‘ನಿಮ್ಮಲ್ಲಿ ಮತಗಳಿವೆ, ನನ್ನ ಬಳಿ ಯೋಜನೆ/ನಿಧಿಗಳಿವೆ’: ಮತದಾರರಿಗೆ ಮಹಾ ಡಿಸಿಎಂ ಅಜಿತ್ ಪವಾರ್ ‘ಬೆದರಿಕೆ’

Date:

ಸ್ಥಳೀಯ ಚುನಾವಣೆಗಳ ಪ್ರಚಾರದ ವೇಳೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಮತದಾರರಿಗೆ ಬೆದರಿಕೆ ಹಾಕಿದ್ದು, ‘ತಮ್ಮ ಪಕ್ಷದ ಎಲ್ಲ ಅಭ್ಯರ್ಥಿಗಳು ಗೆಲುವು ಸಾಧಿಸಿದರೆ ಮಾತ್ರ ನಿಧಿ ಬಿಡುಗಡೆ ಮಾಡುವುದಾಗಿ’ ಹೇಳಿದ್ದಾರೆ.

- Advertisement -

ಮಹಾರಾಷ್ಟ್ರದಲ್ಲಿ ನಗರ ಪಾಲಿಕೆ ಮತ್ತು ನಗರ ಪಂಚಾಯತಿ ಚುನಾವಣೆಗಳು ಡಿಸೆಂಬರ್ 2ರಂದು ನಡೆಯಲಿವೆ. ಚುನಾವಣೆಗಳ ಹಿನ್ನೆಲೆ ಮಾಲೆಗಾಂವ್‌ ನಗರ ಪಂಚಾಯತಿ ವ್ಯಾಪ್ತಿಯಲ್ಲಿ ಹಣಕಾಸು ಸಚಿವ, ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಚಾರ ನಡೆಸಿದ್ದಾರೆ. ತಮ್ಮ ಎನ್‌ಸಿಪಿ (ಅಜಿತ್ ಬಣ)ದ 18 ಅಭ್ಯರ್ಥಿಗಳು ಮಾಲೆಗಾಂವ್ ಪಂಚಾಯತಿಯಲ್ಲಿ ಸ್ಪರ್ಧಿಸಿದ್ದು, ಅವರು ಗೆಲುವು ಸಾಧಿಸಿದರೆ ಮಾತ್ರವೇ, ಯೋಜನೆಗಳಿಗೆ ಹಣ ಬಿಡುಗಡೆ ಮಾಡುವುದಾಗಿ ಮತದಾರರಿಗೆ ಬೆದರಿಕೆ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಕೇಂದ್ರ ಮತ್ತು ರಾಜ್ಯವು ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಈ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಇಬ್ಬರು ಉಪಮುಖ್ಯಮಂತ್ರಿಗಳು ಒಟ್ಟಾಗಿ ಕೆಲಸ ಮಾಡಿದ್ದಾರೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಈ ಯೋಜನೆಗಳನ್ನು ಸರಿಯಾಗಿ ಕಾರ್ಯಗತಗೊಳಿಸಿದರೆ, ಮಾಲೆಗಾಂವ್‌ ಅಭಿವೃದ್ಧಿ ಹೊಂದಲು ಸಾಧ್ಯ” ಎಂದು ಹೇಳಿದ್ದಾರೆ.

“ನೀವು ಎಲ್ಲ 18 ಎನ್‌ಸಿಪಿ (ಅಜಿತ್ ಬಣ) ಅಭ್ಯರ್ಥಿಗಳನ್ನು ಗೆಲ್ಲಿಸಿದರೆ, ಯೋಜನೆಗಳಿಗೆ ಹಣದ ಕೊರತೆಯಾಗದಂತೆ ನೋಡಿಕೊಳ್ಳುತ್ತೇನೆ. ಆದರೆ ನೀವು ನನ್ನ ಅಭ್ಯರ್ಥಿಗಳನ್ನು ‘ಕಡಿತ’ (ಸೋಲಿಸಿದರೆ) ಮಾಡಿದರೆ, ನಾನು (ನಿಧಿಗಳನ್ನು) ‘ಕಡಿತ’ ಮಾಡುತ್ತೇನೆ. ನಿಮಗೆ ಮತ ಚಲಾಯಿಸುವ ಅಧಿಕಾರವಿದೆ. ನನಗೆ ಹಣ ಬಿಡುಗಡೆ ಮಾಡುವ ಅಧಿಕಾರವಿದೆ. ಈಗ ನೀವು ಏನು ಮಾಡಬೇಕೆಂದು ನಿರ್ಧರಿಸಿ” ಎಂದು ಬಹಿರಂಗ ಬೆದರಿಕೆವೊಡ್ಡಿದ್ದಾರೆ.

ವಿರೋಧ ಪಕ್ಷಗಳ ‘ಎಂವಿಎ’ ಮೈತ್ರಿಕೂಟವು ಅಜಿತ್ ಪವಾರ್ ಹೇಳಿಕೆಯನ್ನು ಖಂಡಿಸಿದೆ. ಚುನಾವಣಾ ಆಯೋಗವು ಯಾವುದೇ ಕ್ರಮ ಕೈಗೊಳ್ಳದಿರುವುದರ ಬಗ್ಗೆ ಪ್ರಶ್ನಿಸಿದೆ. “ಯೋಜನೆಗಳಿಗೆ ಹಣವನ್ನು ಸಾಮಾನ್ಯ ಜನರು ಪಾವತಿಸುವ ತೆರಿಗೆಯಿಂದ ಬಿಡುಗಡೆ ಮಾಡಲಾಗುತ್ತದೆಯೇ ಹೊರತು, ಅಜಿತ್ ಪವಾರ್ ಅವರ ತಮ್ಮ ಮನೆಯಿಂದಲ್ಲ. ಪವಾರ್ ಅವರಂತಹ ನಾಯಕರು ಮತದಾರರಿಗೆ ಬೆದರಿಕೆ ಹಾಕುತ್ತಿದ್ದರೆ, ಚುನಾವಣಾ ಆಯೋಗ ಏನು ಮಾಡುತ್ತಿದೆ?” ಶಿವಸೇನೆ (ಉದ್ಧವ್ ಬಣ) ನಾಯಕ ಅಂಬಾದಾಸ್ ದಾನ್ವೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದ ಖಜಾನೆ ಖಾಲಿ, ಆದರೂ ಪ್ರಧಾನಿ ಹುಟ್ಟುಹಬ್ಬಕ್ಕೆ ಕೋಟಿ ಕೋಟಿ ಪೋಲು: ತೇಜಸ್ವಿ ಯಾದವ್ ಆರೋಪ

ಬಿಹಾರದಲ್ಲಿ ತೀವ್ರ ಪ್ರವಾಹ ಪರಿಸ್ಥಿತಿಯಿಂದಾಗಿ ಲಕ್ಷಾಂತರ ಜನರು ತೊಂದರೆಯಲ್ಲಿರುವಾಗ ಮತ್ತು ರಾಜ್ಯ...

ಹಿರಿಯ ಪತ್ರಕರ್ತೆ ಪಾಯಲ್ ಮೆಹ್ತಾ ಅಕಾಲಿಕ ನಿಧನ: ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ

ಸಿಎನ್‌ಎನ್-ನ್ಯೂಸ್18 ವಾಹಿನಿಯ ಹಿರಿಯ ರಾಜಕೀಯ ಪತ್ರಕರ್ತೆ ಪಾಯಲ್ ಮೆಹ್ತಾ (46) ಅವರು...

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...