(ಮುಂದುವರಿದ ಭಾಗ..) ಜಲಾಶಯ, ನದಿಗಳಿಗೆ ನೀರು ಬರುವುದು ಕಡಿಮೆಯಾಗಿದೆ. ಹವಾಮಾನ ಬದಲಾವಣೆಯ ಕಾರಣದಿಂದ ಬರುವ ಅಕಾಲಿಕ ಮಳೆ, ಮೇಘ ಸ್ಫೋಟಗಳು ಪ್ರವಾಹಗಳಿಗೆ ಕಾರಣವಾಗುತ್ತಿವೆ. ಬೆಂಗಳೂರು ನಗರದಲ್ಲೂ ಪ್ರವಾಹ ಉಂಟಾಗುತ್ತಿರುವುದಕ್ಕೆ ಅಲ್ಲಿನ ಕೆರೆ ಕಾಲುವೆಗಳನ್ನು ಅತಿಕ್ರಮಿಸಿರುವುದೇ ಕಾರಣ. 2001ರಿಂದ 2023ರ ನಡುವೆ 16 ವರ್ಷಗಳಲ್ಲಿ ರಾಜ್ಯವು ಬರಗಾಲವನ್ನು ಕಂಡಿದೆ. ಕೆಲವು ವರ್ಷಗಳಲ್ಲಿ ಅತಿವೃಷ್ಟಿಯಾಗಿ ಪ್ರವಾಹಗಳೂ ಬಂದಿವೆ. ರಾಜ್ಯದ ನೀರಿನ ಹಂಚಿಕೆ- ಬಳಕೆಯಲ್ಲಿ ಕೃಷಿ ಮತ್ತು ಕುಡಿಯುವ ನೀರಿನ ಸರಬರಾಜು ಹಾಗೂ ಬಳಕೆಯಲ್ಲಿ ಬಹಳಷ್ಟು ಅಸಮಾನತೆ ಇದೆ. ಕುಡಿಯುವ ನೀರಿನ…

ಜನಾರ್ದನ ಕೆಸರಗದ್ದೆ
‘ಪ್ರೀತಿಯ ಗಾಳಿ ಬೀಸುತಿದೆ ಹಟ್ಟಿ ಮೊಹಲ್ಲಾಗಳ ನಡುವೆ’ ಎಂಬ ಖ್ಯಾತ ಹಾಡಿನ ರಚನಾಕಾರರಾದ ಜನಾರ್ದನ ಕೆಸರಗದ್ದೆಯವರು ಮೂರು ದಶಕಗಳಿಂದ ಸಾಮಾಜಿಕ ಕಾರ್ಯಕರ್ತರಾಗಿ ನಾಡಿನ ಹಲವು ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. 'ಸಂವಾದ' ಎಂಬ ಸರಕಾರೇತರ ಸಂಸ್ಥೆಯಲ್ಲಿ ಕಾರ್ಯಕ್ರಮ ಸಂಯೋಜಕರಾಗಿ ಕೆಲಸ ಮಾಡುತ್ತಿರುವ ಜನಾರ್ದನ, ಯುವಜನರನ್ನು ಸಬಲೀಕರಣಗೊಳಿಸುವ ಕಾಯಕದಲ್ಲಿ ನಿರತರಾದವರು. ಕೃಷಿ, ಪರಿಸರ, ಯುವ ಸಬಲೀಕರಣ, ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಪರಿಣತರು. ಸರಕಾರದ ಇಲಾಖೆಗಳಿಗೆ, ಸಂಘ ಸಂಸ್ಥೆಗಳಿಗೆ, ಆಸ್ಪತ್ರೆಗಳ ಸಮಿತಿಗಳಿಗೆ, ವಿವಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಹೋಗಿ ತಮ್ಮ ತಮ್ಮ ಅನುಭವವನ್ನು ಹಂಚಿಕೊಂಡವರು. ಹೊಸ ಕಾಲಕ್ಕೆ ಹೊಸ ಹಾಡುಗಳನ್ನು ಸೃಷ್ಟಿಸಿರುವುದರಲ್ಲಿ ಜನಾರ್ದನ ಅವರ ಹಿರಿಮೆಯಿದೆ.