ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರನ್ನು ಮಂಗಳವಾರ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.
ವೈಎಸ್‌ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದ ಬಳಿಕ ಶರ್ಮಿಳಾ ಅವರು ಕಳೆದ ಜನವರಿ 4 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆಂಧ್ರಪ್ರದೇಶದ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ ಒಂದು ದಿನದ ನಂತರ ಕಾಂಗ್ರೆಸ್ ವೈ ಎಸ್ ಶರ್ಮಿಳಾ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಅಲ್ಲದೇ, ಈ ನೇಮಕದ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಟ್ವೀಟ್ ಮಾಡಿದೆ.
Congress President Shri @Kharge has appointed Smt. @realyssharmila as the President of the @INC_Andhra with immediate effect.
Shri @Kharge has also appointed Shri @RudrarajuGidugu, the outgoing PCC President, as a special invitee to the Congress Working Committee. pic.twitter.com/xB2TRTKO19
— Congress (@INCIndia) January 16, 2024
ಅಧ್ಯಕರಾಗಿ ನೇಮಕಗೊಂಡ ಬಳಿಕ ಟ್ವೀಟ್ ಮಾಡಿರುವ ವೈ ಎಸ್ ಶರ್ಮಿಳಾ, ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡುವ ಮೂಲಕ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಕೆ ಸಿ ವೇಣುಗೋಪಾಲ್ ಅವರಿಗೆ ಧನ್ಯವಾದಗಳು. ಸಂಪೂರ್ಣ ಬದ್ಧತೆ ಮತ್ತು ಸಮಗ್ರತೆಯೊಂದಿಗೆ ಆಂಧ್ರಪ್ರದೇಶ ರಾಜ್ಯದಲ್ಲಿ ಪಕ್ಷವನ್ನು ಅದರ ಹಿಂದಿನ ವೈಭವಕ್ಕೆ ಮರುನಿರ್ಮಾಣ ಮಾಡಲು ನಿಷ್ಠೆಯಿಂದ ಕೆಲಸ ಮಾಡುತ್ತೇನೆ. ಪ್ರತಿಯೊಬ್ಬ ಕಾಂಗ್ರೆಸ್‌ನ ಕಾರ್ಯಕರ್ತರೊಂದಿಗೆ ಸೇರಿ ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ. ಎಲ್ಲರ ಬೆಂಬಲವನ್ನೂ ಕೋರುತ್ತೇನೆ” ಎಂದು ತಿಳಿಸಿದ್ದಾರೆ.
I thank hon’ble @kharge ji , #SoniaGandhi ji , @RahulGandhi ji , and @kcvenugopalmp ji for trusting me with post of the president of @INC_Andhra Pradesh.
I promise to work faithfully towards rebuilding the party to its past glory in the State of Andhra Pradesh with total… https://t.co/C6K8cQEz1F— YS Sharmila (@realyssharmila) January 16, 2024
ವೈ ಎಸ್ ಶರ್ಮಿಳಾ ಅವರು, ಸಹೋದರ, ಸಿಎಂ ವೈಎಸ್ ಜಗನ್‌ಮೋಹನ್ ರೆಡ್ಡಿ ಜೊತೆಗಿನ ಭಿನ್ನಾಭಿಪ್ರಾಯಗಳ ಬಳಿಕ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಟ್ಟಿದ್ದರು. ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದರು. ಬಳಿಕ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಲ್ಲದೇ, ತಮ್ಮ ಪಕ್ಷವನ್ನು ವಿಲೀನಗೊಳಿಸಿದ್ದರು.