ಅಭಿವೃದ್ಧಿಯಲ್ಲಿ ಶೂನ್ಯ ಸಾಧನೆ; ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಲಿ: ಆರ್‌.ಅಶೋಕ್ ಒತ್ತಾಯ

Date:

ಕಾಂಗ್ರೆಸ್‌ ಸರ್ಕಾರ ಒಂದು ವರ್ಷದಲ್ಲಿ ಖಜಾನೆಯನ್ನು ಸಂಪೂರ್ಣ ಖಾಲಿ ಮಾಡಿದೆ. ರಾಜ್ಯ ಕೊಲೆಗಡುಕರ ಸ್ವರ್ಗವಾಗಿ ಬದಲಾಗಿದೆ. ಇಂತಹ ಶೂನ್ಯ ಸಾಧನೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ರಾಜ್ಯಪಾಲರು ಈ ಸರ್ಕಾರವನ್ನು ವಜಾ ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌ ಅಶೋಕ್ ಆಗ್ರಹಿಸಿದರು.

- Advertisement -

ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸರ್ಕಾರದ ಅವಧಿ ಮುಗಿಯಿತೆಂಬ ಕಾರಣಕ್ಕೆ ಜನರಿಗೆ ಧನ್ಯವಾದ ತಿಳಿಸಿದ್ದಾರೆಯೋ ಅಥವಾ ಕಾನೂನು ಸುವ್ಯವಸ್ಥೆ ಹಾಳು ಮಾಡಿರುವ ಕೊಲೆಗಾರರಿಗೆ ಧನ್ಯವಾದ ಹೇಳಿದ್ದಾರೆಯೋ ಗೊತ್ತಿಲ್ಲ” ಎಂದು ಕುಟುಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ನೇಹಾ, ಅಂಜಲಿ ಕೊಲೆಯಾದರು. ಇನ್ನು ಯಾವ ಹೆಣ್ಣುಮಕ್ಕಳು ಕೊಲೆಯಾಗುತ್ತಾರೆ ಎಂಬ ಆತಂಕವಿದೆ. ಹೆಣ್ಣುಮಕ್ಕಳು ಕಾಲೇಜಿಗೆ ಹೋದರೆ ಗ್ಯಾರಂಟಿ ಇಲ್ಲ, ಮನೆಯಿಂದ ಆಚೆ ಬಂದರೆ ಗ್ಯಾರಂಟಿ ಇಲ್ಲ. ಸರ್ಕಾರ ಎಷ್ಟು ಉಚಿತ ನೀಡಿದರೂ ಬದುಕುವ ಗ್ಯಾರಂಟಿಯೇ ಇಲ್ಲ” ಎಂದು ಟೀಕಿಸಿದರು.

“ಅಂಜಲಿಯ ಕೊಲೆಯ ಹಿಂದೆ ಪೊಲೀಸರ ಲೋಪವಿದೆ ಎಂದು ಗೃಹ ಸಚಿವರೇ ಹೇಳಿದ್ದಾರೆ ಎಂದ ಮೇಲೆ ಸರ್ಕಾರ ಯಾಕೆ ಬದುಕಿರಬೇಕು? ಹಿಂದೂಗಳ ಮಾರಣಹೋಮವಾದರೂ ಇಲ್ಲಿ ಕೇಳುವವರಿಲ್ಲ. ಬೆಂಗಳೂರಿನಲ್ಲಿ ಮುಸ್ಲಿಮರು ಪೊಲೀಸ್‌ ಠಾಣೆಗೆ ಹೋಗಿ ಕಪಾಳಮೋಕ್ಷ ಮಾಡುವ ಸ್ಥಿತಿಯಿದೆ. ಕೊಲೆಗಾರರನ್ನು ನೇಣಿಗೇರಿಸುವ ಬದಲು ಈ ಸರ್ಕಾರವನ್ನೇ ನೇಣಿಗೇರಿಸಬೇಕು. ಈ ಸರ್ಕಾರ ಬಂದ ನಂತರ ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್‌ ಹೇಳಲು ಅನುಮತಿ ಸಿಕ್ಕಿದೆ. ಹನುಮಾನ್‌ ಚಾಲೀಸ ಕೇಳಿದರೆ, ಜೈ ಶ್ರೀರಾಮ್‌ ಎಂದರೆ ಹಲ್ಲೆಯಾಗುತ್ತದೆ” ಎಂದು ದೂರಿದರು.

