ಬೆಂಗಳೂರಿನಲ್ಲಿ ಯುವತಿಯ ಬರ್ಬರ ಹತ್ಯೆ: ದೇಹ ತುಂಡರಿಸಿ ಫ್ರಿಡ್ಜ್‌ನಲ್ಲಿಟ್ಟ ಕೊಲೆಗಾರ

Date:

Advertisements

ರಾಜಧಾನಿ ಬೆಂಗಳೂರಿನಲ್ಲೂ ದೆಹಲಿಯಲ್ಲಿ ನಡೆದ ಶ್ರದ್ಧಾ ವಾಕರ್ ಹತ್ಯೆ ಮಾದರಿಯಲ್ಲಿ ಭಯಾನಕ ಹತ್ಯೆಯ ಘಟನೆ ನಡೆದಿದೆ. ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಿ ಆನಂತರ ಮೃತ ದೇಹವನ್ನು 30 ಭಾಗ ತುಂಡರಿಸಿ ಫ್ರಿಡ್ಜ್‌ನಲ್ಲಿ ಇರಿಸಲಾಗಿದೆ.

ಈ ಘಟನೆ ಬೆಂಗಳೂರಿನ ಹೃದಯ ಭಾಗವಾದ ವೈಯಾಲಿಕಾವಲ್​ನ ಮುನೇಶ್ವರ ಬ್ಲಾಕ್​ನ ಮನೆಯೊಂದರ ಮೊದಲ ಮಹಡಿಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ಮಹಾಲಕ್ಷ್ಮೀ(26) ಎಂದು ಗುರುತಿಸಲಾಗಿದೆ.

ಸೆಪ್ಟೆಂಬರ್ 2ರಿಂದ ಮಹಾಲಕ್ಷ್ಮೀ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬಹುತೇಕ ಅವತ್ತೇ ಮಹಿಳೆಯನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗಂಡನಿಂದ ದೂರವಾಗಿದ್ದ ಯುವತಿ ಮಲ್ಲೇಶ್ವರಂನಲ್ಲಿರುವ ಮಂತ್ರಿ ಮಾಲ್‌ನಲ್ಲಿ ಕೆಲಸಕ್ಕಿದ್ದಳು ಎಂದು ತಿಳಿದುಬಂದಿದೆ. ಕಳೆದ ಐದು ತಿಂಗಳ ಹಿಂದೆ ಬಾಡಿಗೆ ಮನೆಯಲ್ಲಿ ವಾಸಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.

Advertisements

ಆಕೆಯ ಸಂಪರ್ಕದಲ್ಲಿದ್ದ ಯುವಕನೋರ್ವನ ಮೊಬೈಲ್ ಕೂಡ ಸ್ವಿಚ್ ಆಫ್ ಆಗಿದ್ದು, ಆತನೇ ಕೊಲೆ ಮಾಡಿ ಈ ಕೃತ್ಯ ಎಸಗಿರುವ ಶಂಕೆ ಕೂಡ ವ್ಯಕ್ತವಾಗಿದೆ.

ಯುವತಿ 1
ಯುವತಿ ಮಹಾಲಕ್ಷ್ಮೀ

ಘಟನೆಯ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಹೆಚ್ಚುವರಿ ಪೊಲೀಸ್​ ಆಯುಕ್ತ ಸತೀಶ್, “ಮಹಿಳೆಯನ್ನು ಕೊಲೆ ಮಾಡಿ ಬಳಿಕ ಮೃತದೇಹ​ವನ್ನು ಫ್ರಿಡ್ಜ್​ನಲ್ಲಿ ಇಟ್ಟಿರುವ ಘಟನೆ ನಡೆದಿದೆ. ಇದು ಸಂಭವಿಸಿ ನಾಲ್ಕೈದು ದಿನಗಳು ಆಗಿರಬಹುದು. ಕೊಲೆಯಾಗಿರುವ ಯುವತಿಯ ಗುರುತು ಪತ್ತೆಯಾಗಿದೆ. ಹೊರರಾಜ್ಯದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ತನಿಖೆ ಬಳಿಕ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡುತ್ತೇನೆ” ಎಂದು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಮಂಡ್ಯ | ಮೈಕ್ರೋ ಫೈನಾನ್ಸ್‌ಗಳ ಸಾಲದ ಸುಳಿಯಲ್ಲಿ ಸಿಲುಕಿದ ಮಹಿಳೆಯರು: ಸಂಕಷ್ಟದಿಂದ ಹೊರಬರಲು ಪರದಾಟ!

ಯುವತಿ ಕಳೆದ ಮೂರು ತಿಂಗಳ ಹಿಂದಷ್ಟೇ ಈ ಮನೆಗೆ ಬಂದಿದ್ದಳು. ಇಂದು ಬೆಳಗ್ಗೆ ಆಕೆಯ ತಾಯಿ-ಸಹೋದರಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಪ್ರಕರಣ ದಾಖಲಿಸಿರುವ ಪೊಲೀಸರು ಹತ್ಯೆ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ಮನೆಯಿಂದ ದುರ್ನಾತ

ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅದೇ ಬಿಲ್ಡಿಂಗ್​ನ ಅಕ್ಕಪಕ್ಕದವರು ಇವತ್ತು ಸಂಬಂಧಿಕರಿಗೆ ಹೇಳಿದ್ದಾರೆ. ಅದರಂತೆ ಕೊಲೆಯಾದಂತಹ ಯುವತಿಯ ತಾಯಿ ಮತ್ತು ಅಕ್ಕ ಮನೆ ಬಳಿ ಬಂದು ಬೀಗ ಹೊಡೆದು ಒಳಹೋದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X