ನಮ್ಮಿಂದಾಗಿ ನಿಮಗೆ ಬಟ್ಟೆ, ಶೂ, ಮೊಬೈಲ್ ಸಿಕ್ಕಿದೆ: ಬಿಜೆಪಿ ಶಾಸಕನ ವಿವಾದಾತ್ಮಕ ಹೇಳಿಕೆ

Date:

ನಮ್ಮಿಂದಾಗಿಯೇ ಬಟ್ಟೆ, ಶೂ, ಮೊಬೈಲ್, ಯೋಜನೆಗಳ ಆರ್ಥಿಕ ಫಲಾನುಭವ ಹಾಗೂ ಬಿತ್ತನೆಗೆ ಧನಸಹಾಯ ಪಡೆದು, ನಮ್ಮನ್ನೇ ಟೀಕಿಸುತ್ತಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಶಾಸಕ, ಮಾಜಿ ಸಚಿವ ಬಬನ್‌ರಾಮ್ ಲೋನಿಕರ್ ಹೇಳಿಕೆ ನೀಡಿದ್ದಾರೆ. ವಿವಾದ ಸೃಷ್ಟಿಸಿ ಟೀಕೆ-ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆಯಿಂದ ಸರ್ಕಾರದ ವಿರುದ್ಧ ವಿಪಕ್ಷಗಳು ವಾಗ್ದಾಳಿ ನಡೆಸಿವೆ.

- Advertisement -

ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ತಮ್ಮ ವಿಧಾನಸಭಾ ಕ್ಷೇತ್ರ ಪರ್ತೂರ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಲೋನಿಕರ್ ಮಾತನಾಡಿದ್ದು, ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. “ಕೆಲವು ಜನರು ಮತ್ತು ವಿಶೇಷವಾಗಿ ಯುವಕರು ಸಾಮಾಜಿಕ ಮಾಧ್ಯಮದಲ್ಲಿ ನಮ್ಮನ್ನು ಮತ್ತು ನಮ್ಮ ಪಕ್ಷವನ್ನು ಟೀಕಿಸುತ್ತಾರೆ. ಅವರು ನಮ್ಮದೇ ಸರ್ಕಾರದಿಂದ ಬಟ್ಟೆ, ಶೂ, ಮೊಬೈಲ್ ಸೇರಿದಂತೆ ನಾನಾ ಪ್ರಯೋಜನೆಗಳನ್ನು ನಮ್ಮಿಂದಾಗಿಯೇ ಪಡೆಯುತ್ತಿದ್ದಾರೆ. ನಿಮ್ಮ ಗ್ರಾಮದಲ್ಲಿ ನಾವು ನೀರಿನ ಟ್ಯಾಂಕ್‌ಗಳು, ಕಾಂಕ್ರೀಟ್ ರಸ್ತೆಗಳು, ಫಂಕ್ಷನ್ ಹಾಲ್‌ಗಳನ್ನು ನಿರ್ಮಿಸಿದ್ದೇವೆ. ವಿವಿಧ ಸರ್ಕಾರಿ ಯೋಜನೆಗಳ ಪ್ರಯೋಜನಗಳನ್ನು ಒದಗಿಸಿದ್ದೇವೆ. ನಮ್ಮ ಸರ್ಕಾರದ ಕಾರಣದಿಂದಾಗಿ ಅವರು ಎಲ್ಲ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಲೋನಿಕರ್ ಅವರ ಹೇಳಿಕೆಯನ್ನು ಸ್ವತಃ ಮಹಾರಾಷ್ಟ್ರ ಮುಖ್ಯಮಂತ್ರಿ, ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್‌ ಕೂಡ ಖಂಡಿಸಿದ್ದಾರೆ. “ಇಂತಹ ಹೇಳಿಕೆಗಳನ್ನು ನೀಡಬಾರದು” ಎಂದಿದ್ದಾರೆ.

ಈ ಲೇಖನ ಓದಿದ್ದೀರಾ?: ʼಮುಸ್ಲಿಮರು ಹೊಡಿಯಿರಿ’ ಎಂದ ಬಿಜೆಪಿಯ ಅನಂತಕುಮಾರ್ ಹೆಗಡೆಯನ್ನೇಕೆ ಬಂಧಿಸಿಲ್ಲ?

ಶಾಸಕ ಲೋನಿಕರ್ ಅವರು ವಿವಾದಾತ್ಮಕ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋವನ್ನು ಹಂಚಿಕೊಂಡಿರುವ ಮಹಾರಾಷ್ಟ್ರ ವಿಧಾನ ಪರಿಷತ್ ವಿಪಕ್ಷ ನಾಯಕ ಅಂಬಾದಾಸ್ ದಾನ್ವೆ, “ಇದು ಬ್ರಿಟಿಷರ ಸ್ವದೇಶಿ ಆವೃತ್ತಿ. ಪ್ರಜಾಪ್ರಭುತ್ವದಲ್ಲಿ ಇಂತಹ ಭಾಷೆ ಬಳಸುವುದು ಸರಿಯಲ್ಲ” ಎಂದು ಹೇಳಿದ್ದಾರೆ.

“ಶಾಸಕರಾಗಿರುವ ನಿಮ್ಮ ಈ ಹುದ್ದೆ ಮತ್ತು ಸ್ಥಾನಮಾನವು ಜನರಿಂದ ಬಂದದ್ದು. ನಿಮ್ಮ ಬಟ್ಟೆ, ಶೂ, ವಿಮಾನ ಟಿಕೆಟ್, ನಾಯಕತ್ವ ಹಾಗೂ ನಿಮ್ಮ ಕಾರಿನಲ್ಲಿರುವ ಡೀಸೆಲ್ ಕೂಡ ಜನರಿಂದಲೇ ಬಂದಿದೆ. ಲೋನಿಕರ್ ಅವರ ಮಾತನ್ನು ಜನರು ನೆನಪಿನಲ್ಲಿಟ್ಟುಕೊಳ್ಳಬೇಕು. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರುತ್ತಿವೆ. ಅದರಲ್ಲಿ ಸೂಕ್ತ ಉತ್ತರ ನೀಡಬೇಕು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...