿಗೇ ಹೋದರೂ ವ್ಯವಸ್ಥೆಯ ದಬ್ಬಾಳಿಕೆಯಿಂದ ನೀವು ನಲುಗಿ ಹೋಗುತ್ತಿದ್ದೀರಿ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...