ಆಂಧ್ರಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ವೈ ಎಸ್ ಶರ್ಮಿಳಾ ನೇಮಕ

Date:

Advertisements

ಆಂಧ್ರ ಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ವೈ.ಎಸ್.ಶರ್ಮಿಳಾ ಅವರನ್ನು ಮಂಗಳವಾರ ರಾಜ್ಯ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಿದೆ.

ವೈಎಸ್‌ಆರ್ ತೆಲಂಗಾಣ ಪಕ್ಷವನ್ನು (ವೈಎಸ್‌ಆರ್‌ಟಿಪಿ) ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸುವುದಾಗಿ ಘೋಷಿಸಿದ ಬಳಿಕ ಶರ್ಮಿಳಾ ಅವರು ಕಳೆದ ಜನವರಿ 4 ರಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಆಂಧ್ರಪ್ರದೇಶದ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನಕ್ಕೆ ಗಿಡುಗು ರುದ್ರರಾಜು ರಾಜೀನಾಮೆ ನೀಡಿದ ಒಂದು ದಿನದ ನಂತರ ಕಾಂಗ್ರೆಸ್ ವೈ ಎಸ್ ಶರ್ಮಿಳಾ ಅವರನ್ನು ನೂತನ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಅಲ್ಲದೇ, ಈ ನೇಮಕದ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಟ್ವೀಟ್ ಮಾಡಿದೆ.

ಅಧ್ಯಕರಾಗಿ ನೇಮಕಗೊಂಡ ಬಳಿಕ ಟ್ವೀಟ್ ಮಾಡಿರುವ ವೈ ಎಸ್ ಶರ್ಮಿಳಾ, ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡುವ ಮೂಲಕ ನನ್ನ ಮೇಲೆ ನಂಬಿಕೆ ಇಟ್ಟಿದ್ದಕ್ಕಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಕೆ ಸಿ ವೇಣುಗೋಪಾಲ್ ಅವರಿಗೆ ಧನ್ಯವಾದಗಳು. ಸಂಪೂರ್ಣ ಬದ್ಧತೆ ಮತ್ತು ಸಮಗ್ರತೆಯೊಂದಿಗೆ ಆಂಧ್ರಪ್ರದೇಶ ರಾಜ್ಯದಲ್ಲಿ ಪಕ್ಷವನ್ನು ಅದರ ಹಿಂದಿನ ವೈಭವಕ್ಕೆ ಮರುನಿರ್ಮಾಣ ಮಾಡಲು ನಿಷ್ಠೆಯಿಂದ ಕೆಲಸ ಮಾಡುತ್ತೇನೆ. ಪ್ರತಿಯೊಬ್ಬ ಕಾಂಗ್ರೆಸ್‌ನ ಕಾರ್ಯಕರ್ತರೊಂದಿಗೆ ಸೇರಿ ಒಟ್ಟಿಗೆ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ. ಎಲ್ಲರ ಬೆಂಬಲವನ್ನೂ ಕೋರುತ್ತೇನೆ” ಎಂದು ತಿಳಿಸಿದ್ದಾರೆ.

Advertisements

ವೈ ಎಸ್ ಶರ್ಮಿಳಾ ಅವರು, ಸಹೋದರ, ಸಿಎಂ ವೈಎಸ್ ಜಗನ್‌ಮೋಹನ್ ರೆಡ್ಡಿ ಜೊತೆಗಿನ ಭಿನ್ನಾಭಿಪ್ರಾಯಗಳ ಬಳಿಕ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಟ್ಟಿದ್ದರು. ಇತ್ತೀಚೆಗೆ ನಡೆದ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಅವರು ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ್ದರು. ಬಳಿಕ ಕಾಂಗ್ರೆಸ್‌ಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಲ್ಲದೇ, ತಮ್ಮ‌ ಪಕ್ಷವನ್ನು ವಿಲೀನಗೊಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X