ಶುಕ್ರವಾರ ಶಿವಮೊಗ್ಗದಲ್ಲಿ ಯುವ ನಿಧಿಗೆ ಚಾಲನೆ; ಅರ್ಹ ನಿರುದ್ಯೋಗಿಗಳ ಖಾತೆಗೆ ಹಣ

Date:

ಸ್ವಾಮಿ ವಿವೇಕಾನಂದ ಜನ್ಮ ದಿನವಾದ ನಾಳೆ (ಜ.12) ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಐದನೇ ಗ್ಯಾರಂಟಿ ಯುವ ನಿಧಿ ಯೋಜನೆಗೆ ಚಾಲನೆ ನೀಡಲಾಗುತ್ತಿದೆ.

ಶಿವಮೊಗ್ಗ ನಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿವಮೊಗ್ಗ ಫಲಾನುಭವಿಗಳಿಗೆ ನಗದು ವರ್ಗಾವಣೆ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಗಣ್ಯರು ಯೋಜನೆಗೆ ಚಾಲನೆ ನೀಡಲಿದ್ದಾರೆ.

ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್‌ನಲ್ಲಿ ವಿಶಾಲವಾದ ಬೃಹತ್‌ ವೇದಿಕೆ ನಿರ್ಮಾಣ ಮಾಡಲಾಗಿದೆ. 85 ಸಾವಿರಕ್ಕೂ ಹೆಚ್ಚು ಆಸನಗಳ ವ್ಯವಸ್ಥೆ ಮಾಡಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಅಧಿಕ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಜನರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಲಾಗುತ್ತದೆ. ಸುಮಾರು 1 ಲಕ್ಷಕ್ಕೂ ಅಧಿಕ ಫಲಾನುಭವಿಗಳು ಭಾಗಿಯಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿರುವ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ದಿ ಹಾಗೂ ಜೀವನೋಪಾಯ ಸಚಿವ ಹಾಗೂ ಕಾರ್ಯಕ್ರಮದ ರೂವಾರಿ ಡಾ. ಶರಣ್ ಪ್ರಕಾಶ್ ಪಾಟೀಲ್ ಅವರು, ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಾಹಾರ ಹಾಗೂ ಮೂಲಭೂತ ವ್ಯವಸ್ಥೆ ಒದಗಿಸಲು ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳಿನ್ನು ಮಾಡಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾಲ್ದೀವ್ಸ್  ಮೋದಿ ನಿಂದನೆ ಖಂಡನೀಯ; ನಮ್ಮ ನಡವಳಿಕೆ ಶೋಚನೀಯ

ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ರಸ್ತೆ ಸಾರಿಗೆ ನಿಗಮ ಮತ್ತ ಖಾಸಗಿ ಒಡೆತನದ ಬಸ್ ಹಾಗೂ ಇತರೆ ವಾಹನಗಳ ಸೌಲಭ್ಯವನ್ನು ಕಲ್ಪಿಸಲಾಗಿದೆ. ಪ್ರತಿ ಬಸ್​ಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಪ್ರತಿ ವಿದ್ಯಾರ್ಥಿಯ ಹೆಸರು ಮತ್ತು ಮೊಬೈಲ್ ನಂಬರ್ ಸಂಗ್ರಹಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಏನಿದು ಯೋಜನೆ

ಪದವೀಧರರಿಗೆ ಪ್ರತಿ ತಿಂಗಳು 3,000 ರೂಪಾಯಿ ಹಾಗೂ ಡಿಪ್ಲೋಮಾ ಪದವೀಧರರಿಗೆ 1,500 ರೂಪಾಯಿ ನೀಡಲಾಗುತ್ತದೆ. ಈ ಉದ್ಯೋಗಭತ್ಯೆಯನ್ನು ಎರಡು ವರ್ಷಗಳ ವರೆಗೆ ಮಾತ್ರ ನೀಡಲಾಗುತ್ತದೆ. 2 ವರ್ಷಕ್ಕೂ ಮುನ್ನ ಫಲಾನುಭವಿಗೆ ಉದ್ಯೋಗ ಸಿಕ್ಕಲ್ಲಿ ಯೋಜನೆಯಡಿ ಬರುವ ಹಣ ನಿಲ್ಲಿಸಲಾಗುತ್ತದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

ಛಲಬಿಡದೆ ಬರಪರಿಹಾರ ತಂದ ಕಾಂಗ್ರೆಸ್‌ಗೆ ಜನ ಮೆಚ್ಚುಗೆ; ಯಾರು ಏನಂದರು?

ಬಿಜೆಪಿ ನಾಯಕರು ಎಷ್ಟೇ ಸುಳ್ಳು ಹೇಳಿದರೂ ಕುಗ್ಗದೆ, ಸುಪ್ರೀಂ ಕೋರ್ಟ್ ಮೆಟ್ಟಿಲನ್ನೂ...

26/11 ದಾಳಿಯ ಉಗ್ರ ಕಸಬ್‌ನನ್ನು ಗಲ್ಲಿಗೇರಿಸಲು ವಾದ ಮಂಡಿಸಿದ್ದ ವಕೀಲ ಮುಂಬೈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಮುಂಬೈನ 26/11ರ ಭಯೋತ್ಪಾದನಾ ದಾಳಿಯಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿದ್ದ ವಕೀಲ ಉಜ್ವಲ್...

ಕುಮಾರಣ್ಣನ ಜೇಬಲ್ಲಿದ್ದ ‘ಪೆನ್‌ಡ್ರೈವ್‌’ನಲ್ಲಿ ಏನಿತ್ತು ಎಂಬುದು ಈಗ ಗೊತ್ತಾಯ್ತು: ಡಿ ಕೆ ಶಿವಕುಮಾರ್

ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಜೆಡಿಎಸ್ ಸಂಸದ ಹಾಗೂ ಹಾಸನ...