ಅಭಿವೃದ್ಧಿ ಶೂನ್ಯ‌, ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ: ಆರ್‌.ಅಶೋಕ್

Date:

ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್‌ಗೆ ಮತ ಬಂದಿಲ್ಲ. ಸರ್ಕಾರ ಪಾಪರ್‌ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್‌ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು.

- Advertisement -

ಬೆಂಗಳೂರಿನಲ್ಲಿ ಸೋಮವಾರ (ಜೂ.10) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ ಸರ್ಕಾರ ಮತಕ್ಕಾಗಿ ಗ್ಯಾರಂಟಿ ಜಾರಿ ಮಾಡಿದ್ದರಿಂದ ಈಗ ಸಾಲ ಮಾಡಿ ಸಂಬಳ ಕೊಡುವ ಪರಿಸ್ಥಿತಿ ಬಂದಿದೆ. ಗ್ಯಾರಂಟಿಗಳಿಂದ ಲೋಕಸಭೆ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗಿಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಪಾಪರ್‌ ಆಗಿರುವ ಸರ್ಕಾರ ಎಲ್ಲ ಕಡೆ ಬಿಲ್‌ ಪಾವತಿ ಬಾಕಿ ಇರಿಸಿಕೊಂಡಿದೆ. ಬಿಜೆಪಿ ಸರ್ಕಾರವಿದ್ದಾಗ ಶಾಸಕರು ಶಾಲೆ, ಆಸ್ಪತ್ರೆ, ನೀರಾವರಿ ಯೋಜನೆ ತಂದರು. ಕಾಂಗ್ರೆಸ್‌ನ ಶಾಸಕರು ಏನೂ ತಂದಿಲ್ಲವೆಂದು ಜನರೇ ಹೀಯಾಳಿಸುತ್ತಿದ್ದಾರೆ. ಅಭಿವೃದ್ಧಿ ಇಲ್ಲದೆ ಜನರು ಶಾಸಕರು ಹಾಗೂ ಸಚಿವರ ಮಾತಿಗೆ ವಿರುದ್ಧವಾಗಿ ಲೋಕಸಭೆ ಚುನಾವಣೆಯಲ್ಲಿ ಮತ ಚಲಾಯಿಸಿದ್ದಾರೆ” ಎಂದರು.

“ಕಾಂಗ್ರೆಸ್‌ ಸರ್ಕಾರ ದಲಿತರ ಹಣ ಲೂಟಿ ಹೊಡೆದು, ಶೂನ್ಯ ಸಾಧನೆ ಮಾಡಿ, ಜನರ ಪಾಲಿಗೆ ಸತ್ತುಹೋಗಿದೆ. ಒಬ್ಬ ಸಚಿವರೂ ಮಳೆ ಹಾನಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿಲ್ಲ. ಲೋಕಸಭೆ ಚುನಾವಣೆಯಲ್ಲಿ ಸಚಿವರಿರುವ ಕಡೆ ಹಿನ್ನೆಡೆಯಾಗಿದ್ದು, ಸ್ಥಾನ ಕಳೆದುಕೊಳ್ಳುವ ಆತಂಕವಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರ ಸಹೋದರ ಡಿ.ಕೆ.ಸುರೇಶ್‌ ಕನಕಪುರದಲ್ಲಿ ಹೀನಾಯವಾಗಿ ಸೋತಿದ್ದಾರೆ” ಎಂದು ಟೀಕಿಸಿದ್ದಾರೆ.

“ಈಗಾಗಲೇ ತೆರಿಗೆ ಭಾರದಿಂದ ಜನರು ಸುಸ್ತಾಗಿದ್ದಾರೆ. ಕಸಕ್ಕೂ ತೆರಿಗೆ ಹಾಕುವುದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ. ಮುಂದೆ ಹಾಲು, ಆಲ್ಕೋಹಾಲ್‌, ಬಸ್‌ ಟಿಕೆಟ್‌ ದರವನ್ನೂ ಹೆಚ್ಚಿಸಲು ಕಾಂಗ್ರೆಸ್‌ ಸಿದ್ಧತೆ ಮಾಡಿಕೊಂಡಿದೆ. ಸಿಎಂ ಸಿದ್ದರಾಮಯ್ಯ ಇನ್ನಷ್ಟು ಹೊಸ ತೆರಿಗೆಗಳನ್ನು ವಿಧಿಸಲಿದ್ದಾರೆ. ಇದರ ವಿರುದ್ಧವೂ ಬಿಜೆಪಿ ಪ್ರತಿಭಟಿಸಲಿದೆ. ಅಲ್ಪಸಂಖ್ಯಾತರು ಏನು ಮಾಡಿದರೂ ನಡೆಯುತ್ತದೆ ಎಂಬ ನಂಬಿಕೆ ಬಂದಿದೆ. ಹಿಂದೂಗಳ ಮೇಲೆ ಹಲ್ಲೆಗಳು ಹೆಚ್ಚಾಗುತ್ತಿದೆ ಹಾಗೂ ಮಾಫಿಯಾ ರೌಡಿಗಳಿಗೆ ಭಯ ಕಡಿಮೆಯಾಗಿದೆ. ಗೃಹ ಇಲಾಖೆ ದಿಕ್ಕು ದೆಸೆಯಿಲ್ಲದಂತೆ ನಡೆಯುತ್ತಿದೆ. ಜನರು ತಮ್ಮನ್ನು ತಾವೇ ರಕ್ಷಣೆ ಮಾಡಿಕೊಳ್ಳುವ ಸ್ಥಿತಿ ಬಂದಿದೆ” ಎಂದರು.

“ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಹಗರಣದ ಹಿಂದೆ ಕೇವಲ ಬಿ.ನಾಗೇಂದ್ರ ಇಲ್ಲ. ಇದರ ಹಿಂದೆ ದೊಡ್ಡ ನಾಯಕರೇ ಇದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಗೊತ್ತಿದ್ದೇ ಈ ಹಗರಣ ನಡೆದಿದೆ. ಇದರ ಜೊತೆ ಇನ್ನಷ್ಟು ಸಚಿವರೂ ಸೇರಿದ್ದಾರೆ. ಆದ್ದರಿಂದ ಮುಖ್ಯಮಂತ್ರಿ ಕೂಡ ರಾಜೀನಾಮೆ ನೀಡಬೇಕು” ಎಂದು ಆಗ್ರಹಿಸಿದರು.

“ನರೇಂದ್ರ ಮೋದಿಯವರು ಹಿಂದುಳಿದ ವರ್ಗದ ನಾಯಕರಾಗಿದ್ದು, ಸಚಿವ ಸಂಪುಟದಲ್ಲಿ ಎಲ್ಲ ಜಾತಿ ವರ್ಗಕ್ಕೆ ಸ್ಥಾನಮಾನ ನೀಡಿದ್ದಾರೆ. ಕರ್ನಾಟಕದ ಸಂಸದರಿಗೂ ಅವಕಾಶ ನೀಡಿರುವುದು ಅಭಿನಂದನೀಯ. ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಕರ್ನಾಟಕ ಹೆಬ್ಬಾಗಿಲಾಗಿದ್ದು, ಇಲ್ಲಿಗೆ ಹೆಚ್ಚು ಅವಕಾಶ ನೀಡಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...