“ಇತಿಹಾಸದಲ್ಲೇ ಮೊದಲ ಬಾರಿಗೆ ಕೇಂದ್ರ ಸರ್ಕಾರದಿಂದ ದಾಖಲೆಯ ಬರ ಪರಿಹಾರ ಸಿಕ್ಕಿದೆ. ಆದರೆ ಇನ್ನೂ 2 ಲಕ್ಷ ರೈತರಿಗೆ ಪರಿಹಾರ ನೀಡಬೇಕಿದೆ. ಕೆಲವರಿಗೆ 300, 400 ರೂ. ಪರಿಹಾರ ನೀಡಿದ್ದಾರೆ. ಬಿತ್ತನೆ ಮಾಡಬೇಡಿ ಎಂದು ಮೊದಲಿಗೆ ಹೇಳಿ, ಈಗ ಬಿತ್ತನೆ ಮಾಡದವರಿಗೆ ಪರಿಹಾರ ನೀಡುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಶಿಕ್ಷಣ ಸಚಿವ ಮಧು ಬಂಗಾರಪ್ಪ ಕನ್ನಡ ಮಾತಾಡಲು ಬರಲ್ಲ ಎಂದು ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶಕ್ಕೂ ಬರ ಬಂದಿದೆ. 20 ಕೃಪಾಂಕ ನೀಡಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ್ದಾರೆ. ಹೀಗೆ ಓದುವುದನ್ನೂ ಉಚಿತ ಮಾಡಿ ಓದದೆಯೇ ಪಾಸು ಮಾಡುವ ಯೋಜನೆ ತಂದಿದ್ದಾರೆ. ಹಾಗಾದರೆ ಕಷ್ಟಪಟ್ಟು ಓದಿದ ವಿದ್ಯಾರ್ಥಿಗಳಿಗೆ ಬೆಲೆ ಇಲ್ಲವೇ? ಸಿಇಟಿ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದ್ದಾರೆ” ಎಂದರು.

ಲೂಟಿ ಸರ್ಕಾರ

“ಒಂದು ವರ್ಷದಲ್ಲಿ ಈ ಸರ್ಕಾರ ಚೆನ್ನಾಗಿ ಲೂಟಿ ಮಾಡಿದೆ. ಬ್ರ್ಯಾಂಡ್‌ ಬೆಂಗಳೂರು ಮಾಡುತ್ತೇವೆಂದು ಹೇಳಿ ನೀರಿನ ಸಮಸ್ಯೆ ತಂದು ಬ್ಯಾಡ್‌ ಬೆಂಗಳೂರು ಮಾಡಿದ್ದಾರೆ. 16 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುರಂಗ ರಸ್ತೆ ಮಾಡುತ್ತೇವೆಂದು ಕಮಿಶನ್‌ ಹೊಡೆಯಲು ಯೋಜನೆ ರೂಪಿಸಿದ್ದಾರೆ. ಯಾವುದೇ ಡೆವಲಪರ್‌ ಬಂದರೂ ಚದರ ಅಡಿಗೆ 100 ರೂ. ಕಾಂಗ್ರೆಸ್‌ ಟ್ಯಾಕ್ಸ್‌ ಎಂಬ ಕಮಿಶನ್‌ ಕೊಡಬೇಕಾಗುತ್ತದೆ. ಈ ಕಮಿಷನ್‌ ಸಾಗಿಸಲು ಸುರಂಗ ನಿರ್ಮಿಸಲು ಯೋಜನೆ ಮಾಡಿದ್ದಾರೆ. ಇಂತಹ ಸರ್ಕಾರ ಇದ್ದರೂ ಒಂದೇ, ಹೋದರೂ ಒಂದೇ” ಎಂದು ಹರಿಹಾಯ್ದರು.

ಕಾಂಗ್ರೆಸ್‌ ಶಾಸಕರೇ ಸರ್ಕಾರ ಬೀಳಿಸುತ್ತಾರೆ

“ಕಾಂಗ್ರೆಸ್‌ ಸರ್ಕಾರವನ್ನು ಬೀಳಿಸಲು ಅವರ ಶಾಸಕರೇ ತಯಾರಾಗಿದ್ದಾರೆ. ಒಂದು ವರ್ಷ ಶಾಸಕರಿಗೆ ಅನುದಾನ ನೀಡದಿದ್ದರಿಂದ ಅಭಿವೃದ್ಧಿ ಕಾರ್ಯ ನಡೆದಿಲ್ಲ. ಸರ್ಕಾರ ಬೀಳಿಸಲು ಅವರೇ ಮುಹೂರ್ತ ನಿಗದಿ ಮಾಡಲಿದ್ದಾರೆ. ಈಗ ಕೌಂಟ್‌ಡೌನ್‌ ಶುರುವಾಗಿದೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...