ನಿಮ್ಮ ನಡೆಯೇ ನನ್ನದೂ ಆಗಿರಲಿದೆ: ಕುತೂಹಲ ಸೃಷ್ಟಿಸಿದ ಸಂಸದೆ ಸುಮಲತಾ ಫೇಸ್‌ಬುಕ್ ಪೋಸ್ಟ್‌

Date:

ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದೆ ಅತಂತ್ರವಾಗಿರುವ ಸಂಸದೆ ಸುಮಲತಾ ಅಂಬರೀಶ್, ತಮ್ಮ ಮುಂದಿನ ನಿರ್ಧಾರವನ್ನು ಏಪ್ರಿಲ್ 3ರಂದು ಬೆಂಬಲಿಗರ ಸಭೆ ನಡೆಸಿದ ಬಳಿಕ ಘೋಷಿಸುವುದಾಗಿ ಹೇಳಿದ್ದರು. ಈ ನಡುವೆಯೇ ಇಂದು(ಏಪ್ರಿಲ್ 2) ಸುದೀರ್ಘವಾದ ಫೇಸ್‌ಬುಕ್ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದು, “ನಿಮ್ಮ ನಡೆಯೇ ನನ್ನದೂ ಆಗಿರಲಿದೆ” ಎಂದು ತಿಳಿಸುವ ಮೂಲಕ ಕುತೂಹಲ ಸೃಷ್ಟಿಸಿದ್ದಾರೆ.

- Advertisement -

ತನ್ನ ಪೋಸ್ಟ್‌ನಲ್ಲಿ ಪರೋಕ್ಷವಾಗಿ ಪಕ್ಷೇತರವಾಗಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದು, “ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ” ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

ಸುಮಲತಾ ಫೇಸ್‌ಬುಕ್ ಪೋಸ್ಟ್ ಹೀಗಿದೆ.

“ನನ್ನ ಸ್ವಾಭಿಮಾನಿ ಮಂಡ್ಯದ ಬಂಧುಗಳೇ, ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನಾನು ಕಳೆದ ಬಾರಿ ಐತಿಹಾಸಿಕ ಗೆಲುವು ಸಾಧಿಸಿದ ನಂತರ, ಈ ಕ್ಷೇತ್ರದ ಬಗ್ಗೆ ರಾಷ್ಟ್ರೀಯ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಈ ಸಲದ ಲೋಕಸಭೆ ಚುನಾವಣೆಯೂ ಅದಕ್ಕೆ ಹೊರತಾಗಿಲ್ಲ. ಈಗಾಗಲೇ ರಾಜಕೀಯ ಪಲ್ಲಟಕ್ಕೆ ಮಂಡ್ಯ ಕ್ಷೇತ್ರ ಸಾಕ್ಷಿಯಾಗಿದೆ.”

“ಚುನಾವಣೆಗೆ ಸ್ಪರ್ಧಿಸುವ ಕುರಿತಂತೆ ನನ್ನ ನಿಲುವಿಗಾಗಿ ಅನೇಕರು ಕಾಯುತ್ತಿದ್ದಾರೆ. ಈಗಾಗಲೇ ಆ ಕುರಿತಂತೆ ಗಂಭೀರ ಚಿಂತನೆ ಕೂಡ ಮಾಡಲಾಗಿದೆ. ನಿಮ್ಮೆಲ್ಲರ ನೆಚ್ಚಿನ ರೆಬಲ್ ಸ್ಟಾರ್ ಅಂಬರೀಶ್ ಅವರಾಗಲಿ, ನಾನಾಗಲಿ ನಮ್ಮ ಕುಟುಂಬವಾಗಲಿ ಯಾವತ್ತಿಗೂ ಅಧಿಕಾರಕ್ಕೆ ಅಂಟಿಕೊಂಡು ಕೂತವರಲ್ಲ. ಮಂಡ್ಯಗಾಗಿ, ನನ್ನ ಮಂಡ್ಯದ ಸ್ವಾಭಿಮಾನಿಗಳ ಸೇವೆಗೆ ಯಾವತ್ತಿಗೂ ನಾವು ಬದ್ಧ. ಹಾಗಾಗಿಯೇ ಏನೇ ನಿರ್ಧಾರ ತಗೆದುಕೊಂಡರೂ ನಿಮ್ಮೊಂದಿಗೆ ಚರ್ಚಿಸಿಯೇ ಮುಂದುವರೆಯುವೆ ಎಂದು ಹೇಳಿದ್ದೇನೆ” ಎಂದು ತಿಳಿಸಿದ್ದಾರೆ.

“ನಿಮ್ಮ ಭಾವನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಲು ನಿಮ್ಮ ಸಮಯವನ್ನು ನನಗೆ ಕೊಟ್ಟು ಮನೆಯವರೆಗೂ ಬಂದಿದ್ದೀರಿ. ಕೆಲವರು ತಾವು ಇದ್ದಲ್ಲೇ ತಮ್ಮ ಭಾವನೆಗಳನ್ನು ಹಂಚಿಕೊಂಡಿದ್ದೀರಿ. ನಿಮ್ಮೆಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರೀತಿ ದೊಡ್ಡದು. ಯಾವತ್ತೂ ಅದು ಹಾಗೆಯೇ ಇರಲಿ ಎಂದು ಆಶಿಸುವೆ.
ನಾಳೆ (ಏಪ್ರಿಲ್ 3) ಬೆಳಗ್ಗೆ 10 ಗಂಟೆಗೆ ಕಾಳಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ದೇವಸ್ಥಾನದ ಆವರಣದಲ್ಲೇ ನನ್ನ ಮತ್ತು ನಿಮ್ಮೆಲ್ಲರ ನಿಲುವನ್ನು ಸ್ಪಷ್ಟ ಪಡಿಸುವ ಹಾಗೂ ಮಂಡ್ಯ ಲೋಕಸಭೆ ಚುನಾವಣೆ ಕುರಿತಂತೆ ನನ್ನ ನಿರ್ಧಾರವನ್ನು ನಿಮ್ಮೆಲ್ಲರ ಮುಂದೆಯೇ ಪ್ರಕಟಿಸುತ್ತಿದ್ದೇನೆ” ಎಂದು ಸುಮಲತಾ ಹೇಳಿಕೆ ನೀಡಿದ್ದಾರೆ.

“ನಾಳೆ(ಏಪ್ರಿಲ್ 3) ನಮ್ಮೊಂದಿಗೆ ನಮ್ಮೆಲ್ಲರ ಪ್ರೀತಿಯ ದರ್ಶನ್, ಅಭಿಷೇಕ್ ಅಂಬರೀಶ್ ಇರಲಿದ್ದಾರೆ. ತಮ್ಮ ಸಲಹೆ ಮತ್ತು ಸೂಚನೆ ಹಾಗೂ ಭಾವನೆಗಳಿಗೆ ಯಾವತ್ತೂ ನಾನು ನೋವು ತರಲಾರೆ. ನಿಮ್ಮ ನಡೆಯೇ ನನ್ನದೂ ಆಗಿರಲಿದೆ. ಬನ್ನಿ, ಜೊತೆಯಾಗಿ ಮಂಡ್ಯವನ್ನು ಮತ್ತಷ್ಟು ಅಭಿವೃದ್ದಿ ಪಡಿಸೋಣ” ಎಂದು ಹೇಳುವ ಮೂಲಕ ಪರೋಕ್ಷವಾಗಿ ಪಕ್ಷೇತರವಾಗಿ ಸ್ಪರ್ಧಿಸುವ ಬಗ್ಗೆ ಸುಳಿವು ನೀಡಿದ್ದು, ಈ ಪೋಸ್ಟ್‌ನೊಂದಿಗೆ ಅಂಬರೀಶ್, ದರ್ಶನ್, ಅಭಿಷೇಕ್ ಅಂಬರೀಶ್  ಅವರ ಫೋಟೋವನ್ನು ಕೂಡ ಬಳಸಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...