ಮನುಷ್ಯರ ಹಸ್ತಕ್ಷೇಪದಿಂದಾಗಿ ಹೆಚ್ಚಿನ ಪ್ರಮಾಣದ ಪರಿಸರ ನಾಶ ಆರಂಭವಾಗಿದ್ದು ಕೈಗಾರಿಕೀಕರಣ ಮತ್ತು ಹಸಿರು ಕ್ರಾಂತಿಗಳ ನಂತರವೇ. ಇಂದು ರಸ್ತೆ, ಹೆದ್ದಾರಿ, ಹೊಸ ರೈಲು ಮಾರ್ಗ, ವಿಮಾನ ನಿಲ್ದಾಣ, ನಗರೀಕರಣ-ಟೌನ್‌ಶಿಪ್‌ಗಳು ಇತ್ಯಾದಿ ಮೂಲಭೂತ ಸೌಕರ್ಯಗಳ ನಿರ್ಮಾಣದಿಂದ ಕೂಡ ಪರಿಸರ ನಾಶ ಆಗುತ್ತಿದೆ. ಪರಿಸರ ನಾಶ ಆಗುತ್ತಿದೆ, ಅದನ್ನು ಸಂರಕ್ಷಿಸಬೇಕು ಎಂಬ ಪ್ರಜ್ಞೆ ಮೂಡಿದ್ದು ಕಳೆದ ಐವತ್ತು-ಅರವತ್ತು ವರ್ಷಗಳಲ್ಲಷ್ಟೇ. ‘ಸೈಲೆಂಟ್ ಸ್ಪ್ರಿಂಗ್ಸ್ʼ ಕೃತಿ 1962ರಲ್ಲಿ ಬಂತಾದರೂ ‘ಲಿಮಿಟ್ ಟು ಗ್ರೋತ್ʼ, ‘ಸ್ಮಾಲ್ ಈಸ್ ಬ್ಯೂಟಿಫುಲ್ʼ, ‘ದ ಎಂಡ್ ಆಫ್ ನೇಚರ್ʼ,…

ಜನಾರ್ದನ ಕೆಸರಗದ್ದೆ
‘ಪ್ರೀತಿಯ ಗಾಳಿ ಬೀಸುತಿದೆ ಹಟ್ಟಿ ಮೊಹಲ್ಲಾಗಳ ನಡುವೆ’ ಎಂಬ ಖ್ಯಾತ ಹಾಡಿನ ರಚನಾಕಾರರಾದ ಜನಾರ್ದನ ಕೆಸರಗದ್ದೆಯವರು ಮೂರು ದಶಕಗಳಿಂದ ಸಾಮಾಜಿಕ ಕಾರ್ಯಕರ್ತರಾಗಿ ನಾಡಿನ ಹಲವು ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ. 'ಸಂವಾದ' ಎಂಬ ಸರಕಾರೇತರ ಸಂಸ್ಥೆಯಲ್ಲಿ ಕಾರ್ಯಕ್ರಮ ಸಂಯೋಜಕರಾಗಿ ಕೆಲಸ ಮಾಡುತ್ತಿರುವ ಜನಾರ್ದನ, ಯುವಜನರನ್ನು ಸಬಲೀಕರಣಗೊಳಿಸುವ ಕಾಯಕದಲ್ಲಿ ನಿರತರಾದವರು. ಕೃಷಿ, ಪರಿಸರ, ಯುವ ಸಬಲೀಕರಣ, ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಲ್ಲಿ ಪರಿಣತರು. ಸರಕಾರದ ಇಲಾಖೆಗಳಿಗೆ, ಸಂಘ ಸಂಸ್ಥೆಗಳಿಗೆ, ಆಸ್ಪತ್ರೆಗಳ ಸಮಿತಿಗಳಿಗೆ, ವಿವಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿ ಹೋಗಿ ತಮ್ಮ ತಮ್ಮ ಅನುಭವವನ್ನು ಹಂಚಿಕೊಂಡವರು. ಹೊಸ ಕಾಲಕ್ಕೆ ಹೊಸ ಹಾಡುಗಳನ್ನು ಸೃಷ್ಟಿಸಿರುವುದರಲ್ಲಿ ಜನಾರ್ದನ ಅವರ ಹಿರಿಮೆಯಿದೆ.