ಕೆ ಎನ್‌ ರಾಜಣ್ಣ ವಜಾ: ಮಧುಗಿರಿಯಲ್ಲಿ ಬೆಂಬಲಿಗರ ಆಕ್ರೋಶ; ಆತ್ಮಹತ್ಯೆಗೆ ಯತ್ನಿಸಿದ ಯುವಕ

Date:

ಕಾಂಗ್ರೆಸ್‌ ವಿರೋಧ ಹೇಳಿಕೆ ನೀಡಿದ ಬೆನ್ನಲ್ಲೇ ಸಹಕಾರ ಸಚಿವ ಸ್ಥಾನದಿಂದ ಕೆ ಎನ್‌ ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ. ರಾಜಣ್ಣ ವಜಾ ವಿರುದ್ಧ ಅವರ ಮಧುಗಿರಿಯಲ್ಲಿ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ವೇಳೆ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

- Advertisement -

ಇತ್ತೀಚೆಗೆ ಮತ ಕಳವು ವಿಚಾರದಲ್ಲಿ ಹೇಳಿಕೆ ನೀಡಿದ್ದ ರಾಜಣ್ಣ ಅವರು ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಮತ ಕಳ್ಳತನವನ್ನು ತಡೆಯುವಲ್ಲಿ ವಿಫಲವಾಗಿದೆ ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಹೈಕಮಾಂಡ್ ರಾಜೀನಾಮೆ ನೀಡುವಂತೆ ಸೂಚಿಸಿತ್ತು. ಬಳಿಕ ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ಕೆ ಎನ್‌ ರಾಜಣ್ಣ ವಜಾ ನನಗೂ ನೋವಾಗಿದೆ, ಇದು ಪಕ್ಷದ ತೀರ್ಮಾನ: ಡಿಸಿಎಂ ಡಿ ಕೆ ಶಿವಕುಮಾರ್

ಈ ವಿಚಾರದಲ್ಲಿ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ಕೆ ಎನ್‌ ರಾಜಣ್ಣ ಅಭಿಮಾನಿಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜಣ್ಣ ಫೋಟೋ ಹಿಡಿದು ಪ್ರತಿಭಟನೆ ನಡೆಸಿರುವ ಬೆಂಬಲಿಗರು ಬಸ್‌ಗಳನ್ನೂ ತಡೆದಿದ್ದಾರೆ.

ಇನ್ನು ಅಂಗಡಿ-ಮುಗ್ಗಟ್ಟುಗಳನ್ನು ಬಂದ್ ಮಾಡದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರಾಜಣ್ಣ ಬೆಂಬಲಿಗರು, ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಿದ್ದಾರೆ. ಬಟ್ಟೆಯಂಗಡಿಯ ಹೊರಗಿರುವ ಬಟ್ಟೆಗಳನ್ನು ಎಳೆದೆಸೆದಿದ್ದಾರೆ. ಈ ಸಂದರ್ಭದಲ್ಲೇ ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿದ್ದು, ಆತನನ್ನು ತಡೆಯಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ...