ಚುನಾವಣಾ ಫಲಿತಾಂಶಕ್ಕೆ ನೀವೇ ಹೊಣೆಗಾರರಾಗುತ್ತೀರಿ: ಕಾಂಗ್ರೆಸ್ ಪದಾಧಿಕಾರಿಗಳಿಗೆ ಖರ್ಗೆ ಎಚ್ಚರಿಕೆ

Date:

ಮುಂದಿನ ಚುನಾವಣೆಗಳ ಫಲಿತಾಂಶಗಳಿಗೆ ನೀವೇ ಹೊಣೆಗಾರರಾಗಿರುತ್ತೀರಿ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಪದಾಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಹಾಗೆಯೇ ಕಷ್ಟದ ಸಂದರ್ಭದಲ್ಲಿ ಜವಾಬ್ದಾರಿಯಿಂದ ನುಣುಚಿಕೊಂಡವರಿಂದಲೂ ದೂರ ಇರುವಂತೆ ಖರ್ಗೆ ತಿಳಿಸಿದ್ದಾರೆ.

- Advertisement -

ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಕಚೇರಿ ಇಂದಿರಾ ಭವನದಲ್ಲಿ ನಡೆದ ಪದಾದಿಕಾರಿಗಳ ಸಭೆಯಲ್ಲಿ ಮಾತನಾಡಿದ ಖರ್ಗೆ, “ತೀರಾ ತಳಮಟ್ಟದಲ್ಲಿ ಕಾರ್ಯನಿರ್ವಹಿಸಿ. ಬೂತ್‌ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಬೇಕು. ಸೈದ್ಧಾಂತಿಕ ಬದ್ಧತೆ ಇದ್ದವರ ಪ್ರಚಾರವನ್ನು ಮಾಡಬೇಕು” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಮಲ್ಲಿಕಾರ್ಜುನ ಖರ್ಗೆ ನನಗೆ ಹಿರಿಯ ಅಣ್ಣ, ಭೇಟಿಗೆ ರಾಜಕೀಯ ಅರ್ಥ ಕಲ್ಪಿಸಬೇಕಿಲ್ಲ: ಸಚಿವ ಪರಮೇಶ್ವರ್

ಇನ್ನು ಕಾಂಗ್ರೆಸ್‌ನಲ್ಲಿ ಕೆಲವು ಬದಲಾವಣೆಗಳ ಬಗ್ಗೆಯೂ ಖರ್ಗೆ ಸುಳಿವು ನೀಡಿದ್ದಾರೆ. “ಕೆಲವು ಬದಲಾವಣೆಗಳು ಈಗಾಗಲೇ ಮಾಡಲಾಗಿದೆ. ಇನ್ನೂ ಕೆಲವು ಬದಲಾವಣೆಗಳನ್ನು ಮಾಡಲಾಗುವುದು” ಎಂದು ತಿಳಿಸಿದ್ದಾರೆ.

“ಹೊಣೆಗಾರಿಕೆಯ ಬಗ್ಗೆ ನಾನು ನಿಮ್ಮಲ್ಲಿ ಮಾತನಾಡಲು ಬಯಸುತ್ತೇನೆ. ಪಕ್ಷದಲ್ಲಾಗುವ ಎಲ್ಲಾ ಬದಲಾವಣೆಗಳಿಗೂ ಮತ್ತು ಮುಂದಿನ ಚುನಾವಣಾ ಫಲಿತಾಂಶಗಳಿಗೂ ನೀವೇ ಹೊಣೆಗಾರರಾಗಿರುತ್ತೀರಿ” ಎಂದು ಕಾಂಗ್ರೆಸ್ ಪದಾದಿಕಾರಿಗಳಿಗೆ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್ ಇತ್ತೀಚೆಗೆ ಸಂಘಟನೆ ಪುನರ್‌ ರಚನೆ ಮಾಡಿದ್ದು, ಹೊಸ ಪದಾದಿಕಾರಿಗಳ ಆಯ್ಕೆ ಮಾಡಿದೆ. ಹೊಸಬರು ಕೂಡಾ ಈ ಸಭೆಯಲ್ಲಿ ಭಾಗಿಯಾಗಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಎಲ್ಲಾ ಪ್ರಧಾನ ಕಾರ್ಯದರ್ಶಿಗಳು, ವಿವಿಧ ರಾಜ್ಯಗಳ ಉಸ್ತುವಾರಿಗಳು ಸಭೆಯಲ್ಲಿ ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...